ಸೆಂಚುರಿಯನ್ನ ಸೂಪರ್ಸ್ಪೋರ್ಟ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ (KL Rahul) ಆಕರ್ಷಕ ಶತಕ ಬಾರಿಸಿದ್ದಾರೆ.
ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡವು ಟೀಮ್ ಇಂಡಿಯಾವನ್ನು ಬ್ಯಾಟಿಂಗ್ಗೆ ಆಹ್ವಾನಿಸಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡವು 107 ರನ್ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.
6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೆಎಲ್ ರಾಹುಲ್ ಅತ್ಯುತ್ತಮ ಇನಿಂಗ್ಸ್ ಆಡಿದರು. 2ನೇ ದಿನದಾಟದಲ್ಲೂ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಕೆಎಲ್ ರಾಹುಲ್ 133 ಎಸೆತಗಳಲ್ಲಿ 14 ಫೋರ್ ಹಾಗೂ 4 ಭರ್ಜರಿ ಸಿಕ್ಸ್ಗಳೊಂದಿಗೆ ಶತಕ ಪೂರೈಸಿದರು.
ಸೆಂಚುರಿಯನ್ ಮೈದಾನದಲ್ಲಿ 2 ಶತಕ ಸಿಡಿಸಿದ ಮೊದಲ ವಿದೇಶಿ ಬ್ಯಾಟರ್ ಎಂಬ ದಾಖಲೆ ಕೆಎಲ್ ರಾಹುಲ್ ಪಾಲಾಗಿದೆ. 2021 ರಲ್ಲಿ ರಾಹುಲ್ ಇದೇ ಮೈದಾನದಲ್ಲಿ ಶತಕ ಬಾರಿಸಿದ್ದರು.
ಕೆಎಲ್ ರಾಹುಲ್ (101) ಅವರ ಶತಕದ ನೆರವಿನಿಂದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್ನಲ್ಲಿ 245 ರನ್ ಕಲೆಹಾಕಿ ಆಲೌಟ್ ಆಗಿದೆ. ಇದರ ಬೆನ್ನಲ್ಲೇ ಇನಿಂಗ್ಸ್ ಆರಂಭಿಸಿರುವ ಸೌತ್ ಆಫ್ರಿಕಾ ತಂಡವು 5 ಓವರ್ಗಳಲ್ಲಿ 1 ವಿಕೆಟ್ ಕಳೆದುಕೊಂಡು 14 ರನ್ ಕಲೆಹಾಕಿದೆ.