ಕಾಂಗ್ರೆಸ್‌ನಲ್ಲಿ ಹಲವು ಪ್ರಮುಖ ಬೆಳವಣಿಗೆಗಳು ನಡೆಯುತ್ತಿವೆ. ಮುಖ್ಯವಾಗಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಜೋರಾಗಿ ಚರ್ಚೆ ನಡೆಯುತ್ತಿದೆ. ಮಹಿಳಾ ಮುಖ್ಯಮಂತ್ರಿ ಹಾಗೂ ದಲಿತ ಮುಖ್ಯಮಂತ್ರಿ ವಿಚಾರಗಳು ಬಂದಿವೆ.

ಬದಲಾವಣೆ ಯಾವುದೇ ಕ್ಷಣದಲ್ಲಿ ಬೇಕಾದರೂ ಆಗಬಹುದು ಎನ್ನುವ ಪರಿಸ್ಥಿತಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮುಡಾದಿಂದ ಮುಕ್ತಿ ಸಿಗುತ್ತಿಲ್ಲ. ಈ ರೀತಿ ಇರುವಾಗಲೇ ರಾಜ್ಯ ಸರ್ಕಾರದ ಬಗ್ಗೆ ರಾಜ್ಯ ಸರ್ಕಾರದಲ್ಲಿ ಹಲವು ಬೆಳವಣಿಗೆಗಳು ನಡೆಯುತ್ತಿವೆ. ಇದೀಗ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಕೋಡಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಹಲವು ಅಚ್ಚರಿಯ ಬೆಳವಣಿಗೆಗಳು ನಡೆಯುತ್ತಿವೆ. ಅದರಲ್ಲೂ ಮುಖ್ಯಮಂತ್ರಿಯ ಬದಲಾವಣೆಗೆ ಕೆಲವರು ಪಟ್ಟುಹಿಡಿದು ಕುಳಿತಿದ್ದಾರೆ. ಕರ್ನಾಟಕ ಕಾಂಗ್ರೆಸ್‌ನ ದಲಿತ ನಾಯಕರು ದೆಹಲಿ ಪ್ರವಾಸವನ್ನು ಮಾಡುತ್ತಿದ್ದಾರೆ. ಪದೇ ಪದೇ ಕೆಲವು ಕಾಂಗ್ರೆಸ್ ನಾಯಕರು ಹೈಕಮಾಂಡ್ ಭೇಟಿ ಮಾಡಿ ಚರ್ಚೆ ಮಾಡುತ್ತಿರುವುದು ಸಹ ಭಾರೀ ಚರ್ಚೆಗೆ ಕಾರಣವಾಗಿದೆ.
ಈ ರೀತಿ ಇರುವಾಗಲೇ ಈ ಸರ್ಕಾರ ಹಾಗೂ ಮುಖ್ಯಮಂತ್ರಿ ಮುಂದುರಿಯುವ ಸಾಧ್ಯತೆ ಹೇಗೆ, ಮುಂದಿನ ದಿನಗಳಲ್ಲಿ ರಾಜಕೀಯ ಪರಿಸ್ಥಿತಿ ಯಾವ ರೀತಿ ಇರಲಿದೆ ಎಂದು ಕೊಡಿಶ್ರೀ ಅವರು ಭವಿಷ್ಯ ನುಡಿದಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಹವಾಮಾನ ಪರಿಸ್ಥಿತಿ ಯಾವ ರೀತಿ ಇರಲಿದೆ ಎನ್ನುವ ಬಗ್ಗೆಯೂ ಅವರು ಭವಿಷ್ಯ ನುಡಿದಿದ್ದಾರೆ. ಅವರು ಈ ಬಗ್ಗೆ ಹೇಳಿದ್ದೇನು ಅಂತ ನೋಡೋಣ.

ಕಾಂಗ್ರೆಸ್ ದಲಿತ ನಾಯಕರಿಗೆ ಆರ್.ಅಶೋಕ್ ಗಂಭೀರ ಪ್ರಶ್ನೆ
ಕೊಡಿಶ್ರೀಗಳು ಹೇಳುವ ಭವಿಷ್ಯವಾಣಿ ಬಹುತೇಕ ಸಂದರ್ಭಗಳಲ್ಲಿ ನಿಜವಾಗಿರುವುದು ಇದೆ. ನಟ ದರ್ಶನ್ ಅವರ ವಿಚಾರದಲ್ಲಿ ಹಾಗೂ ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರಿಗೆ ಏನಾಗಲಿದೆ ಎನ್ನುವ ವಿಚಾರಗಳ ಬಗ್ಗೆ ಅವರು ಹೇಳಿದ ಭವಿಷ್ಯವಾಣಿಯು ಬಹುತೇಕ ನಿಜವಾಗಿದೆ. ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರದ ಅಧಿಕಾರ ಅವಧಿಯ ಬಗ್ಗೆ ಕೊಡಿಶ್ರೀ ಅವರು ಸ್ಪೋಟಕ ಹೇಳಿಕೆ ಕೊಟ್ಟಿದ್ದಾರೆ.