ಪೆಟ್ರೋಲ್ ಡೀಸೆಲ್ ಗ್ಯಾಸ್, ವಿದ್ಯುತ್ ಮತ್ತು ಇನ್ನಿತರೆ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ರಾಜ್ಯದ ಜನರಿಗೆ ರಾಜ್ಯ ಸರ್ಕಾರ ಮತ್ತದು ಶಾಕ್ ನೀಡಲು ಸದ್ದವಾಗಿದೆ. ಹಾಲಿನ ದರವನ್ನು ಲೀಟರ್ಗೆ 5 ರೂಪಾಯಿ ಹೆಚ್ಚಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ.
ಹೌದು, ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ಹಾಲಿನ ದರವನ್ನು ಲೀಟರ್ಗೆ 5 ರೂಪಾಯಿ ಹೆಚ್ಚಿಸುವ ಬಗ್ಗೆ ಚಿಂತನೆ ನಡೆಸುತ್ತಿದ್ದು, ಈ ಕುರಿತ ಸರ್ಕಾರದ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸಾಗಿದೆ ಎಂದು ಮೂಲಗಳು ತಿಳಿಸಿವೆ. 2020 ರ ಫೆಬ್ರವರಿಯಲ್ಲಿ ಪ್ರತಿ ಲೀಟರ್ ಹಾಲಿಗೆ 2 ರೂಪಾಯಿ ಹೆಚ್ಚಳ ಮಾಡಿತ್ತು.
ಬೆಲೆ ಏರಿಕೆಯ ಪ್ರಸ್ತಾವನೆಯಲ್ಲಿದೆ ಎಂದು ಖಚಿತಪಡಿಸಿದ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ ಸಿ ಸತೀಶ್, ಇಂಧನ ಮತ್ತು ವಿದ್ಯುತ್ ಶುಲ್ಕ ಗಮನದಲ್ಲಿಟ್ಟುಕೊಂಡು ಹಾಲಿನ ದರ ಏರಿಕೆಗೆ ಒತ್ತಾಯಿಸಲಾಗುತ್ತಿದೆ ಎಂದು ಡಿಹೆಚ್ಗೆ ತಿಳಿಸಿದರು. ಹೆಚ್ಚುತ್ತಿರುವ ಸಾಗಣೆ ವೆಚ್ಚ ಹಾಲು ರೈತರ ಹೊರೆಯನ್ನು ಹೆಚ್ಚಿಸುತ್ತಿದೆ ಎಂದು ಇದೇ ವೇಳೆ ಹೇಳಿದ್ದಾರೆ. ಈಗಾಗಲೇ ಐದು ರೂ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಸಿಎಂ ದೆಹಲಿಯಿಂದ ಬಂದ ತಕ್ಷಣ ಮಾತನಾಡುತ್ತೇವೆ ಅವರಿಗೆ ಎರಡು ರುಪಾಯಿಯಾದರೂ ಹೆಚ್ಚಳಮಾಡುವಂತೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.
85ರಷ್ಟು ಬೆಲೆ ಏರಿಕೆಯಿಂದ ರೈತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ ಅವರು, ಹೆಚ್ಚಿದ ಬೆಲೆ ಏರಿಕೆಯಿಂದ ಏಜೆಂಟರು ಮತ್ತು ಸೊಸೈಟಿಗಳಿಗೂ ಲಾಭವಾಗಲಿದೆ ಎಂದು ಸತೀಶ್ ಹೇಳಿದರು.
ಆದರೆ, ಹಾಲಿನ ದರ ಹೆಚ್ಚಳಕ್ಕೆ ಮಾಜಿ ಸಚಿವ ಹಾಗೂ ಕೆಎಂಎಫ್ನ ಮಾಜಿ ಅಧ್ಯಕ್ಷ ಎಚ್.ಡಿ ರೇವಣ್ಣ ವಿರೋಧ ವ್ಯಕ್ತಪಡಿಸಿದ್ದು, ಈ ಬಗ್ಗೆ ಹೊಸದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ರಾಜ್ಯದಲ್ಲಿ 14 ಹಾಲು ಒಕ್ಕೂಟಗಳಿವೆ. ಹಾಸನ ಹಾಲು ಒಕ್ಕೂಟ ಬೆಲೆ ಏರಿಕೆ ಪ್ರಸ್ತಾಪ ಮಾಡಿಲ್ಲ. ಬೇರೆ ಯಾವ ಒಕ್ಕೂಟದವರು ಹಾಲಿನ ದರ ಹೆಚ್ಚಳಕ್ಕೆ ಕೇಳಿದ್ದಾರೋ ಗೊತ್ತಿಲ್ಲ. ಕೆಎಂಎಫ್ನ ನಷ್ಟ ಸರಿದೂಗಿಸಲು ಹಾಲಿನ ಬೆಲೆ ಹೆಚ್ಚಳ ಮಾಡುವುದು ಸೂಕ್ತವಲ್ಲ,” ಎಂದು ಅಭಿಪ್ರಾಯಪಟ್ಟಿದ್ದಾರೆ.