ದೇಶಾದ್ಯಂತ ಮತ್ತೆ ಕರೋನ ಹೆಚ್ಚಳವಾಗುತ್ತಿದ್ದ ಕೇರಳ ಸರ್ಕಾರ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಾದ್ಯಂತ ಫೇಸ್‌ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.
ಸಾರ್ವಜನಿಕ ಸ್ಥಳಗಳಲ್ಲಿ, ಅವರ ಕೆಲಸದ ಸ್ಥಳದಲ್ಲಿ, ಸಭೆ ಸಮಾರಂಭಗಳಲ್ಲಿ ಮತ್ತು ಪ್ರಯಾಣಿಸುವಾಗ ಕಡ್ಡಾಯ ಮಾಸ್ಕ್ ಧರಿಸಬೇಕಾಗುತ್ತದೆ. ಆದೇಶವನ್ನು ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗುತ್ತದೆ. ಆದರೆ, ಸರ್ಕಾರದ ಆದೇಶದಲ್ಲಿ ಮಾಸ್ಕ್ ಧರಿಸದಿದ್ದಕ್ಕೆ ಎಷ್ಟು ದಂಡ ವಿಧಿಸುತ್ತದೆ ಎಂಬುದನ್ನು ತಿಳಿಸಿಲ್ಲ.
ಏಪ್ರಿಲ್ 27 ರ ಬುಧವಾರದಂದು ಭಾರತದಲ್ಲಿ 2,947 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿವೆ. ಇದು ಮಂಗಳವಾರಕ್ಕೆ ಹೋಲಿಕೆ ಮಾಡಿದರೆ 444 ಪ್ರಕರಣಗಳ ಹೆಚ್ಚಳ ಕಂಡಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 5,05,065 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ.

ಏಪ್ರಿಲ್ 27 ರ ಬುಧವಾರದ ಹೊತ್ತಿಗೆ, ಕೇರಳದಲ್ಲಿ ಒಟ್ಟು 2,660 ಕೋವಿಡ್ -19 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 255 ಸೋಂಕು ತಗುಲಿದ್ದು, ಒಟ್ಟು 5.26 ಕೋಟಿ ಜನರಿಗೆ ಲಸಿಕೆ ಹಾಕಲಾಗಿದೆ.