ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಮತ್ತೊಮ್ಮೆ ಕಾವೇರಿವಿವಾದ ತಲೆ ಎತ್ತಿದೆ. ಕಾವೇರಿ ನದಿ ನೀರನ್ನು ಹರಿಸುವಂತೆ ನ್ಯಾಯಾಲಯ ಆದೇಶಿಸಿದೆ. ಈ ಕುರಿತಾಗಿ ಸರ್ಕಾರವು ಸರ್ವಪಕ್ಷ ಸಭೆ ಕರೆದಿದ್ದು, ಚರ್ಚಿಸಿ ನಿರ್ಣಯ ಕೈಗೊಳ್ಳಲಿದೆ. ಈ ನಡುವೆ ಮಂಡ್ಯ, ಮೈಸೂರು ಇನ್ನೂ ಕೆಲವೆಡೆಗಳಲ್ಲಿ ತಮಿಳುನಾಡಿಗೆ ನೀರು ಹರಿಸದಂತೆ ಒತ್ತಾಯ ಮಾಡಿ ಪ್ರತಿಭಟನೆಗಳು ಆರಂಭವಾಗಿವೆ. ಚಿತ್ರರಂಗದವರು ಕಾವೇರಿ ಕುರಿತಾಗಿ ಪ್ರತಿಕ್ರಿಯಿಸಬೇಕೆಂದು ಒತ್ತಾಯಿಸಿ ಇಂದು ವಾಣಿಜ್ಯ ಮಂಡಳಿ ಮುಂದೆ ಪ್ರತಿಭಟನೆ ನಡೆಸಲಾಗಿದೆ. ಅದರ ಬೆನ್ನಲ್ಲೆ ಕೆಲವು ನಟರು ಟ್ವೀಟ್ ಮಾಡಿ ‘ಆನ್ಲೈನ್ ಬೆಂಬಲ’ ವ್ಯಕ್ತಪಡಿಸಿದ್ದಾರೆ.
ಕಾವೇರಿ ವಿವಾದದ ಕುರಿತಾಗಿ ಟ್ವೀಟ್ ಮಾಡಿರುವ ನಟ ಸುದೀಪ್, ”ಸ್ನೇಹಿತರೆ, ನಮ್ಮ ಕಾವೇರಿ ನಮ್ಮ ಹಕ್ಕು . ಅಷ್ಟು ಒಮ್ಮತದಿಂದ ಗೆಲ್ಲಿಸಿರುವ ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ ಎಂದು ನಾನು ನಂಬಿದ್ದೇನೆ . ಈ ಕೂಡಲೇ ತಜ್ಞರು ಕಾರ್ಯತಂತ್ರ ರೂಪಿಸಿ ನ್ಯಾಯ ನೀಡಲಿ ಎಂದು ಒತ್ತಾಯಿಸುತ್ತೇನೆ . ನೆಲ -ಜಲ -ಭಾಷೆಯ ಹೋರಾಟದಲ್ಲಿ ನನ್ನ ಧ್ವನಿಯೂ ಇದೆ. ಕಾವೇರಿ ತಾಯಿ ಕರುನಾಡನ್ನು ಕಾಪಾಡಲಿ” ಎಂದಿದ್ದಾರೆ.