ದುಬೈನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಬಳಿಕ ತಂಡದ ಟಿ20 ನಾಯಕ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ವಿರಾಟ್ ಕೊಹ್ಲಿ ಘೋಷಿಸಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವಂತ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಮುಂದೆ ದುಬೈನಲ್ಲಿ ನಡೆಯುತ್ತಿರುವಂತ ಟಿ20 ವಿಶ್ವಕಪ್ ಆಟದ ನಂತರ, ಟೀಂ ಇಂಡಿಯಾ ಕ್ರಿಕೆಟ್ ನಾಯಕತ್ವ ಸ್ಥಾನದಿಂದ ಕೆಳಗೆ ಇಳಿಯೋದಾಗಿ ಪ್ರಕಟಿಸಿದ್ದಾರೆ.
ಟಿ20 ವಿಶ್ವಕಪ್ ಟೂರ್ನಿ ಕೆಲವೇ ದಿನಗಳು ಬಾಕಿ ಇರುವಾಗ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸೀಮಿತ ಓವರ್‌ಗಳ ಟೀಂ ಇಂಡಿಯಾ ನಾಯಕತ್ವದಿಂದ ಹಿಂದೆ ಸರಿಯಲು ತೀರ್ಮಾನಿಸಿದ್ದಾರೆ.
ಟಿ20 ವಿಶ್ವಕಪ್ ಬಳಿಕ ವಿರಾಟ್ ಕೊಹ್ಲಿ ಭಾರತ ಸೀಮಿತ ಓವರ್‌ಗಳ ತಂಡದ ನಾಯಕತ್ವದಿಂದ ಕೆಳಗಿಳಿಯಲಿದ್ದು, ರೋಹಿತ್ ಶರ್ಮಾ ನಾಯಕತ್ವ ಪಟ್ಟ ವಹಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.