ಕೆಲವರು ಸುಖಾಸುಮ್ಮನೆ ಸಿಎಂ ಹೆಸರು ದುರ್ಬಳಕೆ ಮಾಡಿಕೊಳ್ಳೋದು ಬೇಡ ಎಂಬ ಡಿಸಿಎಂ ಡಿಕೆಶಿ (Dcm Dk Shivakumar) ಹೇಳಿಕೆಗೆ ಸಚಿವ ಕೆ.ಎನ್ ರಾಜಣ್ಣ (KN Rajanna) ತಿರುಗೇಟು ನೀಡಿದ್ದಾರೆ.

ನಾವು ಯಾರ ಹೆಸರನ್ನು ದುರ್ಬಳಕೆ ಮಾಡಿಕೊಂಡಿಲ್ಲ.ಅವರು ಎಐಸಿಸಿ (AICC) ಹೆಸರನ್ನ ದುರ್ಬಳಕೆ ಮಾಡಿಕೊಳ್ಳುವುದು ಬೇಡ.ಎಲ್ಲದಕ್ಕೂ ಎಐಸಿಸಿ ಹೇಳಿದೆ ಅಂತ ಎಐಸಿಸಿ ಹೆಸರನ್ನ ಅವರು ದುರ್ಬಳಕೆ ಮಾಡಿಕೊಳ್ಳಬಾರದು, ಅವರು ಎಐಸಿಸಿ ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬುದು ಅದು ಆರೋಪ ಅಲ್ಲ ವಾಸ್ತವ ಎಂದಿದ್ದಾರೆ.

ಇನ್ನು ಈ ವೇಳೆ ಗರಂ ಆದ ರಾಜಣ್ಣ, ನಾನು ಯಾರಿದಂಲೂ ಶಿಸ್ತಿನ ಪಾಠ ಮಾಡಿಸಿಕೊಳ್ಳಬೇಕಿಲ್ಲ ೫೦ ವರ್ಷ ಪಕ್ಷಕ್ಕೆ ಕೆಲಸ ಮಾಡಿದ್ದೇನೆ. ನಾನು ಮಾತನಾಡಿದರೆ ಸತ್ಪರಿಣಾಮ ಬೀರುವ ಮಾತನಾಡುತ್ತೇನೆ ಹೊರತು ದುಷ್ಪರಿಣಾಮ ಬೀರುವ ಮಾತನಾಡಲ್ಲ ಎಂದು ಕೆ.ಎನ್ ರಾಜಣ್ಣ ಹೇಳಿದ್ದಾರೆ.
ನನಗೂ ಡಿ.ಕೆ.ಶಿವಕುಮಾರ್ ಗೂ ವೈಯುಕ್ತಿಕವಾಗಿ ಏನೂ ಇಲ್ಲಾ. ಆದ್ರೆ ವಿಚಾರ ಬೇಧ ಇರಬಹುದು ಅಷ್ಟೆ.ವಿಧಾನಸೌಧಕ್ಕೆ ಒಂದು ರಸ್ತೆಯಲ್ಲಿ ಹೋಗೋಣ ಅಂದರೆ ಅವರು ಮತ್ತೊಂದು ರಸ್ತೆಯಲ್ಲಿ ಹೋಗೋಣ ಎನ್ನಬಹುದು. ನಾನು ಅವರು ಸಾಕಷ್ಟು ವರ್ಷದ ಸ್ನೇಹಿತರು,ಒಟ್ಟಿಗೆ ವಿದೇಶ ಪ್ರವಾಸ ಎಲ್ಲ ಮಾಡಿದ್ದೇವೆ.ಅವರನ್ನು ಮನೆಗೆ ಒಂದು ದಿನ ಊಟಕ್ಕೆ ಕರೆಯುತ್ತೇನೆ ಎಂದು ಹೇಳಿದ್ದಾರೆ.