ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅತ್ಯಧಿಕ ರನ್ ಗಳಿಸಿದ ಖ್ಯಾತಿ ಹೊಂದಿರುವ ಟೀಮ್ ಇಂಡಿಯಾದ ವಿರಾಟ್ ಕೊಹ್ಲಿ(Virat Kohli) ವಿಶ್ವಕಪ್ ಟೂರ್ನಿಯಲ್ಲಿ(T20 World Cup) ಇದೇ ಮೊದಲ ಬಾರಿಗೆ ಗೋಲ್ಡನ್ ಡಕ್ ಆದ ಕೆಟ್ಟ ದಾಖಲೆಯನ್ನು ಬರೆದಿದ್ದಾರೆ. ಇದು ಮಾತ್ರವಲ್ಲದೆ ಈ ಬಾರಿಯ ಟೂರ್ನಿಯಲ್ಲಿ ಸಂಪೂರ್ಣ ಬ್ಯಾಟಿಂಗ್ ವೈಫಲ್ಯ ಕಂಡಿದ್ದಾರೆ.
ಟಿ20 ವಿಶ್ವಕಪ್ ನಲ್ಲಿ ಟೀಮ್ ಇಂಡಿಯಾ ಮೂರು ಮ್ಯಾಚ್ ಆಡಿದೆ. ಮೂರರಲ್ಲೂ ಕೊಹ್ಲಿ ಫ್ಲಾಪ್ ಆಗಿದ್ದಾರೆ. ಕ್ರಮವಾಗಿ 1 , 4 , 0 ಗೆ ಔಟ್ ಆಗೋದ್ರ ಮೂಲಕ ನೀರಸ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಕೊಹ್ಲಿಯನ್ನು ಆರಂಭಿಕನಾಗಿ ಆಡಿಸಿದ್ದು ಕೂಡ ಅವರ ಬ್ಯಾಟಿಂಗ್ ವೈಫಲ್ಯಕ್ಕೆ ಕಾರಣವಿರಬಹುದು. ಕೆಲ ವರ್ಷಗಳಿಂದ ಐಪಿಎಲ್ನಲ್ಲಿ ಕೊಹ್ಲಿ ಆರಂಭಿಕನಾಗಿ ಆಡಿದ್ದರೂ ಕೂಡ ಐಸಿಸಿ ಟೂರ್ನಿಯಲ್ಲಿ ಇದುವರೆಗೂ ಆಡಿರಲಿಲ್ಲ. ಶೈನಿಂಗ್ ಬಾಲ್ನಲ್ಲಿ ಅವರಿಗೆ ಆಡಿದ ಅನುಭವ ಕೂಡ ಅಷ್ಟಾಗಿ ಇಲ್ಲ. ಏನಿದ್ದರೂ ಮಧ್ಯಮ ಕ್ರಮಾಂಕದಲ್ಲಿಯೇ ಅವರು ಹೆಚ್ಚು ಸಕ್ಸನ್ ಕಂಡಿರುವುದು. ಹೀಗಾಗಿ ಬಿಸಿಸಿಐ ಪ್ರಯೋಗಕ್ಕೆ ಫ್ಯಾನ್ಸ್ ಕಡೆಯಿಂದ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.