ಪ್ರಧಾನಿ ಮೋದಿ ಜನುಮದಿನದ ಅಂಗವಾಗಿ ಕರ್ನಾಟಕ ಕಿಸಾನ್ ಕಾಂಗ್ರೆಸ್ ವತಿಯಿಂದ ನಗರದ ಪೆಟ್ರೋಲ್ ಬಂಕ್ ಮುಂಭಾಗ “ ಏಕ್ ರೂಪಿಯ ಮೋದಿ” ಎಂಬ ಹೆಸರಿನೊಂದಿಗೆ ವಿಶಿಷ್ಟ ರೀತಿಯಲ್ಲಿ ಪ್ರತಿಭಟಿಸಿತು.
ಕಿಸಾನ್ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದ ಪೆಟ್ರೋಲ್‌ಬಂಕ್‌ನಲ್ಲಿ ಬರುವಂತ ಸಾರ್ವಜನಿಕರು ತಮ್ಮ ಗಾಡಿಗಳಿಗೆ ಪೆಟ್ರೋಲ್ ಮತ್ತು ಡೀಸೆಲ್ ಹಾಕಿಸುವವರಿಗೆ ಪ್ರತಿ ಲೀಟರ್‌ಗೆ ಒಂದು ರೂಪಾಯಿ ರಿಯಾಯಿತಿ ನೀಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಿತು.
ಈ ವೇಳೆ ಮಾತನಾಡಿದ ಕಿಸಾನ್ ಕಾಂಗ್ರೆಸ್ ರಾಜ್ಯಧ್ಯಕ್ಷ ಸಚಿನ್ ಮಿಗಾರವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನ ವಿರೋಧಿ ಧೋರಣೆಯನ್ನ ಖಂಡಿಸಿದರು. ಮುಂದುವರಿದು ಮಾತನಾಡಿದ ಅವರು ಕೇಂದ್ರ ಸರ್ಕಾರ , ಅಗತ್ಯ ವಸ್ತುಗಳ ಬೆಲೆಯನ್ನ ಕಡಿಮೆ ಮಾಡದಿದ್ದರೆ ಮುಂಬರುವ 2024ರ ಲೋಕಸಭೆ ಚುನಾವಣೆ ಮತ್ತು ವಿವಿಧ ರಾಜ್ಯಗಳಲ್ಲಿ ನಡೆಯುವ ಚುನಾವಣೆಯಲ್ಲಿ ಜನರು ಅವರನ್ನ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ದಿನ ನಿತ್ಯದ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ ಈ ದೇಶವನ್ನು ಲೂಟಿ ಮಾಡಲು ಹೊರಟಿರುವ ಪ್ರಧಾನಿ ಮೋದಿಯವರ ಜನ್ಮ ದಿನದಂದು ವಿನೂತನ ರೀತಿಯಲ್ಲಿ ಪ್ರತಿಭಟಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ರೈತರು ಒಂದು ವರ್ಷದಿಂದ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ಅವರ ಮಾತನ್ನು ಕೇಳುವುದಕ್ಕಾಗಲ್ಲಿ ಅಥವಾ ನೋಡುವುದಕ್ಕಾಗಲ್ಲಿ ಅವರಿಗೆ ಕಣ್ಣು ಮತ್ತು ಕಿವಿ ಎರಡು ಸಹ ಇಲ್ಲ ಎಂದು ಅವರು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಜನರು ಬೆಲೆ ಏರಿಕೆಯಿಂದ ಎಷ್ಟು ತತ್ತರಿಸಿದರು ಪ್ರಧಾನಿ ಅಥವಾ ಕೇಂದ್ರ ಸರ್ಕಾರದ ವಿರುದ್ದ ರಾಜ್ಯದಿಂದ ಆಯ್ಕೆಯಾಗಿರುವ ಸಂಸದರು ದನಿ ಎತ್ತುತ್ತಿಲ್ಲ ಶೋಭಾ ಕರಂದ್ಲಾಜೆ ಮತ್ತು ಸಿ.ಟಿ.ರವಿರವರು ಕ್ಷುಲಕ ಹೇಳಿಕೆ ನೀಡುವ ಮೂಲಕ ಅವರು ಜನ ಪ್ರತಿನಧಿಗಳೆಂಬುದನ್ನು ಮರೆತಿದ್ದಾರೆ ಎಂದು ಅವರು ಈ ವೇಳೆ ಹೇಳಿದ್ದಾರೆ .