• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ʼಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲʼ..ಬರ್ತಡೇ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಕಿಚ್ಚ ಸುದೀಪ್‌

ಪ್ರತಿಧ್ವನಿ by ಪ್ರತಿಧ್ವನಿ
August 27, 2026
in Top Story, ಸಿನಿಮಾ
0
ʼಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲʼ..ಬರ್ತಡೇ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಕಿಚ್ಚ ಸುದೀಪ್‌
Share on WhatsAppShare on FacebookShare on Telegram
ADVERTISEMENT

ಅಭಿನಯ ಚಕ್ರವರ್ತಿ ಅಭಿಮಾನಿಗಳ ಪಾಲಿನ ಪ್ರೀತಿಯ ಬಾದ್‌ಷಾ ಕಿಚ್ಚ ಸುದೀಪ್ ಈ ಬಾರಿಯ ತಮ್ಮ ಹುಟ್ಟುಹಬ್ಬದ ಆಚರಣೆಯ ಬಗ್ಗೆ ಅಭಿಮಾನಿಗಳೊಂದಿಗೆ ಮುಖ್ಯವಾದ ವಿಚಾರವನ್ನು ಹಂಚಿಕೊಂಡಿದ್ದಾರೆ. ಸೆಪ್ಟೆಂಬರ್ 2ರಂದು ವೈಯಕ್ತಿಕ ಕಾರಣಗಳಿಂದಾಗಿ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ತೀರ್ಮಾನಿಸಿರುವ ಸುದೀಪ್, ಆ ದಿನದಂದು ತಾವು ಮನೆಯಲ್ಲಿ ಇರುವುದಿಲ್ಲ ಎಂದು ಮುಂಚಿತವಾಗಿ ತಿಳಿಸಿದ್ದಾರೆ.

TOXIC| Honest Review By | Vijay Bharamasagara: ಕುಸಿದು ಬಿತ್ತಾ ನಿರೀಕ್ಷೆಗಳ ಬೆಟ್ಟ! ? |YASH |KVN|

ಈ ಕುರಿತು ಭಾವನಾತ್ಮಕ ಸಂದೇಶ ಹಂಚಿಕೊಂಡಿರುವ ಅವರು, ಆತ್ಮೀಯ ಸ್ನೇಹಿತರೇ, ನಮಸ್ಕಾರ, ಹೇಗಿದ್ದೀರಿ? 2ನೇ ಸೆಪ್ಟೆಂಬರ್ ಎಂಬುದು ಒಂದು ದಿನಾಂಕ ಅಷ್ಟೇ. ಅದನ್ನು ಸಂಭ್ರಮವನ್ನಾಗಿ 30 ವರ್ಷಗಳಿಂದ ಪರಿವರ್ತಿಸಿದ ಅಪಾರ ಪ್ರೀತಿ ನಿಮ್ಮದು. ನಿಮ್ಮ ಅಭಿಮಾನ, ಹುಚ್ಚು ಪ್ರೀತಿಗೆ ಎಷ್ಟು ಧನ್ಯವಾದ ಹೇಳಿದರೂ ಸಾಲದು. ಕಳೆದ 30 ವರ್ಷಗಳಲ್ಲಿ ನಿಮ್ಮ ಚಪ್ಪಾಳೆ, ಶಿಳ್ಳೆಗಳಲ್ಲಿ ಇನ್ನು ಹೆಚ್ಚು ಹೆಚ್ಚು ಪ್ರೋತ್ಸಾಹ ಪ್ರೀತಿ ಕಂಡುಕೊಂಡಿದ್ದೇನೆ. ಪ್ರತಿ ಸಿನಿಮಾ ಇರಲಿ, BIGGBOSS ಇರಲಿ ಜೊತೆಗೆ ಯಾವುದೇ ಕಾರ್ಯಕ್ರಮಕ್ಕೆ ಮುಂದಾದಾಗ ನೀವು ತೋರಿಸಿದ ಪ್ರೀತಿ ಅಪರಿಮಿತ. ಅದೇ ನನಗೆ ಶ್ರೀರಕ್ಷೆ.

ಆದರೆ ಈ ವರ್ಷ ನನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಅದಕ್ಕೆ ಬಲವಾದ ಮತ್ತು ವೈಯಕ್ತಿಕ ಕಾರಣಗಳಿವೆ. ಸಂಭ್ರಮಗಳನ್ನು ತೆರೆದ ಹೃದಯದಿ೦ದ ಆಚರಿಸಲು ಸಾಧ್ಯವಾಗದಿದ್ದರೆ ಅದು ಸಂಭ್ರಮವೆ ಅಲ್ಲ ನನಗೆ. ನಿಮ್ಮ ನಿಮ್ಮ ಊರು, ಭಾಗಗಳಲ್ಲಿ ನೀವು ನೆಡೆಸುವ ಕಾರ್ಯಕ್ರಮಗಳೇ ಆಶೀರ್ವಾದ. ಅದು ಸದಾ ಮುಂದುವರೆಯಲಿ. ಮತ್ತೆ ಭೇಟಿ ಆಗೋಣ. ನನ್ನನ್ನು ನಿಮ್ಮನ್ನು ಎಂದಾದರೂ ಬೇರ್ಪಡಿಸಲು ಸಾಧ್ಯವೇ? ಅಂದು ಮನೆಯ ಬಳಿಯೂ ಯಾರಿಗೂ ಲಭ್ಯವಾಗುತ್ತಿಲ್ಲ. ಸತ್ಕಾರಗಳು ಗದ್ದಲವಾಗಬಾರದು ಎಂಬುದನ್ನು ನಿಮ್ಮಲ್ಲಿ ಪದೇ ಪದೇ ಅರಿಕೆ ಮಾಡಿಕೊಂಡಿದ್ದೇನೆ.
ನಿಮ್ಮ ಉಡುಗೊರೆಗಳು ಸಮಾಜಕ್ಕೆ ಸದ್ವಿನಿಯೋಗವಾಗಲಿ. ನಿಮ್ಮ ಪ್ರೀತಿ, ಹಾರೈಕೆಗಳಿಗಿಂತ ಮತ್ತೊಂದು ಶ್ರೀರಕ್ಷೆ, ಆಶೀರ್ವಾದ ಇರಲು ಸಾಧ್ಯವೇ?

Actor Bhaskar Shetty Life Journey : ಇದು ಲಕ್ಕಿ ಭಾಸ್ಕರ ಕಥೆ! Darshan | Punithrajkumar | #pratidhvani

ಮತ್ತೊಂದು ವಿಷಯ 30 ವರ್ಷ… ಅಂದರೆ “ಬರೋಬ್ಬರಿ ಮೂವತ್ತು ವರ್ಷ” ಕನ್ನಡ ಚಿತ್ರರಂಗಕ್ಕೆ ಅರ್ಪಿಸಿಕೊಂಡವನಿಗೆ ಸಿನಿಮಾ ನನ್ನ ಪರಮ ಕಾಯಕ ಅನ್ನೋದು ಸ್ಪಷ್ಟ. ಕೆಲವೊಮ್ಮೆ ತಡವಾಗಬಹುದು ಅದಕ್ಕೂ ಕಾರಣಗಳಿರುತ್ತವೆ. “ಸಿಂಹ ಸುಮ್ಮನೆ ಕುಳಿತಿದೆ ಎಂದರೆ ಸುಸ್ತಾಗಿದೆ ಅಂತಲ್ಲ ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ ” ನೋಡಿ, ನನ್ನದೇ ಸಿನಿಮಾ ಸಂಭಾಷಣೆ ಹೀಗೆ ಈ ಪತ್ರದಲ್ಲಿ ನನ್ನ ಬಳಕೆಗೆ ಬರುತ್ತದೆ ಎಂದು ನಾನೂ ಅಂದುಕೊಂಡಿರಲಿಲ್ಲ.. ಯಾವುದೇ ವೇದಿಕೆ, ಯಾವುದೇ ಕಾರ್ಯಕ್ರಮಕ್ಕೆ ಹೋದರು ಕನ್ನಡಿಗರನ್ನು ರಂಜಿಸಲು, ಕನ್ನಡವನ್ನು ಕುಣಿಸಲು,
‘ಕನ್ನಡ ನನ್ನ ಸತ್ಯ.. ಕನ್ನಡದಿಂದ ನಾನು ನಿತ್ಯ” ನಿಮ್ಮನ್ನು ರಂಜಿಸುವ ವಿಷಯದಲ್ಲಿ ಯಾವತ್ತಿಗೂ ರಾಜಿಯಾದವನಲ್ಲ ನಾನು. ರಾಜಿ ಆಗುವುದೂ ಇಲ್ಲ. ನನ್ನ ಎಲ್ಲ ಹೆಜ್ಜೆಗಳಲ್ಲಿ ನೀವಿದ್ದೀರಿ ಹೆಜ್ಜೆ ಗುರುತಾಗಿ. ಏನೇ ಇರಲಿ ಜೀವನದಲ್ಲಿ ಹೂ ಮುಳ್ಳು, ನಿಮ್ಮ ಪ್ರೀತಿ ಮೈಲಿಗಲ್ಲು ಎಂದು ಕಿಚ್ಚ ಸುದೀಪ್‌ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Yash : ರಾಕಿಭಾಯ್ ಸರಳತೆ ಕೊಂಡಾಡಿದ ಬಾಲಿವುಡ್ ನಟ #toxicthemovie #prathidhwani
Previous Post

ನೇಪಾಳದಲ್ಲಿ ಕಂಡು ಕೇಳರಿಯದ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ

Next Post

ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್ ಸೇರಿ ಇಬ್ಬರು ಸಾ**

Related Posts

2027-28ರಲ್ಲಿ ಟಾಲಿವುಡ್‌ನ ಇಬ್ಬರು ಸ್ಟಾರ್‌ಗಳಿಗೆ ಅಪಾಯ? ವೇಣುಸ್ವಾಮಿ ಭವಿಷ್ಯ ವೈರಲ್
Top Story

2027-28ರಲ್ಲಿ ಟಾಲಿವುಡ್‌ನ ಇಬ್ಬರು ಸ್ಟಾರ್‌ಗಳಿಗೆ ಅಪಾಯ? ವೇಣುಸ್ವಾಮಿ ಭವಿಷ್ಯ ವೈರಲ್

by ಪ್ರತಿಧ್ವನಿ
August 27, 2026
0

ಸೆಲೆಬ್ರಿಟಿ ಜ್ಯೋತಿಷಿ ಎಂದೇ ಗುರುತಿಸಿಕೊಂಡಿರುವ ವೇಣುಸ್ವಾಮಿ ಆಗಾಗ ತಮ್ಮ ಭವಿಷ್ಯವಾಣಿಗಳಿಂದ ಸುದ್ದಿಯಾಗುತ್ತಾರೆ. ನಟಿ ಸಮಂತಾ ಹಾಗೂ ನಾಗಚೈತನ್ಯ ಅವರ ಸಂಬಂಧ ಸೇರಿದಂತೆ ಹಲವು ವಿಚಾರಗಳ ಕುರಿತು ಅವರು...

Read moreDetails
ಟಾಕ್ಸಿಕ್’ನಲ್ಲಿ ಕಿಯಾರಾಗೆ ಧ್ವನಿ ನೀಡಿದ್ದು ಯಾರು? 120 ಮಂದಿಯ ನಡುವೆ ‘ಟಾಕ್ಸಿಕ್’ ಅವಕಾಶ ಗೆದ್ದ ಕಥೆ!

ಟಾಕ್ಸಿಕ್’ನಲ್ಲಿ ಕಿಯಾರಾಗೆ ಧ್ವನಿ ನೀಡಿದ್ದು ಯಾರು? 120 ಮಂದಿಯ ನಡುವೆ ‘ಟಾಕ್ಸಿಕ್’ ಅವಕಾಶ ಗೆದ್ದ ಕಥೆ!

August 27, 2026
ಮಂಡ್ಯ ಜೈಲಿನಲ್ಲಿ ರಾಜಾತಿಥ್ಯಕ್ಕೆ ರೇಟ್ ಫಿಕ್ಸ್..?: ಪತ್ರ ವೈರಲ್‌..!

ಮಂಡ್ಯ ಜೈಲಿನಲ್ಲಿ ರಾಜಾತಿಥ್ಯಕ್ಕೆ ರೇಟ್ ಫಿಕ್ಸ್..?: ಪತ್ರ ವೈರಲ್‌..!

August 27, 2026
ನಾನು ಪಕ್ಷದ ಶಿಸ್ತಿನ ಸಿಪಾಯಿ, ಮಹಿಳೆಯರಿಲ್ಲದ ಸಂಪುಟ ಅಪೂರ್ಣ: ಲಕ್ಷ್ಮೀ ಹೆಬ್ಬಾಳ್ಕರ್

ನಾನು ಪಕ್ಷದ ಶಿಸ್ತಿನ ಸಿಪಾಯಿ, ಮಹಿಳೆಯರಿಲ್ಲದ ಸಂಪುಟ ಅಪೂರ್ಣ: ಲಕ್ಷ್ಮೀ ಹೆಬ್ಬಾಳ್ಕರ್

August 27, 2026
SC-ST ಕುಂದುಕೊರತೆ ಸಭೆಗಳಲ್ಲಿ ‘ದಲಿತ’ ಪದ ಬಳಕೆ ನಿಷೇಧಕ್ಕೆ ಆಗ್ರಹ

SC-ST ಕುಂದುಕೊರತೆ ಸಭೆಗಳಲ್ಲಿ ‘ದಲಿತ’ ಪದ ಬಳಕೆ ನಿಷೇಧಕ್ಕೆ ಆಗ್ರಹ

August 27, 2026
Next Post
ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್ ಸೇರಿ ಇಬ್ಬರು ಸಾ**

ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್ ಸೇರಿ ಇಬ್ಬರು ಸಾ**

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada