ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷವು ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಈಗ ಅದು ತನ್ನ ವ್ಯಾಪ್ತಿಯನ್ನು ಉಳಿದ ಎಲ್ಲಾ ರಾಜ್ಯಗಳಿಗೂ ವಿಸ್ತರಿಸಲು ಮುಂದಾಗಿದೆ.ಇದರ ಭಾಗವಾಗಿ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಗುಜರಾತ್ ರಾಜ್ಯಗಳಲ್ಲಿಯೂ ಕೂಡ ಅದು ತನ್ನ ಅಭ್ಯರ್ಥಿಗಳನ್ನು ಹಾಕುತ್ತಿದೆ..
ಪಂಜಾಬ್ ಗೆಲುವಿನ ನಂತರ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಕಣ್ಣು ನೇರ ಗುಜರಾತ್ನತ್ತ ನೆಟ್ಟಿದೆ. ಮುಂದಿನ ಗುಜರಾತ್ ಚುನಾವಣೆಯಲ್ಲಿ ಗೆಲ್ಲಲು ದೆಹಲಿ ಮಾಡೆಲ್ ಅನ್ನೇ ಮತ್ತೆ ಅಸ್ತ್ರವಾಗಿ ಬಳಸುತ್ತಿದ್ದಾರೆ. ಹೌದು, ಇಂದು ಗುಜರಾತ್‌ನ ಭರೂಚ್‌ನಲ್ಲಿರುವ ದೆಹಲಿ ಶಾಲೆಗಳನ್ನು ಉಲ್ಲೇಖಿಸಿ ಮಾತನಾಡಿದಅವರು, ಗುಜರಾತ್‌ನ ಶಾಲೆಗಳ ಸ್ಥಿತಿ ನಿಜವಾಗಿಯೂ ಕೆಟ್ಟದಾಗಿದೆ ಅದನ್ನು ದೆಹಲಿ ಶಾಲೆಗಳಂತೆ ಮಾಡದಿದ್ದರೆ ನನ್ನನ್ನು ಹೊರಹಾಕಿ ಎಂದು ಹೇಳಿದ್ದಾರೆ. ..
ಮುಂದುವರೆದು, “ಗುಜರಾತ್‌ನಲ್ಲಿ 6,000 ಸರ್ಕಾರಿ ಶಾಲೆಗಳನ್ನು ಮುಚ್ಚಲಾಗಿದೆ. ಇನ್ನೂ ಹಲವು ಶಿಥಿಲಾವಸ್ಥೆಯಲ್ಲಿವೆ. ಲಕ್ಷ ಲಕ್ಷ ಮಕ್ಕಳ ಭವಿಷ್ಯ ಅಸ್ತವ್ಯಸ್ತಗೊಂಡಿದೆ. ನಾವು ದೆಹಲಿಯಲ್ಲಿ ಶಾಲೆಗಳನ್ನು ಬದಲಾಯಿಸಿದ ರೀತಿ” ಇದನ್ನು ಬದಲಾಯಿಸಬಹುದು ಎಂದು ದೆಹಲಿ ಮುಖ್ಯಮಂತ್ರಿ ಹೇಳಿದ್ದಾರೆ. ಎಂದರು.

ಭೂಪೇಂದ್ರ ಪಟೇಲ್‌ಗೆ ಸವಾಲೆಸೆದ ಕೇಜ್ರಿವಾಲ್ –
“ಗುಜರಾತ್ ಪರೀಕ್ಷೆ ವೇಳೆ ಪೇಪರ್ ಸೋರಿಕೆ ವಿಷಯದಲ್ಲಿ ಬಿಜೆಪಿ ವಿಶ್ವದಾಖಲೆ ಮಾಡುತ್ತಿದೆ. ಪೇಪರ್ ಸೋರಿಕೆಯಾಗದಂತೆ ಒಂದೇ ಒಂದು ಪರೀಕ್ಷೆ ನಡೆಸುವಂತೆ ನಾನು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರಿಗೆ ಸವಾಲು ಹಾಕುತ್ತೇನೆ” ಎಂದು ಹೇಳಿದ್ದಾರೆ.
ಮುಂದುವರೆದು, “ನಮಗೆ ಒಂದು ಅವಕಾಶ ನೀಡಿ, ನಾನು ಈ ಅವಕಾಶದಲ್ಲಿ ಶಾಲೆಗಳನ್ನು ಸುಧಾರಿಸದಿದ್ದರೆ ನೀವು ನನ್ನನ್ನು ಹೊರಹಾಕಬಹುದು” ಎಂದು ಜನರಲ್ಲಿ ಕೇಜ್ರಿವಾಲ್ ಮನವಿ ಮಾಡಿದ್ದಾರೆ.
ದೆಹಲಿಯಲ್ಲಿ 4 ಲಕ್ಷ ವಿದ್ಯಾರ್ಥಿಗಳು ಖಾಸಗಿ ಶಾಲೆಗಳಿಂದ ದೆಹಲಿ ಸರ್ಕಾರ ನಡೆಸುವ ಶಾಲೆಗಳಿಗೆ ಸ್ಥಳಾಂತರಗೊಂಡಿದ್ದಾರೆ ಎಂದು ಪ್ರತಿಪಾದಿಸಿದ ಅವರು, “ದೆಹಲಿಯಲ್ಲಿ, ಶ್ರೀಮಂತರು ಮತ್ತು ಬಡವರ ಮಕ್ಕಳು ಒಟ್ಟಿಗೆ ಓದುತ್ತಿದ್ದಾರೆ, ದೆಹಲಿಯಲ್ಲಿ ಈ ಬಾರಿ 99.7% ಫಲಿತಾಂಶ ಬಂದಿದೆ” ಎಂದು ಹೇಳಿದ್ದಾರೆ.












