ಅತಿಥೇಯ ಭಾರತ (Bharatha) ಹಾಗೂ ಪ್ರವಾಸಿ ಇಂಗ್ಲೆಂಡ್ (England) ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಗೆ ದಿನಗಣನೆ ಆರಂಭವಾಗಿದ್ದು, ಈ ನಡುವೆ ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (Virat kohli) ಟೆಸ್ಟ್ ಸರಣಿಯ ಆರಂಭಿಕ ಎರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ.
![](https://pratidhvani.com/wp-content/uploads/2024/01/IMG-20240122-WA0209-1024x719.webp)
ವೈಯಕ್ತಿಕ ಕಾರಣಗಳಿಂದ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ಕಿಂಗ್ ಕೊಹ್ಲಿ ಹಿಂದೆ ಸರಿದಿದ್ದಾರೆ. ವಿರಾಟ್ ಕೊಹ್ಲಿ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿರುವ ಕುರಿತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧಿಕೃತವಾಗಿ ತಿಳಿಸಿದೆ. ಆದರೆ ಆರಂಭಿಕ ಎರಡು ಟೆಸ್ಟ್ ಪಂದ್ಯಗಳಿಂದ ಕೊಹ್ಲಿ ಹಿಂದೆ ಸರಿಯಲು ಸೂಕ್ತ ಕಾರಣ ಏನೆಂಬುದನ್ನು ಬಿಸಿಸಿಐ ಬಹಿರಂಗಪಡಿಸಿಲ್ಲ. ಬದಲಾಗಿ ಕ್ರಿಕೆಟಿಗನ ಖಾಸಗಿತನವನ್ನು ಗೌರವಿಸುವಂತೆ ಮಾಧ್ಯಮಗಳು, ಅಭಿಮಾನಿಗಳಿಗೆ ವಿನಂತಿಸಿದೆ.
![](https://pratidhvani.com/wp-content/uploads/2024/01/IMG-20240122-WA0210-jpg.webp)
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಜ.25ರಿಂದ 29ರವರೆಗೆ ಹೈದ್ರಾಬಾದ್ನಲ್ಲಿ ನಡೆಯಲಿದೆ. ಮೊದಲ ಟೆಸ್ಟ್ ಹಿನ್ನೆಲೆಯಲ್ಲಿ ಈಗಾಗಲೇ ಎರಡು ತಂಡಗಳು ಹೈದ್ರಾಬಾದ್ ತಲುಪಿದ್ದು, ಕಠಿಣ ಅಭ್ಯಾಸ ಆರಂಭಿಸಿವೆ.