• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಕಿರಣ್ ರಾಜ್ ಹುಟ್ಟುಹಬ್ಬಕ್ಕೆ “ರಾನಿ” ತಂಡದ ಭರ್ಜರಿ ಗಿಫ್ಟ್

ಪ್ರತಿಧ್ವನಿ by ಪ್ರತಿಧ್ವನಿ
July 6, 2023
in ಸಿನಿಮಾ
0
ಕಿರಣ್ ರಾಜ್ ಹುಟ್ಟುಹಬ್ಬಕ್ಕೆ “ರಾನಿ” ತಂಡದ ಭರ್ಜರಿ ಗಿಫ್ಟ್
Share on WhatsAppShare on FacebookShare on Telegram

ಕಿರುತೆರೆಯ ಜನಪ್ರಿಯ ನಟ ಕಿರಣ್ ರಾಜ್ ಈಗ ಹಿರಿತೆರೆಯಲ್ಲೂ ಬೇಡಿಕೆ ನಟ. ಪ್ರಸ್ತುತ ಕಿರಣ್ ರಾಜ್ ಅಭಿನಯದ ಟೀಸರ್ ಬಿಡುಗಡೆಯಾಗಿದೆ. ಕಿರಣ್ ರಾಜ್ ಹುಟ್ಟುಹಬ್ಬದಂದು ಬಿಡುಗಡೆಯಾಗಿರುವ ಈ ಟೀಸರ್ ಸಾಕಷ್ಟು ವೀಕ್ಷಣೆಯಾಗಿ, ನೋಡುಗರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಮಾಗಡಿ ರಸ್ತೆಯ ವಿಕ್ಟರಿ ಸಿನಿಮಾದಲ್ಲಿ ಅದ್ದೂರಿಯಾಗಿ ಟೀಸರ್ ಬಿಡುಗಡೆ ಸಮಾರಂಭ ಹಾಗೂ ಕಿರಣ್ ರಾಜ್ ಹುಟ್ಟುಹಬ್ಬ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ನೆರವೇರಿತು.

ADVERTISEMENT

ಅಭಿಮಾನಿಗಳ ಪ್ರೀತಿಗೆ ಮನ ತುಂಬಿ ಬಂದಿದೆ ಎಂದು ಮಾತು ಪ್ರಾರಂಭಿಸಿದ ಕಿರಣ್ ರಾಜ್, ನಿಮ್ಮೆಲ್ಲರ ಅಭಿಮಾನಕ್ಕೆ ನಾನು ಚಿರ ಋಣಿ. “ರಾನಿ” ಚಿತ್ರ ಅದ್ದೂರಿಯಾಗಿ ಮೂಡಿಬಂದಿದೆ. ಗುರುತೇಜ್ ಶೆಟ್ಟಿ ವಿಭಿನ್ನ ಕಥೆ ಮಾಡಿದ್ದಾರೆ. ನಿರ್ಮಾಪಕರು ಯಾವುದೇ ಕೊರತೆ ಇಲ್ಲದೆ ನಿರ್ಮಾಣ ಮಾಡಿದ್ದಾರೆ. ಸಹ ಕಲಾವಿದರ ಅಭಿನಯ ಹಾಗೂ ತಂತ್ರಜ್ಞರ ಕಾರ್ಯವೈಖರಿ ತುಂಬಾ ಚೆನ್ನಾಗಿದೆ ಎಂದರು.

ನಾನು ಚಿತ್ರರಂಗದಿಂದ ದೂರ ಉಳಿದಿದ್ದ ಸಮಯದಲ್ಲಿ ಮಿತ್ರ ಗಿರೀಶ್ ಹೆಗಡೆ, ನಿರ್ಮಾಪಕ ಉಮೇಶ್ ಹೆಗಡೆ ಅವರನ್ನು ಪರಿಚಯಿಸಿದರು. ಉಮೇಶ್ ಹೆಗಡೆ ಹಾಗೂ ಚಂದ್ರಕಾಂತ್ ಪೂಜಾರಿ ಅವರು ಈ ಚಿತ್ರದ ಕಥೆ ಕೇಳಿ ನಿರ್ಮಾಣಕ್ಕೆ ಮುಂದಾದರು. ನಾಯಕ ಕಿರಣ್ ರಾಜ್ ಬಗ್ಗೆ ಎಷ್ಟು ಹೇಳಿದರೂ ಕಡಿಮೆ. ಅವರು ಈ ಚಿತ್ರಕ್ಕಾಗಿ ಸಾಕಷ್ಟು ಶ್ರಮ ಪಟ್ಟಿದ್ದಾರೆ. ನಟನೆಗಷ್ಟೇ ಸೀಮಿತವಾಗದೆ, ನನ್ನ ಜೊತೆ ಪ್ರತಿಯೊಂದು ಕೆಲಸದಲ್ಲೂ ಭಾಗಿಯಾಗಿದ್ದಾರೆ. ಮಣಿಕಾಂತ್ ಕದ್ರಿ ಚಿತ್ರಕ್ಕೆ ಸಂಗೀತ ನೀಡಿರುವುದಷ್ಟೇ ಅಲ್ಲದೇ, ಟೀಸರ್ ಗೆ ಧ್ವನಿ ಸಹ ನೀಡಿದ್ದಾರೆ. ರಾಘವೇಂದ್ರ ಬಿ ಕೋಲಾರ್ ಛಾಯಾಗ್ರಹಣ, ಸತೀಶ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ‌. ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ ಎಂದು ನಿರ್ದೇಶಕ ಗುರುತೇಜ್ ಶೆಟ್ಟಿ ತಿಳಿಸಿದರು.

ನಿರ್ಮಾಣದ ಬಗ್ಗೆ ಚಂದ್ರಕಾಂತ್ ಪೂಜಾರಿ – ಉಮೇಶ್ ಹೆಗಡೆ, ಹಾಡುಗಳ ಬಗ್ಗೆ ಮಣಿಕಾಂತ್ ಕದ್ರಿ ಹಾಗೂ ತಮ್ಮ ಪಾತ್ರದ ಬಗ್ಗೆ ನಾಯಕಿಯರಾದ ಸಮೀಕ್ಷ, ಅಪೂರ್ವ, ರಾಧ್ಯ ಮಾತನಾಡಿದರು. ಛಾಯಾಗ್ರಾಹಕ ರಾಘವೇಂದ್ರ ಬಿ ಕೋಲಾರ್ ಸೇರಿದಂತೆ ಅನೇಕ ತಂತ್ರಜ್ಞರು ಹಾಗೂ ಕಲಾವಿದರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Tags: Kannada Film IndustryKFIKIRAN RAJraanisandalwood
Previous Post

ಸದನದಲ್ಲಿ ಸಿಡಿದೆದ್ದ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿ ಆರೋಪಕ್ಕೆ ಸಿದ್ದು ಟಾಂಗ್‌

Next Post

ಶಾಶ್ವತ ಟಾಸ್ಕ್ ಫೋರ್ಸ್ ರಚನೆ ಮಾಡಿ; ಬಸವರಾಜ ಬೊಮ್ಮಾಯಿ

Related Posts

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?
Top Story

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

by ಪ್ರತಿಧ್ವನಿ
April 19, 2026
0

ಬೆಂಗಳೂರು : ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್‌ ಸಿಂಗ್‌ ದಂಪತಿ ತಮ್ಮ ಎರಡನೇ ಮಗುವನ್ನು ಸ್ವಾಗತಿಸಲು ಸಜ್ಜಾಗುತ್ತಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ...

Read moreDetails
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
Next Post
ಶಾಸಕರಿಗೆ ಲೋಕಸಭೆ ಚುನಾವಣೆಯ ಗುರಿ ನೀಡುವ‌ ಕುರಿತು ಚರ್ಚೆ ; ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಶಾಶ್ವತ ಟಾಸ್ಕ್ ಫೋರ್ಸ್ ರಚನೆ ಮಾಡಿ; ಬಸವರಾಜ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada