ಅನ್‌ಲಾಕ್ ‌ಆದರೂ ಕೊಡಗಿನಲ್ಲಿ ಪ್ರವಾಸೋದ್ಯಮಕ್ಕೆ ನಿರ್ಬಂಧ ಹೇರಲು ಒತ್ತಾಯ

ಕಳೆದ ಎರಡು ತಿಂಗಳಿನ ಲಾಕ್‌ಡೌನ್‌ನಿಂದಾಗಿ ಕೊಡಗಿನ ಪ್ರವಾಸೋದ್ಯಮ ನೆಲಕಚ್ಚಿದೆ. ಮುಂದಿನ ಜೂನ್ ೨೧ ರ ನಂತರ ಜಿಲ್ಲೆಯಲ್ಲಿ ಲಾಕ್ ಡೌನ್ ತೆರವುಗೊಳ್ಳುವ ಅವಕಾಶ ಹೆಚ್ಚಾಗಿದ್ದು, ಕೊಡಗಿನಲ್ಲಿ ಮಳೆಗಾಲ ಪ್ರಾರಂಭವಾಗುವ ಕಾರಣ ಕೊಡಗಿನ ಜಲತೊರೆಗಳನ್ನು ವೀಕ್ಷಿಸಲು ಹಾಗೂ ಇಲ್ಲಿನ ಪ್ರಕೃತಿ ಸೌಂದರ್ಯ ಅನುಭವಿಸಲು ಮತ್ತೆ ಜನಸಾಗರ ಹರಿದು ಬರುವ ಸಾದ್ಯತೆ ಹೆಚ್ಚಾಗಿದೆ. ಇದಕ್ಕೆ ಈಗಲೇ ಕಡಿವಾಣ ಹಾಕಬೇಕಿದೆ. ಯಾವುದೇ ಕಾರಣಕ್ಕೂ ಮಳೆಗಾಲ ಮುಗಿಯುವವರೆಗೂ ಪ್ರವಾಸೋದ್ಯಮಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಅಖಿಲ ಕೊಡವ ಸಮಾಜ ಯೂತ್ ವಿಂಗ್ ಒತ್ತಾಯಿಸಿದೆ.

ಈ ಕುರಿತು   ಮಾತನಾಡಿದ ಅಖಿಲ ಕೊಡವ ಸಮಾಜ ಯೂತ್ ವಿಂಗ್ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ಯಾವುದೇ ಕಾರಣಕ್ಕೂ ಮಳೆಗಾಲ ಮುಗಿಯುವವರೆಗೂ ಪ್ರವಾಸೋದ್ಯಮವನ್ನು ಕೊಡಗಿನಲ್ಲಿ ಆರಂಭಿಸಬಾರದು, ಪ್ರವಾಸೋದ್ಯಮಕ್ಕೆ ಅವಕಾಶ ಮಾಡಿಕೊಟ್ಟರೆ ಕೊಡಗಿನಾದ್ಯಂತ ಸಂಘಟಿತ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಈಗಾಗಲೇ ಕೊಡಗಿನ ಜನರು ಕಳೆದ ಮೂರು ವರ್ಷಗಳಿಂದ ನಿರಂತರ ನೆರೆಹಾವಳಿ, ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿ ಸಂಕಷ್ಟದಲ್ಲಿದ್ದು, ಇದೀಗ ಕೊರೋನ ಸಾವು ನೋವುಗಳು ಹಾಗೂ ಲಾಕ್ ಡೌನ್’ನಿಂದ ಜನರು ತತ್ತರಿಸಿದ್ದಾರೆ. ಅನೇಕ ಜನರು ತಮ್ಮವರನ್ನು ಕಳೆದುಕೊಂಡು ನೋವಿನಲ್ಲಿದ್ದು ಇದೀಗ ಒಂದಷ್ಟು ಚೇತರಿಸಿಕೊಳ್ಳುತ್ತಿದ್ದಾರೆ, ಹೀಗಿರುವಾಗ ಮತ್ತೆ ಪ್ರವಾಸೋದ್ಯಮ ತೆರೆದುಕೊಂಡರೆ ಹೆಮ್ಮಾರಿ ಕೊರೋನ ಅಲೆ ಬಂದು ಅಪ್ಪಳಿಸಲಿದೆ, ಇದಕ್ಕೆ ಜಿಲ್ಲಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಅವಕಾಶ ಮಾಡಿಕೊಡಬಾರದು ಎಂದು ಅವರು ಒತ್ತಾಯಿಸಿದ್ದಾರೆ.

ಇವತ್ತು ಪ್ರವಾಸೋದ್ಯಮದಿಂದಲೇ ಕೊಡಗಿನಂತಹ ಪುಟ್ಟ ಜಿಲ್ಲೆ ಇಂದು ಡೇಂಜರ್ ವಲಯಕ್ಕೆ ತಲುಪಿದ್ದು, ಇದೀಗ ಕೊಡಗು ಜಿಲ್ಲೆ ಒಂದಷ್ಟು ಚೇತರಿಸಿಕೊಂಡಿದೆ ಹೊರತು ಸಂಪೂರ್ಣವಾಗಿ ಕೊರೋನ ಮುಕ್ತವಾಗಿಲ್ಲ .ಹಳ್ಳಿ ಹಳ್ಳಿಗಳಿಗೂ ವ್ಯಾಪಿಸಿರುವ ಕೊರೋನ ಅಲೆ ಅದೆಷ್ಟೋ ಮುಗ್ಧ ಜೀವಗಳನ್ನು ಬಲಿ ತೆಗೆದುಕೊಂಡಿದೆ. ಮತ್ತೆ ನಮ್ಮವರನ್ನು ಸಾವಿನ ದವಡೆಗೆ ತಳ್ಳಲು ನಾವು ಸಿದ್ದರಿಲ್ಲ ಯಾವುದೇ ಕಾರಣಕ್ಕೂ ಮಳೆಗಾಲ ಮುಗಿಯುವವರೆಗೂ ಹೋಂಸ್ಟೇ, ರೆಸಾರ್ಟ್ ಸೇರಿದಂತೆ ಪ್ರವಾಸೋದ್ಯಮಗಳು ಸಂಪೂರ್ಣ ಬಂದ್ ಆಗಿಯೇ ಇರಬೇಕು. ಇವರಲ್ಲಿ ಆರ್ಥಿಕವಾಗಿ ತುಂಬಾ ಸಂಕಷ್ಟದಲ್ಲಿರುವವರಿಗೆ ಸರಕಾರವೇ ಸಹಕಾರ ನೀಡಲಿ ಹೊರತು ಜಿಲ್ಲೆಯ ಜನರನ್ನು ಬಲಿಕೊಡುವುದು ಬೇಡ. ರಾಜ್ಯದಲ್ಲಿ ಅನ್ ಲಾಕ್ ಆದರೂ ಜಿಲ್ಲೆಯಲ್ಲಿ ಲಾಕ್ ಡೌನ್ ಒಂದಿಷ್ಟು ಸಡಿಲಿಕೆ ಇರಲಿ ಹೊರತು ಮಳೆಗಾಲ ಮುಗಿಯುವವರೆಗೂ ಸಂಪೂರ್ಣ ಸಡಿಲಿಕೆ ಬೇಡ. ಗಡಿ ತಪಾಸಣೆ ವ್ಯವಸ್ಥೆ ಮಳೆಗಾಲ ಮುಗಿಯುವವರೆಗೂ ಮುಂದುವರಿಯಲಿ ಕೇವಲ ಹೊರಜಿಲ್ಲೆಯಲ್ಲಿರುವ ಕೊಡಗು ಮೂಲದವರಿಗೆ ಕೃಷಿಕರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶ ನೀಡಿದ್ದರೆ ಮಾತ್ರ ಸಾಕು. ಅವರು ಕೂಡ ಎಲ್ಲೆಂದರಲ್ಲಿ ಓಡಾಡಡದೆ ಜಿಲ್ಲೆಯ ಜನರ ಆರೋಗ್ಯ ಕಡೆ ಕೂಡ ಗಮನ ಹರಿಸಬೇಕಿದೆ. ಹೊರ ಜಿಲ್ಲೆಯಲ್ಲಿರುವ ಕೊಡಗು ಮೂಲದ ಕೃಷಿಕರಿಗೆ ಹೊರತುಪಡಿಸಿ ಪ್ರವಾಸಕ್ಕಾಗಿ ಬರುವವರಿಗೆ ಸಂಪೂರ್ಣ ಕಡಿವಾಣ ಹಾಕಬೇಕಾಗಿದೆ. ಒಂದು ವೇಳೆ ಪ್ರವಾಸೋದ್ಯಮ ಲಾಭಿಗೆ ಮಣಿದು ಸರ್ಕಾರ ಪ್ರವಾಸೋದ್ಯಮಕ್ಕೆ ಅವಕಾಶ ನೀಡಿದಲ್ಲಿ ಉಗ್ರ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿದೆ.

 ಹಾಗೇ ಕೊಡಗಿನಲ್ಲಿ ಈಗಾಗಲೇ ಮಳೆಗಾಲದ ಮುನ್ಸೂಚನೆ ನೀಡಿದ್ದು ಕೊಡಗು ಮಲೆನಾಡು ಪ್ರದೇಶವಾಗಿರುವ ಕಾರಣ ನಗರ ಪ್ರದೇಶಗಳಲ್ಲಿ ಹೆಚ್ಚುವರಿ ಇರುವ ಕೊರೋನ ರೋಗ ನಿರೋಧಕ ಚುಚ್ಚುಮದ್ದುಗಳನ್ನು ಕೊಡಗಿಗೆ ತರಿಸಿಕೊಳ್ಳುವ ಮೂಲಕ ತ್ವರಿತವಾಗಿ ಜಿಲ್ಲೆಯಲ್ಲಿ ೪೫ರ ಮೇಲ್ಪಟ್ಟ ವಯೋಮಿತಿಯವರಿಗೆ ಮಾತ್ರವಲ್ಲ ೧೮ರ ಮೇಲಿರುವವರಿಗೂ ನೀಡಬೇಕಿದೆ. ಕಾರಣ ಮುಂದಿನ ವಾರದಿಂದ ಬಿರುಸಿನ ಮಳೆ ಪ್ರಾರಂಭವಾದರೆ ಜನರು ಹೊರಗೆ ಬರುವುದು ಕಷ್ಟ ಸಾದ್ಯ. ಇದನ್ನು ಗಣನೆಗೆ ತೆಗೆದುಕೊಂಡು ವಿಶೇಷ ಜಿಲ್ಲೆ ಎಂದು ಪರಿಗಣಿಸಿ ಈ ವ್ಯವಸ್ಥೆ ಮಾಡಬೇಕಿದೆ. ಮಳೆಗಾಲದಲ್ಲಿ ಸೋಂಕು ಬಹಳ ಸುಲಭವಾಗಿ ಹರಡುವ ಸಾಧ್ಯತೆ ಇದ್ದು, ಮುಂದೆ ಬರುತ್ತಿರುವ ಮೂರನೇ ಅಲೆಯನ್ನು ಮನದಲ್ಲಿಟ್ಟುಕೊಂಡು ಜಿಲ್ಲಾಡಳಿತ ಹಾಗೂ ಕೊಡಗಿನ ಉಸ್ತುವಾರಿ ಸಚಿವರು, ಶಾಸಕರು, ಸಂಸದರು ಈ ಎಲ್ಲಾ ರೀತಿಯ ಕಠಿಣ ಕ್ರಮಕ್ಕೆ ಮುಂದಾಗಬೇಕಿದೆ. ಈಗಾಗಲೇ ಕೊಡಗನ್ನು ೧೫ರಿಂದ ೨೦ ದಿವಸ ಸಂಪೂರ್ಣ ಲಾಕ್ ಡೌನ್ ಮಾಡಿ ಎಂದು ಒತ್ತಾಯಿಸಿ ಸಾಕಾಯಿತು ಹೊರತು ಏನು ಪ್ರಯೋಜನ ಆಗಿಲ್ಲ. ಇಷ್ಟೊಂದು ಸಮಯ ಲಾಕ್ ಡೌನ್ ಮಾಡಿ ಏನೂ ಪ್ರಯೋಜನವಿಲ್ಲದಾಗಿದೆ. ಕೊಡಗಿಗೆ ಸಂಪೂರ್ಣ ಲಾಕ್ ಡೌನ್ ಅನಿವಾರ್ಯವಾಗಿತ್ತು. ಆದರೆ ಇದೀಗ ಕೃಷಿ ಚಟುವಟಿಕೆಯ ಸಮಯವಾಗಿದ್ದು, ಜನರಿಗೆ ವರ್ಷದ ಬದುಕನ್ನು ಕಟ್ಟಿಕೊಳ್ಳುವ ಸಮಯವಾಗಿದೆ. ಇದಕ್ಕಾಗಿ ಹೊರಜಿಲ್ಲೆಯ ಮಂದಿಗೆ ಹಾಗೂ ಪ್ರವಾಸಿಗರಿಗೆ ನಿರ್ಬಂಧ ಹಾಕುವುದು ಒಂದೇ ನಮಗಿರುವ ಹಾದಿ.

ಹೊರಜಿಲ್ಲೆಯಲ್ಲಿರುವ ಕೊಡಗು ಮೂಲದ ರೈತರಿಗೆ ಕೃಷಿ ಆದಾರದ ಮೇಲೆ ಕೊಡಗಿನೊಳಗೆ ಪ್ರವೇಶಿಸಲು ಅವಕಾಶ ಬಿಟ್ಟು ಪ್ರವಾಸಿಕರಿಗೆ ಅವಕಾಶ ಮಾಡಿಕೊಟ್ಟು, ಪ್ರವಾಸೋದ್ಯಮದ ಬಾಗಿಲು ಮತ್ತೆ ಮಳೆಗಾಲ ಮುಗಿಯುವ ಮೊದಲೆ ತೆರೆದುಕೊಂಡರೆ ಕೊಡಗಿನಾದ್ಯಂತ ಎಲ್ಲಾ ಸಂಘ ಸಂಸ್ಥೆಗಳು ಸೇರಿದಂತೆ ಕೊಡಗಿನಲ್ಲಿರುವ ಎಲ್ಲಾ ಕೊಡವ ಸಮಾಜಗಳನ್ನು ಸಂಘಟಿಸಿ ಹೋರಾಟದ ಹಾದಿಯನ್ನು ಹಿಡಿಯಬೇಕಾಗುತ್ತದೆ ಎಂದು ಅಖಿಲ ಕೊಡವ ಸಮಾಜ ಯೂತ್ ವಿಂಗ್ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ಎಚ್ಚರಿಸಿದ್ದಾರೆ. ಈಗಾಗಲೇ ಈ ವಿಷಯವನ್ನು ಮಾನ್ಯ ಜಿಲ್ಲಾಧಿಕಾರಿಗಳು ಸೇರಿದಂತೆ ಉಸ್ತುವಾರಿ ಸಚಿವರು, ಜಿಲ್ಲೆಯ ಶಾಸಕರುಗಳು ಹಾಗೂ ಸಂಸದರ ಗಮನಕ್ಕೆ ತರಲಾಗಿದ್ದು ಲಾಕ್ ಡೌನ್ ಮುಂದುವರಿಸುವ ಸೂಚನೆಯನ್ನು ಶಾಸಕರು ನೀಡಿರುವುದು ಸ್ವಾಗತಾರ್ಹ ಹಾಗೇ ಮುಂದಿನ ದಿನಗಳಲ್ಲಿ ಲಾಕ್ ಡೌನ್ ತೆರವುಗೊಂಡರು ಮಳೆಗಾಲ ಕಳೆಯುವವರೆಗೂ ಜಿಲ್ಲೆಯಲ್ಲಿ ಪ್ರವಾಸೋದ್ಯಮ ತೆರೆದುಕೊಳ್ಳದಿರಲಿ. ಹಾಗೇ ಗಡಿ ತಪಾಸಣೆ ಎಂದಿನಂತೆ ಮುಂದುವರಿಯಲಿ ಎಂದು ಅಖಿಲ ಕೊಡವ ಸಮಾಜ ಯೂತ್ ವಿಂಗ್ ಒತ್ತಾಯಿಸುತ್ತದೆ.

ಕೊಡವ ಸಮಾಜ ಯೂತ್‌ವಿಂಗ್‌ ನ ಒತ್ತಾಯಕ್ಕೆ ಹಲವಾರು ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿದ್ದು ಈ ಕುರಿತು ಈ ಶನಿವಾರ ಸಭೆ ಸೇರಿ ಒಮ್ಮತಕ್ಕೆ ಬರಲಿವೆ ಎಂದು ತಿಳಿದು ಬಂದಿದೆ.

Related posts

Latest posts

ಬಡವರಿಗೆ ನೆರವಾಗುವುದನ್ನು ತಡೆಯುವ ಪೊಲೀಸ್ ಅಧಿಕಾರಿಗಳಿಗೆ ಬಿಜೆಪಿ ಬ್ಯಾಡ್ಜ್, ಬಾವುಟ ಕೊಡಿ; ಸರಕಾರದ ವಿರುದ್ಧ ಡಿಕೆಶಿ ಗರಂ

'ಬಿಜೆಪಿ ನಾಯಕರು ಜನರ ತೆರಿಗೆ ಹಣದಲ್ಲಿ ನೀಡುವ ಸರ್ಕಾರಿ ಆಹಾರ ಕಿಟ್, ಔಷಧಿ ಮೇಲೆ ತಮ್ಮ ಹಾಗೂ ಪ್ರಧಾನಿ ಫೋಟೋ ಹಾಕಿಕೊಂಡು ಪ್ರಚಾರ ಪಡೆಯುತ್ತಿದ್ದರೆ, ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ತಮ್ಮ ಶ್ರಮಪಟ್ಟು ದುಡಿದ...

ಸುರಕ್ಷಿತವಾಗಿ ಲಾಕ್‌ಡೌನ್ ತೆರವುಗೊಳಿಸಲು ಸರ್ಕಾರಕ್ಕೆ 10 ಶಿಫಾರಸು ನೀಡಿದ ತಜ್ಞರ ತಂಡ SAGE

ಕರ್ನಾಟಕದಲ್ಲಿ ಕರೋನಾ ನಿಯಂತ್ರಿಸಲು ಹೇರಿರುವ ಲಾಕ್‌ಡೌನ್ ಅನ್ನು ಹೇಗೆ ಸುರಕ್ಷಿತವಾಗಿ ಹಾಗೂ ಸೂಕ್ತವಾಗಿ ತೆರವುಗೊಳಿಸಬಹುದೆಂದು ತಜ್ಞರ ತಂಡವು ಸರ್ಕಾರಕ್ಕೆ ಹತ್ತು ಶಿಫಾರಸುಗಳನ್ನು ನೀಡಿದೆ. ಕೋವಿಡ್ ವಿಪತ್ತಿನ ವಿರುದ್ಧದ ಹೋರಾಟಕ್ಕೆ ರೂಪುಗೊಂಡ SAGE (ಸಮಾಜಮುಖಿ ಕಾರ್ಯಪ್ರವೃತ್ತ...

ಬೆಲೆ ಏರಿಕೆ ಮಾಡಿ ಸರ್ಕಾರ ಜನರನ್ನು ಪಿಕ್ ಪಾಕೆಟ್ ಮಾಡುತ್ತಿದೆ- ಡಿ.ಕೆ ಶಿವಕುಮಾರ್

 ಇಂಧನ ಬೆಲೆ ಏರಿಕೆ ಹಿನ್ನೆಲೆ,  ರಾಜ್ಯಾದ್ಯಂತ ಜೂನ್‌ 11 ರಿಂದ 15 ರವರೆಗೆ '100 ನಾಟ್ ಔಟ್' ಹೆಸರಲ್ಲಿ ಕಾಂಗ್ರೆಸ್‌ ಪಕ್ಷದಿಂದ ಆಂದೋಲನ ನಡೆಸಲಾಗುತ್ತಿದೆ. ರಾಜ್ಯಾದ್ಯಂತ ಇಂದು 900ಕ್ಕೂ ಹೆಚ್ಚು ಜಿ.ಪಂ, ಹೋಬಳಿ...