ಇಂಗ್ಲೆಂಡ್(England) ವಿರುದ್ಧದ 5ನೇ ಹಾಗೂ ಅಂತಿಮ ಟೆಸ್ಟ್(Test) ಪಂದ್ಯಕ್ಕೆ ಟೀಮ್ ಇಂಡಿಯಾ(Team India)ವನ್ನು ಪ್ರಕಟಿಸಲಾಗಿದ್ದು, ಕಮ್‌ಬ್ಯಾಕ್(Come Back) ನಿರೀಕ್ಷೆಯಲ್ಲಿದ್ದ ಕನ್ನಡಿಗ ಕೆ.ಎಲ್.ರಾಹುಲ್(KL Rahul) ಸಂಪೂರ್ಣ ಫಿಟ್ ಆಗದ ಹಿನ್ನೆಲೆಯಲ್ಲಿ ಅಂತಿಮ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ.
ಸರಣಿಯ 2ನೇ ಟೆಸ್ಟ್ ವೇಳೆ ಗಾಯಗೊಂಡು ಸರಣಿಯಿಂದ ಹೊರಗುಳಿದಿದ್ದ ಕೆ.ಎಲ್.ರಾಹುಲ್, ತಂಡಕ್ಕೆ ಮರಳುವ ನಿರೀಕ್ಷೆ ಹೊಂದಿದ್ದರು. ಆದರೆ ಇದೀಗ ಸಂಪೂರ್ಣ ಫಿಟ್(Fitness) ಆಗದ ಹಿನ್ನೆಲೆಯಲ್ಲಿ ತಂಡದಿಂದ ಕೈಬಿಡಲಾಗಿದೆ. ಈ ನಡುವೆ ಬಿಸಿಸಿಐ(BCCI) ವೈದ್ಯಕೀಯ ತಂಡ ರಾಹುಲ್ ಅವರನ್ನು ನಿಕಟವಾಗಿ ನಿಗಾವಹಿಸಿತ್ತು ಹಾಗೂ ಅವರ ಗಾಯದ ಸಮಸ್ಯೆ ನಿರ್ವಹಣೆಗಾಗಿ ಲಂಡನ್‌ನಲ್ಲಿರುವ ತಜ್ಞರೊಂದಿಗೆ ಸಮನ್ವಯ ನಡೆಸುತ್ತಿದ್ದಾರೆ.

ಈ ನಡುವೆ 4ನೇ ಟೆಸ್ಟ್‌ನಿಂದ ವಿಶ್ರಾಂತಿ ಪಡೆದಿದ್ದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ, 5ನೇ ಟೆಸ್ಟ್ ಪಂದ್ಯಕ್ಕೆ ತಂಡಕ್ಕೆ ಮರಳಿದ್ದಾರೆ. ಆದರೆ ಮಾರ್ಚ್ 2ರಿಂದ ಮುಂಬೈ ವಿರುದ್ಧ ರಣಜಿ ಟ್ರೋಫಿ(Ranji Trophy) ಸೆಮಿಫೈನಲ್ ಪಂದ್ಯದಲ್ಲಿ ತಮಿಳುನಾಡು(Tamilnadu) ತಂಡದ ಪರವಾಗಿ ಆಡುವ ಸಲುವಾಗಿ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ತಂಡದಿಂದ ಬಿಡುಗಡೆ ಮಾಡಲಾಗಿದೆ. ಭಾರತ ಹಾಗೂ ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ ಪಂದ್ಯ ಮಾರ್ಚ್ 7ರಿಂದ ಧರ್ಮಶಾಲಾದಲ್ಲಿ ನಡೆಯಲಿದೆ.
5ನೇ ಟೆಸ್ಟ್‌ಗೆ ಭಾರತ ತಂಡ: ರೋಹಿತ್ ಶರ್ಮಾ(ನಾಯಕ), ಜಸ್ಪ್ರೀತ್ ಬುಮ್ರಾ, ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್, ಕೆಎಸ್ ಭರತ್, ದೇವದತ್ ಪಡಿಕ್ಕಲ್, ಆರ್. ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.
#TeamIndia #BCCI #England #TestSeries #KLRahul #JaspritBumrah






