
ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಬೆಸ್ಕಾಂ ಕಾರ್ಪೊರೇಟ್ ಕಚೇರಿಯಲ್ಲಿ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಸದಸ್ಯರೊಂದಿಗೆ ಸಭೆ ನಡೆಸಿದ ಸಚಿವ ಕೆಜೆ ಜಾರ್ಜ್..

ಮಾನ್ಯ ಸಾರಿಗೆ ಸಚಿವರಾದ ಶ್ರೀ ರಾಮಲಿಂಗಾ ರೆಡ್ಡಿ(Ramalingareddy), ರಾಜರಾಜೇಶ್ವರಿ ನಗರ ಶಾಸಕರಾದ ಶ್ರೀ ಮುನಿರತ್ನ(MLA Munirathna), ಯಶವಂತಪುರ ಶಾಸಕರಾದ ಶ್ರೀ ಎಸ್.ಟಿ. ಸೋಮಶೇಖರ್(ST Somashekar), ಬಸವನಗುಡಿ ಶಾಸಕರಾದ ಶ್ರೀ ಎಲ್.ಎ. ರವಿ ಸುಬ್ರಹ್ಮಣ್ಯ (MLA Ravi Subramanya) ಮತ್ತು ಎಂಎಲ್ಸಿ ಶ್ರೀ ಎಚ್.ಎಸ್. ಗೋಪಿನಾಥ್ ರೆಡ್ಡಿ (MLC HS Gopinath Reddy) ಈ ಸಭೆಯಲ್ಲಿ ಭಾಗವಹಿಸಿದ್ದರು.

ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀ ಗೌರವ್ ಗುಪ್ತಾ(Gourav Gupta), ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಪಂಕಜ್ ಕುಮಾರ್ ಪಾಂಡೆ(Pankaj Kumar Pande), ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಎನ್. ಶಿವಶಂಕರ್(Dr. N Shivashankar) ಮತ್ತು ಕೆಆರ್‌ಇಡಿಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಕೆ.ಪಿ. ರುದ್ರಪ್ಪಯ್ಯ (KP Rudrappaiah) ಇತರ ಅಧಿಕಾರಿಗಳೊಂದಿಗೆ ಉಪಸ್ಥಿತರಿದ್ದರು.











