ಚಾಮರಾಜನಗರ: ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಕಾರ್ಮಿಕ ಇಲಾಖೆ ನಿರೀಕ್ಷಕ ಪರಾರಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ.
ಕೊಳ್ಳೇಗಾಲದ ಕಾರ್ಮಿಕ ಇಲಾಖೆಯ ನಿರೀಕ್ಷಕ ಚಂದ್ರು ಪರಾರಿಯಾದ ಅಧಿಕಾರಿ ಎನ್ನಲಾಗಿದೆ.
ಹನೂರು ತಾಲೂಕಿನ ರಾಮಾಪುರ ಗ್ರಾಮದ ಕಬ್ಬಿಣದ ಅಂಗಡಿ ವ್ಯಾಪಾರಿ ಲಕ್ಷ್ಮಣ್ ಇಲಾಖೆಯಿಂದ ಅನುಮತಿ ಪಡೆಯಲು ಅರ್ಜಿ ಹಾಕಿದ ವೇಳೆ ಕಾರ್ಮಿಕ ಇಲಾಖೆಯ ನಿರೀಕ್ಷಕ ಚಂದ್ರು 5 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಇದರಿಂದ ಬೇಸತ್ತ ವ್ಯಾಪಾರಿ ಲೋಕಾಯುಕ್ತರಿಗೆ ದೂರು ನೀಡಿದ್ದರು.
ದೂರು ಪಡೆದ ಲೋಕಾಯುಕ್ತರು ಕಾರ್ಯಾಚರಣೆ ನಡೆಸಿದ್ದರು.






