ಕೋಲಾರ:ಬಂಗಾರಪೇಟೆ ನಗರದಲ್ಲಿ 3 ಅಂತಸ್ತಿನ ಕಟ್ಟಡ ಏಕಾಏಕಿ ಕುಸಿದಿರುವ ಘಟನೆ (Building Collapse) ಶುಕ್ರವಾರ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಕಳಪೆ ಕಾಮಗಾರಿಯಿಂದ ಕಟ್ಟಡ ಕುಸಿದಿರುವ ಶಂಕೆ ವ್ಯಕ್ತವಾಗಿದ್ದು, ಪುರಸಭೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಂಗಾರಪೇಟೆ ನಗರದ ದಂಡು ರಸ್ತೆಯಲ್ಲಿರುವ ರಾಜ್ ಕುಮಾರ್ ಎಂಬುವವರ 3 ಅಂತಸ್ತಿನ ಕಟ್ಟಡ ಕುಸಿದಿದೆ. ನೆಲ ಅಂತಸ್ತಿನ ನವೀಕರಣ ಕಾರ್ಯ ನಡೆಯುತ್ತಿದ್ದಾಗ ಇತ್ತೀಚೆಗೆ ಗೋಡೆ ಕುಸಿದಿತ್ತು ಎನ್ನಲಾಗಿದೆ. ಹೀಗಾಗಿ ಕಟ್ಟಡ ವಾಲಿದ್ದರಿಂದ ಮನೆಯಲ್ಲಿದ್ದ ಮೂರು ಕುಟುಂಬಗಳನ್ನು ಅಗ್ನಿಶಾಮಕ ದಳ ಸಿಬ್ಬಂದಿ ಖಾಲಿ ಮಾಡಿಸಿದ್ದಾರೆ. ಇದೀಗ ಕಟ್ಟಡ ಕುಸಿದಿದ್ದು, ಮುಂಭಾಗದ ಖಾಸಗಿ ಶಾಲೆಗೆ ಕಾಂಪೌಂಡ್‌ಗೂ ಹಾನಿಯಾಗಿದೆ.
https://twitter.com/path2shah/status/1854779520739418510?t=2ylrzrf9RtZmorHKqUfLYw&s=19
ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳದಲ್ಲೇ ಬೀಡುಬಿಟ್ಟಿದ್ದು, ಕಟ್ಟಡ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಪುರಸಭೆ ಅಧಿಕಾರಿಗಳೊಂದಿಗೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಅವರು ಭೇಟಿ ಪರಿಶೀಲನೆ ನಡೆಸಿ, ಘಟನೆಗೆ ಕಾರಣ ತಿಳಿಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜೆಸಿಬಿಗಳ ಮುಖಾಂತರ ಕಟ್ಟಡದ ಅವಶೇಷಗಳ ತೆರವು ಮಾಡಲಾಗುತ್ತಿದೆ.