ಕನ್ನಡ ಕಿರುತೆರೆಯ ಜನಪ್ರಿಯ ನಟ ರಾನಿ ಚಿತ್ರದ ನಾಯಕ, ಕನ್ನಡತಿ ಸೀರಿಯಲ್ ಹೀರೋ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ರಾತ್ರಿ ಕೆಂಗೇರಿ ಬಳಿ ಅಪಘಾತವಾಗಿದೆ.
ಮುದ್ದರಾಯನ ಪಾಳ್ಯ ವೃದ್ದಾಶ್ರಮಕ್ಕೆ ಹೋಗಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಗಿರೀಶ್ ಕಾರು ಚಾಲನೆ ಮಾಡುತ್ತಿದ್ದಾಗ ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದಿದೆ.ಗುದ್ದಿದ ರಭಸಕ್ಕೆ ಕಿರಣ್ ರಾಜ್ ಗೆ ಎದೆಯ ಭಾಗಕ್ಕೆ ಪೆಟ್ಟಾಗಿದ್ದು ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ ಕಿರಣ್ ರಾಜ್ ಪ್ರಾಣಾಪಾಯದಿಂದ ಪಾರಾಗಿದ್ದು ಸ್ಥಳಕ್ಕೆ ಕೆಂಗೇರಿ ಸಂಚಾರಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.ಸದ್ಯ ಆಸ್ಪತ್ರೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ನಟ ಕಿರಣ್ ರಾಜ್ ಗೆಚಿಕಿತ್ಸೆ ಮುಂದುವರೆದಿದ್ದು, ಕಿರಣ್ ಎದೆ ಭಾಗಕ್ಕೆ ಭಾರೀ ಪೆಟ್ಟು ಬಿದ್ದಿದೆ ಎಂದು ಹೇಳಲಾಗುತ್ತಿದೆ.
ಕೆಂಗೇರಿ ಹತ್ತಿರದ ಬೆಂಗಳೂರು ಹಾಸ್ಪಿಟಲ್ ನಲ್ಲಿ ನಟನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ನಟನ ಜೊತೆಯಲ್ಲಿದ್ದ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಸೀಟ್ ಬೆಲ್ಟ್ ನಿಂದಾಗಿ ಸೇಫ್ ಆಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕಿರಣ್ ರಾಜ್ ಅವರು ಕೇವಲ ಕನ್ನಡ ಮಾತ್ರವಲ್ಲದೆ ಹಿಂದಿ ಕಿರುತೆರೆಯಲ್ಲೂ ನಟಿಸಿ ಗಮನ ಸೆಳೆದಿದ್ದಾರೆ. ಅವರು ಆ ಬಳಿಕ ಕನ್ನಡ ಕಿರುತೆರೆಗೆ ಮರಳಿದರು. ‘ಕನ್ನಡತಿ’ ಧಾರಾವಾಹಿಯಲ್ಲಿ ಹರ್ಷ ಆಗಿ ಅವರು ಗಮನ ಸೆಳೆದರು. ಈ ಮೂಲಕ ಫೇಮಸ್ ಆದರು. ಈಗ ಅವರು ಹಿರಿತೆರೆಯಲ್ಲಿ ತೊಡಗಿಕೊಂಡಿದ್ದಾರೆ. ಅವರ ನಟನೆಯ ಸಿನಿಮಾಗಳು ರಿಲೀಸ್ ಆಗುತ್ತಿವೆ.
‘