• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಕ್ಫ್ ವಿರುದ್ಧ ಕೆರಳಿದ ಕೇಸರಿ ಪಡೆ:ಜಮೀರ್‌ ರಾಜಿನಾಮೆಗೆ ಬಿಜೆಪಿ ಆಗ್ರಹ

ಪ್ರತಿಧ್ವನಿ by ಪ್ರತಿಧ್ವನಿ
November 4, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು,: ವಕ್ಫ್ ಭೂಮಿ ವಿಚಾರವಾಗಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರನ್ನು ಸಂಪುಟದಿಂದ ಕೈಬಿಡುವುದು, ತಕ್ಷಣವೇ ಗೆಜೆಟ್‌ ಅಧಿಸೂಚನೆ ಹಿಂಪಡೆಯುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಿದೆ.

ADVERTISEMENT

ರಾಜಧಾನಿ ಬೆಂಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಕಲಬುರಗಿ, ಬಳ್ಳಾರಿ, ರಾಯಚೂರು, ಕೊಪ್ಪಳ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿತು.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬಳ್ಳಾರಿಯಲ್ಲಿ ಪ್ರತಿಭಟನೆ ನಡೆಸಿದರೆ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಬೆಂಗಳೂರಿನ ಕೆಆರ್‌ಪುರಂ ಹೀಗೆ ಸಂಸದರು, ಶಾಸಕರು, ವಿಧಾನಪರಿಷತ್‌ ಸದಸ್ಯರು, ಮಾಜಿ ಶಾಸಕರು, ಪಕ್ಷದ ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಜಿಲ್ಲಾ ಕಚೇರಿ, ತಹಸೀಲ್ದಾರ್‌ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಿ ಸರ್ಕಾರದ ಮೇಲೆ ಟೀಕೆಗಳ ಸುರಿಮಳೆಗೈದರು.

ಬಳ್ಳಾರಿಯಲ್ಲಿ ವಿಜಯೇಂದ್ರ ಅವರಿಗೆ ಶಾಸಕ ಜನಾರ್ಧನ ರೆಡ್ಡಿ, ಮಾಜಿ ಸಚಿವ ಬಿ.ಶ್ರೀರಾಮುಲು, ಸಂಡೂರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು, ಸಂಸದ ಗೋವಿಂದ ಕಾರಜೋಳ ಮತ್ತಿತರರು ಸಾಥ್‌ ನೀಡಿದರು. ಈ ವೇಳೆ ಮಾತನಾಡಿದ ವಿಜಯೇಂದ್ರ, ಪ್ರಧಾನಿ ನರೇಂದ್ರಮೋದಿ ಅವರು ಈ ಹಿಂದೆ ವಿಧಾನಸಭೆ ಚುನಾವಣೆಯ ಪ್ರಚಾರದ ವೇಳೆ ಏನು ಭವಿಷ್ಯ ನುಡಿದಿದ್ದರೋ ಅದು ಇಂದು ಅಕ್ಷರಶಃ ಸತ್ಯವಾಗುತ್ತಿದೆ.ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದರೆ ನಿಮ ಆಸ್ತಿಗಳನ್ನು ಕಿತ್ತುಕೊಳ್ಳುತ್ತದೆ ಎಂದು ಹೇಳಿದ್ದು ಇಂದು ನಿಜವಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಇದುವರೆಗೂ ನೋಟಿಸ್‌‍ ಕೊಟ್ಟಿಲ್ಲ ಎಂದು ಹೇಳುತ್ತಿದ್ದ ಸರ್ಕಾರ ಈಗ ರೈತರು ಬೀದಿಗೆ ಬಂದ ಮೇಲೆ ನೋಟಿಸ್‌‍ ಕೊಡಬೇಡಿ ಎಂದು ಹೇಳಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಮತದಾರರು ತಿರುಗಿ ಬೀಳಬಹುದೆಂಬ ಭಯದಿಂದ ಈಗ ನೋಟಿಸ್‌‍ ನೀಡದಂತೆ ಸೂಚಿಸಿರುವುದಾಗಿ ಹೇಳುತ್ತಾರೆ. ಫಲಿತಾಂಶ ಬಂದ ನಂತರ ನೋಟಿಸ್‌‍ ಕೊಡುವುದಿಲ್ಲ ಎನ್ನುವುದಕ್ಕೆ ಗ್ಯಾರಂಟಿಯಾದರೂ ಏನು ಪ್ರಶ್ನಿಸಿದರು.

ಇದುವರೆಗೂ ನೋಟಿಸ್‌‍ ಕೊಟ್ಟಿಲ್ಲ ಎಂದು ಹೇಳುತ್ತಿದ್ದ ಸರ್ಕಾರ ಈಗ ರೈತರು ಬೀದಿಗೆ ಬಂದ ಮೇಲೆ ನೋಟಿಸ್‌‍ ಕೊಡಬೇಡಿ ಎಂದು ಹೇಳಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಮತದಾರರು ತಿರುಗಿ ಬೀಳಬಹುದೆಂಬ ಭಯದಿಂದ ಈಗ ನೋಟಿಸ್‌‍ ನೀಡದಂತೆ ಸೂಚಿಸಿರುವುದಾಗಿ ಹೇಳುತ್ತಾರೆ. ಫಲಿತಾಂಶ ಬಂದ ನಂತರ ನೋಟಿಸ್‌‍ ಕೊಡುವುದಿಲ್ಲ ಎನ್ನುವುದಕ್ಕೆ ಗ್ಯಾರಂಟಿಯಾದರೂ ಏನು ಪ್ರಶ್ನಿಸಿದರು.

ನಮ ಹೋರಾಟ ಯಾವುದೇ ವ್ಯಕ್ತಿ ಅಥವಾ ಧರ್ಮದ ವಿರುದ್ಧವಲ್ಲ. ನಮ ಹಿಂದೂಗಳ ಆಸ್ತಿ ಉಳಿಯಬೇಕೆಂಬುದೇ ನಮ ಕಳಕಳಿ. ರೈತರ ಕೃಷಿ ಜಮೀನು, ದೇವಸ್ಥಾನ, ಸಮುದಾಯ ಭವನ, ಕಟ್ಟಡಗಳು ಈಗ ಎಲ್ಲದಕ್ಕೂ ನೋಟಿಸ್‌‍ ಕೊಟ್ಟರೆ ನಾವು ಎಲ್ಲಿಗೆ ಹೋಗಬೇಕೆಂದು ವಿಜಯೇಂದ್ರ ಸಿಡಿಮಿಡಿಗೊಂಡರು. ಕೆ.ಆರ್‌.ಪುರಂನಲ್ಲಿ ಪ್ರತಿಭಟನೆ ನಡೆಸಿದ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ಹಿಂದೂಗಳಿಗೆ ಸೇರಿದ ಆಸ್ತಿಯನ್ನು ಕಿತ್ತುಕೊಂಡು ವಕ್‌್ಫಗೆ ಸೇರಿಸಲು ಸಚಿವ ಜಮೀರ್‌ ಅಹಮದ್‌ ಖಾನ್‌ಗೆ ಅಧಿಕಾರ ಕೊಟ್ಟವರು ಯಾರು? ಒಂದು ವೇಳೆ ವಕ್‌್ಫ ಬೋರ್ಡ್‌ಗೆ ಆಸ್ತಿ ನೀಡಬೇಕೆಂಬ ಕಳಕಳಿ ಅವರಿಗಿದ್ದರೆ ಜಮೀರ್‌ಗೆ ಸೇರಿದ್ದ ಸ್ವಂತ ಜಮೀನನ್ನು ನೀಡಲಿ ಅದಕ್ಕೆ ನಮ ತಕರಾರರು ಎಂದು ಸ್ಪಷ್ಟಪಡಿಸಿದರು.

Tags: BangaloreBelgaumBellarybengaluruBJP demands Jamir's resignationChamarajanagarChikkaballapurChitradurgaDavangereDharwadHassanHaveriKalaburagiKolarKoppalLeader of Opposition R.Ashok in KRpuramMPsMysoreRaichurSaffron forces angry against Waqf:ShimogaState BJP president B.Y.Vijayendra protested in Bellarytumkur
Previous Post

ವಕ್ಫ್ ಆಸ್ತಿ ವಿಚಾರ: ವಕ್ಫ್ ಆಸ್ತಿ ತೆರವುಗೊಳಿಸಲು 216 ಪ್ರಕರಣಗಳಲ್ಲಿ ಬಿಜೆಪಿಯೇ ನೋಟೀಸ್ ಕೊಟ್ಟಿತ್ತಲ್ಲಾ ಏಕೆ:ಸಿಎಂ ಸಿದ್ದರಾಮಯ್ಯ ಪ್ರಶ್ನೆ

Next Post

ರಾಜ್ಯ ಬ್ಯಾಡ್ಮಿಂಟನ್ ಕೊಡಗಿನ ದಿಯಾ ಭೀಮಯ್ಯಗೆ ದ್ವಿತೀಯ ಸ್ಥಾನ.

Related Posts

“ನೂತನವಾಗಿ ಆರಂಭಿಸೋಕು ಮುನ್ನ ಚಾಲ್ತಿಯಲ್ಲಿರುವ ಕಾಲೇಜುಗಳನ್ನು ಬಲಪಡಿಸಬೇಕು”
Top Story

“ನೂತನವಾಗಿ ಆರಂಭಿಸೋಕು ಮುನ್ನ ಚಾಲ್ತಿಯಲ್ಲಿರುವ ಕಾಲೇಜುಗಳನ್ನು ಬಲಪಡಿಸಬೇಕು”

by ಪ್ರತಿಧ್ವನಿ
March 11, 2026
0

ಬೆಂಗಳೂರು : ಈ ಹಿಂದಿನ ಬಿಜೆಪಿ ಸರ್ಕಾರ ರಾಜ್ಯದಲ್ಲಿರುವ ಕೃಷಿ ಡಿಪ್ಲೊಮಾ ಕಾಲೇಜುಗಳನ್ನ ರದ್ದುಗೊಳಿಸಿದ್ದನ್ನು ನಮ್ಮ ಕಾಂಗ್ರೆಸ್ ಸರ್ಕಾರ ಮತ್ತೆ ಡಿಪ್ಲೋಮ ಕಾಲೇಜು ಪ್ರವೇಶಾತಿಗೆ ಅನುಮತಿ ನೀಡಿ...

Read moreDetails
ನಾವು ಸುಮ್ಮನಿರೋದಿಲ್ಲ ಅಮೆರಿಕ ಬ್ಯಾಂಕುಗಳ ಮೇಲೆ ದಾಳಿ ಮಾಡ್ತೀವಿ : ಇರಾನ್ ಸೇನೆ ಪ್ರತಿಜ್ಞೆ..

ನಾವು ಸುಮ್ಮನಿರೋದಿಲ್ಲ ಅಮೆರಿಕ ಬ್ಯಾಂಕುಗಳ ಮೇಲೆ ದಾಳಿ ಮಾಡ್ತೀವಿ : ಇರಾನ್ ಸೇನೆ ಪ್ರತಿಜ್ಞೆ..

March 11, 2026
MSME ನೂತನ ನೀತಿಯಿಂದ ಜಾಗತಿಕ ಮಟ್ಟದಲ್ಲಿ ರಾಜ್ಯ ಮುಂಚೂಣಿಗೆ : ರೋಹಿಣಿ ಸಿಂಧೂರಿ ವಿಶ್ವಾಸ..

MSME ನೂತನ ನೀತಿಯಿಂದ ಜಾಗತಿಕ ಮಟ್ಟದಲ್ಲಿ ರಾಜ್ಯ ಮುಂಚೂಣಿಗೆ : ರೋಹಿಣಿ ಸಿಂಧೂರಿ ವಿಶ್ವಾಸ..

March 11, 2026
ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

March 11, 2026
ವಿಚಾರಣೆ ಬಳಿಕ ದರ್ಶನ್ ಅಭಿಮಾನಿಗಳ ಬಗ್ಗೆ ರಮ್ಯಾ ಹೇಳಿದ್ದೇನು?

ವಿಚಾರಣೆ ಬಳಿಕ ದರ್ಶನ್ ಅಭಿಮಾನಿಗಳ ಬಗ್ಗೆ ರಮ್ಯಾ ಹೇಳಿದ್ದೇನು?

March 11, 2026
Next Post

ರಾಜ್ಯ ಬ್ಯಾಡ್ಮಿಂಟನ್ ಕೊಡಗಿನ ದಿಯಾ ಭೀಮಯ್ಯಗೆ ದ್ವಿತೀಯ ಸ್ಥಾನ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada