ಕರ್ನಾಟಕದ ಯುವ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ವೆಸ್ಟ್ ಇಂಡೀಸ್ ವಿರುದ್ಧದ ಟಿ-20 ಸರಣಿಯಿಂದ ಹೊರಬಿದ್ದಿದ್ದಾರೆ.
ಕೊರೊನಾ ವೈರಸ್ ಸೋಂಕಿನಿಂದ ಬಳಲುತ್ತಿದ್ದ ಕೆಎಲ್ ರಾಹುಲ್ ಅವರನ್ನು ವೆಸ್ಟ್ ಇಂಡೀಸ್ ವಿರುದ್ಧದ ಟಿ-20 ಸರಣಿಯಿಂದ ಹೊರಗಿಡಲು ಬಿಸಿಸಿಐ ನಿರ್ಧರಿಸಿದೆ.

ಗಾಯದಿಂದ ಚೇತರಿಸಿಕೊಂಡ ಬೆನ್ನಲ್ಲೇ ಕೆಎಲ್ ರಾಹುಲ್ ಕೊರೊನಾ ವೈರಸ್ ನಿಂದ ಬಳಲುತ್ತಿದ್ದರು. ಗಾಯದ ಕಾರಣ ತವರಿನಲ್ಲಿ ನಡೆದ ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದರು.