• Home
  • About Us
  • ಕರ್ನಾಟಕ
Tuesday, July 15, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಿಯೋನಿಕ್ಸ್ ವೆಂಡರ್ಸ್ ಬಿಲ್ ಬಾಕಿ; ಪ್ರಿಯಾಂಕ್ ಖರ್ಗೆಗೆ ಹೆಚ್.ಡಿ.ಕುಮಾರಸ್ವಾಮಿ ತರಾಟೆ

ಪ್ರತಿಧ್ವನಿ by ಪ್ರತಿಧ್ವನಿ
January 15, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿದೇಶ, ವಿಶೇಷ
0
Share on WhatsAppShare on FacebookShare on Telegram

ಉಡಾಫೆ ಬಿಟ್ಟು ಮೊದಲು ಬಿಲ್ ಪಾವತಿಸಿ ಎಂದ ಕೇಂದ್ರ ಸಚಿವರು.
ನೀವ್ಯಾಕೆ ದಯಾಮರಣಕ್ಕೆ ಅರ್ಜಿ ಹಾಕುತ್ತೀರಿ ಎಂದು ಗುತ್ತಿಗೆದಾರರಿಗೆ ಧೈರ್ಯ ಹೇಳಿದ ಸಚಿವರು.
ಒಂದು ವರ್ಷ ಕಾಮಗಾರಿ ಮಾಡುವುದಿಲ್ಲ ಎಂದು ಒಗ್ಗಟ್ಟಾಗಿ ಎಂದು ಕಿವಿಮಾತು

ADVERTISEMENT

ಬೆಂಗಳೂರು: ಬಾಕಿ ಬಿಲ್ ಪಾವತಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೆಂಡರ್ಸ್ ಪತ್ರ ಬರೆದಿರುವ ಪ್ರಕರಣ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆ ಮಾತನ್ನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡರು.

Siddaramaiah: KPCC ಅಧ್ಯಕ್ಷರ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟಿದ್ದು ಸಿಎಂ ಸಿದ್ದರಾಮಯ್ಯ..! #satishjarkiholi

ಬೆಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ತೀಕ್ಷ್ಣವಾಗಿ ಉತ್ತರಿಸಿದ ಸಚಿವರು; ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆ ಮಾತುಗಳನ್ನಾಡುವುದು ಬಿಟ್ಟು ಮೊದಲು ಕಿಯೋನಿಕ್ಸ್ ವೆಂಡರ್ಸ್ ಗಳ ಬಾಕಿ ಬಿಲ್ ಗಳನ್ನು ಚುಕ್ತಾ ಮಾಡಲಿ ಎಂದರು.

ಈ ಸರಕಾರ ಗುತ್ತಿಗೆದಾರರು ಹಾಗೂ ವೆಂಡರ್ಸ್ ಗಳ ಬಿಲ್ ಪಾವತಿಸಲು ಮೀನಮೇಷ ಎಣಿಸುತ್ತಿದೆ. ಸರಕಾರದ ಆಂತರ್ಯ ಏನೆಂಬುದು ಎಲ್ಲರೂ ಬಲ್ಲ ವಿಷಯ. ತಮಗೆ ಬಿಡುಗಡೆ ಆಗಬೇಕಿರುವ ಬಿಲ್ ಗಳನ್ನು ಪಾವತಿಸಿ ಎಂದು ಗುತ್ತಿಗೆದಾರರು ಧೈರ್ಯದಿಂದ ಕೇಳಬೇಕು. ಅವರೇನೂ ಭಿಕ್ಷುಕರಲ್ಲ, ಸಣ್ಣ ಪ್ರಮಾಣದ ಗುತ್ತಿಗೆದಾರರು ತಮ್ಮ ಮನೆ ಹೆಣ್ಣುಮಕ್ಕಳ ಒಡವೆಗಳನ್ನು ಒತ್ತೆ ಇಟ್ಟು ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದಾರೆ. ಮಾಡಿರುವ ಸಾಲಗಳನ್ನು ತೀರಿಸಲಾಗದೆ ಬೀದಿಗೆ ಬಂದಿದ್ದಾರೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ಖರ್ಗೆ ಸಬೂಬು ಹೇಳುವುದು ಬಿಡಬೇಕು:

ಎಲ್ಲರ ಮೇಲೆ ಬೇಕಾಬಿಟ್ಟಿ ಮಾತನಾಡುವ ಖರ್ಗೆ ಅವರು ಸಬೂಬು ಹೇಳುವುದು ಬಿಡಬೇಕು. ಈವರೆಗೆ ಗುತ್ತಿಗೆದಾರರ ಎಲ್ ಓಸಿಗಳನ್ನು ಬಿಡುಗಡೆ ಮಾಡುವುದಕ್ಕೆ ಈ ಸರಕಾರಕ್ಕೆ ಸಾಧ್ಯವಾಗಿಲ್ಲ. ಸಚಿವರು ಹಿಂದಿನ ಸರಕಾರದ ಮೇಲೆ ಗೂಬೆ ಕೂರಿಸುವ ಬದಲು ಗುತ್ತಿಗೆದಾರರ ಬಾಕಿ ಮೊತ್ತವನ್ನು ಬಿಡುಗಡೆ ಮಾಡಬೇಕೆಂದು ಕೇಂದ್ರ ಸಚಿವರು ಒತ್ತಾಯ ಮಾಡಿದರು.

ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೆ. ಯಾವತ್ತೂ ಯಾರಿಗೂ ತೊಂದರೆ ಕೊಡುವ ಕೆಲಸ ಮಾಡಿಲ್ಲ. ಗುತ್ತಿಗೆದಾರರಿಗೆ ಒಂದು ಮನವಿ ಮಾಡುತ್ತೇನೆ. ಮೊದಲು ಒಗ್ಗಟ್ಟಾಗಿ, ನಿಮ್ಮ ನಿಮ್ಮಲ್ಲಿಯೇ ಗುಂಪುಗಳನ್ನು ಮಾಡಿಕೊಂಡರೆ ಅದನ್ನು ಸರಕಾರ ದುರುಪಯೋಗ ಮಾಡಿಕೊಳ್ಳುತ್ತದೆ. ನಿಮ್ಮಲ್ಲಿ ಒಡಕು ಬರಬೇಕು ಎಂದು ಸರಕಾರ ಬಯಸುತ್ತದೆ. ಇದನ್ನು ನೀವು ಅರ್ಥ ಮಾಡಿಕೊಳ್ಳಿ. ಒಂದು ವರ್ಷ ಯಾರು ಕೆಲಸ ಮಾಡಬೇಡಿ. ಅಕ್ಕಪಕ್ಕದ ರಾಜ್ಯಗಳವರನ್ನು ಕರೆದುಕೊಂಡು ಬಂದು ಕೆಲಸ ಮಾಡಿಸಲಿ. ಬರಲಿ, ಯಾರು ಬಂದು ಕೆಲಸ ಮಾಡುತ್ತಾರೋ ನೋಡೋಣ. ಹೇಗೂ ಇವರು ಕೆಲಸವನ್ನು ಕೊಡುತ್ತಿಲ್ಲ. ನೀವು ಕೇಳುತ್ತಿರುವುದು ಹಿಂದಿನ ದುಡ್ಡು ಕೇಳುತ್ತಿದ್ದೀರಿ ಎಂದು ಕುಮಾರಸ್ವಾಮಿ ಅವರು ಕಿವಿಮಾತು ಹೇಳಿದರು.

ಆತ್ಮಹತ್ಯೆಗೆ ಶರಣಾಗಬೇಡಿ ಎಂದು ಮನವಿ:

ಯಾರೇ ಆಗಲಿ ಧೃತಿಗೆಡುವ ಅಗತ್ಯವಿಲ್ಲ. ಸರ್ಕಾರ ನಿಮ್ಮ ಹಣ ನಿಮಗೆ ಕೊಡಲೇಬೇಕು. ಆತ್ಮಹತ್ಯೆಗೆ ಶರಣಾಗಬೇಡಿ. ದಯಾಮರಣಕ್ಕೆ ಯಾಕೆ ಅರ್ಜಿ ಹಾಕಿಕೊಳ್ಳುತ್ತೀರಾ? ನೀವು ತಪ್ಪು ಮಾಡಿಲ್ಲ, ತಪ್ಪು ಮಾಡಿರುವುದು ಸರ್ಕಾರ. ಸರ್ಕಾರದ ವಿರುದ್ಧ ಹೋರಾಟ ಮಾಡುವ ಧೈರ್ಯ ಮಾಡಿ. ನೀವು ಭಿಕ್ಷುಕರಲ್ಲ ಎಂದು ಗುತ್ತಿಗೆದಾರರಿಗೆ ಧೈರ್ಯ ಹೇಳಿದರು ಕೇಂದ್ರ ಸಚಿವರು.

ನಿನಗೆ ಸಿಕ್ಕಿರುವ ಕಾಮಗಾರಿಯನ್ನು ಪ್ರಾಮಾಣಿಕವಾಗಿ ಮಾಡಿ. ದಯಾಮರಣಕ್ಕೆ ಯಾಕೆ ಅರ್ಜಿ ಹಾಕುತ್ತೀರಿ. ಅಂತಹ ಮನಸ್ಥಿತಿಯಿಂದ ಹೊರಬನ್ನಿ. ಕೆಲಸವನ್ನೇ ಮಾಡದೆ ಬಿಲ್ ತೆಗೆದುಕೊಂಡು ಹಣ ಹೊಡೆದ ಎಷ್ಟೋ ಅಧಿಕಾರಿಗಳು, ದೊಡ್ಡ ದೊಡ್ಡ ಗುತ್ತಿಗೆದಾರರು ಇದ್ದಾರೆ. ಸರಿಯಾದ ಕೆಲಸ ಮಾಡಿದ್ದರೆ ನೀವು ಯಾಕೆ ಹೆದರಬೇಕು ಎಂದು ಸಚಿವರು ಹೇಳಿದರು.

ಇನ್ನೂ ಸಾಕ್ಷ್ಯ ಬೇಕೆ? ಸಿಎಂಗೆ ಟಾಂಗ್:

60% ಕಮಿಷನ್ ಬಗ್ಗೆ ಮುಖ್ಯಮಂತ್ರಿಗಳು ದಾಖಲೆ ಕೊಡಿ ಎಂದು ನನ್ನನ್ನು ಹೇಳಿದ್ದರು. ಗುತ್ತಿಗೆದಾರರ ಸಂಘದ ಹಂಗಾಮಿ ಅಧ್ಯಕ್ಷರು ಎಷ್ಟೆಷ್ಟು ಪರ್ಸೆಂಟೇಜ್ ಎಂದು ಅವರೇ ಪಟ್ಟಿ ಮಾಡಿ ಹೇಳಿದ್ದಾರೆ. ಇದಕ್ಕಿಂತ ದಾಖಲೆ ಬೇಕಾ ಮುಖ್ಯಮಂತ್ರಿಗಳಿಗೆ? ಎಂದು ಕುಮಾರಸ್ವಾಮಿ ಅವರು ಸಿಎಂಗೆ ಟಾಂಗ್ ಕೊಟ್ಟರು.

ಸಚಿವ ಪ್ರಿಯಾಂಕ ಖರ್ಗೆ ಮತ್ತು ಕಿಯೋನಿಕ್ಸ್ ಅಧ್ಯಕ್ಷರಿಗೆ ಹೇಳುವುದು ಇಷ್ಟೇ; ತಪ್ಪು ಮಾಡಿದವರ ಮೇಲೆ ಕ್ರಮ ತೆಗೆದುಕೊಳ್ಳಿ. ತಪ್ಪು ಮಾಡದವರಿಗೆ ಶಿಕ್ಷೆ ಯಾಕೆ? ಅವರ ಹಣ ಪಾವತಿ ಮಾಡಿ. ಅಂತಹವರ ಬದು ಏನಾಗಬೇಕು ಎಂಬ ಬಗ್ಗೆ ಒಮ್ಮೆ ಯೋಚನೆ ಮಾಡಿ. ಜನಪ್ರತಿನಿಧಿಗಳು ಸುಳ್ಳು ವ್ಯವಹಾರ ಮಾಡಿದ್ದರೆ ಅವರ ಮೇಲೂ ಕ್ರಮ ತೆಗೆದುಕೊಳ್ಳಿ. ತನಿಖೆ ನಡೆಸಿ ವಾಸ್ತಾವಂಶ ಹೊರಕ್ಕೆ ತರಲು ಎಷ್ಟು ತಿಂಗಳು ಬೇಕು ನಿಮಗೆ? ಈ ರಾಜ್ಯವನ್ನು ಹಾಳು ಮಾಡುತ್ತಿದ್ದೀರಿ ಎಂದು ಕೇಂದ್ರ ಸಚಿವರು ವಾಗ್ದಾಳಿ ನಡೆಸಿದರು.

ತೆರಿಗೆ ಸಂಗ್ರಹದಲ್ಲಿ ಸರಕಾರ ಹಿಂದೆ ಬಿದ್ದಿದೆ:

ನಾವು ನುಡಿದಂತೆ ನಡೆದಿದ್ದೇವೆ ಎಂದು ಹೇಳುತ್ತೀರಿ. ಗ್ಯಾರಂಟಿ ಕೊಟ್ಟಿದ್ದೇವೆ ಎನ್ನುತ್ತೀರಿ. ನಮ್ಮನ್ನು ಬಿಟ್ಟರೆ ಬೇರೆ ಯಾರೂ ಇಲ್ಲ ಎನ್ನುತ್ತೀರಿ. ನಿಮ್ಮ ಯಾವ ಕೆಲಸದಲ್ಲಿಯೂ ದಕ್ಷತೆ ಕಾಣುತ್ತಿಲ್ಲ. ನಿರೀಕ್ಷೆಗೆ ತಕ್ಕಂತೆ ತೆರಿಗೆ ಸಂಗ್ರಹ ಆಗುತ್ತಿಲ್ಲ. ಬಜೆಟ್ ಮಂಡನೆಗೆ ತಯಾರಿ ಮಾಡುತ್ತಿದ್ದೀರಿ, ಆದರೆ ತೆರಿಗೆ ಸಂಗ್ರಹದಲ್ಲಿ ಹಿಂದೆ ಬಿದ್ದಿದ್ದೀರಿ. ಎಲ್ಲಾ ಬಾಬ್ತುಗಳಿಂದ ಸುಮಾರು ₹62,424 ಕೋಟಿಯಷ್ಟು ತೆರಿಗೆ ಸಂಗ್ರಹ ಕಡಿಮೆ ಆಗಿದೆ. ಮೇಲಿಂದ ಮೇಲೆ ಸಾಲ ಮಾಡುತ್ತಿದ್ದೀರಿ. ಪೆಟ್ರೋಲ್, ಡೀಸೆಲ್, ಮುದ್ರಾಂಕ, ಮಾರ್ಗದರ್ಶಿ ಶುಲ್ಕ, ವಿದ್ಯುತ್ ದರ, ಬಸ್ ಪ್ರಯಾಣ ದರ, ಮದ್ಯದ ದರ ಸೇರಿದಂತೆ ಎಲ್ಲವನ್ನೂ ಏರಿಕೆ ಮಾಡಿದ್ದೀರಿ. ಇಷ್ಟೆಲ್ಲಾ ಮಾಡಿದರೂ ನಿಮ್ಮ ತೆರಿಗೆ ಸಂಗ್ರಹದಲ್ಲಿ ಕೊರತೆ ಆಗಿದೆ. ನಿಮ್ಮ ಆಡಳಿತ ಯಾವ ಮಟ್ಟಕ್ಕೆ ಹೋಗಿದೆ ಎನ್ನುವುದಕ್ಕೆ ಇದೇ ಸಾಕ್ಷಿ ಎಂದು ಕುಮಾರಸ್ವಾಮಿ ಅವರು ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದರು.

ಸಿಎಂ ಒಕ್ಕಲಿಗ, ಲಿಂಗಾಯತರನ್ನು ಡಿ ಗ್ರೇಡ್ ಮಾಡುತ್ತಿದ್ದಾರೆ!

ಜಾತಿ ಗಣತಿ ವರದಿ ಇಟ್ಟುಕೊಂಡು ಒಕ್ಕಲಿಗ, ಲಿಂಗಾಯತರನ್ನು ಡಿ ಗ್ರೇಡ್ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಟಿದ್ದಾರೆ ಎಂದು ಕುಮಾರಸ್ವಾಮಿ ಅವರು ಆರೋಪಿಸಿದರು.

ಜಾತಿ ಜನಗಣತಿ ವರದಿಯನ್ನು ಸಂಪುಟದಲ್ಲಿ ಚರ್ಚೆ ಮಾಡುತ್ತಾರಂತೆ. ಇದು ಕೇವಲ ಎರಡು ಸಮುದಾಯಗಳ ಪ್ರಶ್ನೆ ಅಲ್ಲ. ಇಷ್ಟು ದಿನ ಅಧಿಕಾರದಲ್ಲಿದ್ದ ಸಿದ್ದರಾಮಯ್ಯ ಅವರು ಶೋಷಿತ ಸಮುದಾಯಗಳಿಗೆ ಏನು ಮಾಡಿದ್ದಾರೆ ಏನುವುದನ್ನು ಹೇಳಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ಯಾವ ಯಾವ ಜಾತಿಯಲ್ಲಿ ಎಷ್ಟು ಜನ ಇದ್ದಾರೆ ಎನುವುದಕ್ಕಿಂತ ಎಷ್ಟು ಜನ ಬಡವರು ಇದ್ದಾರೆ ಎಂಬುದನ್ನು ಗಮನಿಸಬೇಕು. ಇಷ್ಟು ದಿನ ಸರ್ಕಾರದ ಸೌಲಭ್ಯಗಳು ಯಾರಿಗೆ ಸಿಕ್ಕಿವೆ, ಯಾರಿಗೆ ಸಿಕ್ಕಿಲ್ಲ ಎಂಬುದರ ಮೇಲೆ ಸರ್ಕಾರ ಬೆಳಕು ಚೆಲ್ಲಬೇಕು ಎಂದು ಅವರು ಹೇಳಿದರು.

Tags: BJPCaste CensuscongressCongress PartyDK Shivakumarhd kumarswamyKeonicsPratidhvaniPriyanka Khargesiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಆಗಸ್ಟ್ 15 ರಂದು ಬಿಡುಗಡೆಯಾಗಲಿದೆ ಬಹು ನಿರೀಕ್ಷಿತ “45” ಚಿತ್ರ .

Next Post

ಗೋವಾದ ಮುಖ್ಯಮಂತ್ರಿಗಳಿಂದ “ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು” ಚಿತ್ರದ ಎರಡನೇ ಹಾಡು ಸಾವಿರಾರು ಭಕ್ತರ ಸಮ್ಮುಖದಲ್ಲಿ ಬಿಡುಗಡೆಗೊಂಡಿದೆ

Related Posts

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ
Top Story

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

by ಪ್ರತಿಧ್ವನಿ
July 14, 2025
0

ಸರ್ಕಾರಿ ಸಹಾಯಧನ, ಪರಿಹಾರ ಧನ, ಆರ್ಥಿಕ ಸೌಲಭ್ಯಗಳನ್ನು ಸಾಲಕ್ಕೆ ಹೊಂದಾಣಿಕೆ ಮಾಡಿದರೆ, ಬ್ಯಾಂಕ್ ಮೇಲೆ ಕ್ರಮ ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕರ್ಸ್‍ಗಳೊಂದಿಗೆ ಸಚಿವ ಸಂತೋಷ ಲಾಡ್ ಸಭೆ...

Read moreDetails

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

July 14, 2025
B Sarojadevi: ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಡಿಸಿಎಂ ಸಂತಾಪ..!!

B Saroja Devi: ಮಲ್ಲಮ್ಮನ ಪವಾಡ ನಿಲ್ಲಿಸಿದ ಕಲಾ ಸರಸ್ವತಿ..

July 14, 2025

B Saroja Devi: ಡಾ‌ ರಾಜ್‌, ಎಂಜಿಆರ್, ಎನ್‌ಟಿ ಆರ್‌ ಜೊತೆ ನಟಿಸಿದ ಬಹುಭಾಷಾ ನಟಿಅಭಿನಯ ಸರಸ್ವತಿ ಬಿ. ಸರೋಜಾ ದೇವಿ ಇನ್ನಿಲ್ಲ..!

July 14, 2025

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ..

July 14, 2025
Next Post

ಗೋವಾದ ಮುಖ್ಯಮಂತ್ರಿಗಳಿಂದ "ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು" ಚಿತ್ರದ ಎರಡನೇ ಹಾಡು ಸಾವಿರಾರು ಭಕ್ತರ ಸಮ್ಮುಖದಲ್ಲಿ ಬಿಡುಗಡೆಗೊಂಡಿದೆ

Recent News

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ
Top Story

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

by ಪ್ರತಿಧ್ವನಿ
July 14, 2025
Top Story

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

by ಪ್ರತಿಧ್ವನಿ
July 14, 2025
B Sarojadevi: ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಡಿಸಿಎಂ ಸಂತಾಪ..!!
Top Story

B Saroja Devi: ಮಲ್ಲಮ್ಮನ ಪವಾಡ ನಿಲ್ಲಿಸಿದ ಕಲಾ ಸರಸ್ವತಿ..

by ಪ್ರತಿಧ್ವನಿ
July 14, 2025
Top Story

B Saroja Devi: ಡಾ‌ ರಾಜ್‌, ಎಂಜಿಆರ್, ಎನ್‌ಟಿ ಆರ್‌ ಜೊತೆ ನಟಿಸಿದ ಬಹುಭಾಷಾ ನಟಿಅಭಿನಯ ಸರಸ್ವತಿ ಬಿ. ಸರೋಜಾ ದೇವಿ ಇನ್ನಿಲ್ಲ..!

by ಪ್ರತಿಧ್ವನಿ
July 14, 2025
Top Story

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ..

by ಪ್ರತಿಧ್ವನಿ
July 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

July 14, 2025

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

July 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada