• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ಯಲಾಕುನ್ನಿ” ಮೇರಾ ನಾಮ್ ವಜ್ರಮುನಿ ಲುಕ್ ನಲ್ಲಿ ಕೋಮಲ್ ಕಮಾಲ್

ಪ್ರತಿಧ್ವನಿ by ಪ್ರತಿಧ್ವನಿ
September 3, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

‘ಯಲಾಕುನ್ನಿ’ ಈ ಡೈಲಾಗ್ ಅನ್ನು ಕನ್ನಡ ಚಿತ್ರಪ್ರೇಮಿಗಳು ಅದು ಹೇಗೆ ಮರೆಯಲು ಸಾಧ್ಯಹೇಳಿ. ಖಳನಟರ ಖಳನಟ ದಿವಂಗತ ವಜ್ರಮುನಿ ಅವರ ಫೇಮಸ್ ಡೈಲಾಗ್ ಇದು. ಈ ಡೈಲಾಗ್ ಅನ್ನೇ ಸಿನಿಮಾ ಶೀರ್ಷಿಕೆಯಾಗಿಟ್ಟುಕೊಂಡು ಸ್ಯಾಂಡಲ್ ವುಡ್ ನಲ್ಲಿ ಮುಹೂರ್ತ ಮಾಡಿ ಸದ್ದು ಮಾಡಿತ್ತು ‘ಯಲಾಕುನ್ನಿ’ ಚಿತ್ರತಂಡ.ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್, ಸಹನ ಮೂರ್ತಿ ರವರು ನಿರ್ಮಿಸಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನರ ಮನ ಗೆದ್ದಿರುವ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ ಈ ಚಿತ್ರವನ್ನು ಹೊಸ ಪ್ರತಿಭೆ N R ಪ್ರದೀಪ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.

ADVERTISEMENT

ಸದ್ಯ ಚಿತ್ರೀಕರಣ ಸದ್ದಿಲ್ಲದೆ ಪೂರ್ಣಗೊಳಿಸಿರುವ “ಯಲಾಕುನ್ನಿ” ಚಿತ್ರಕ್ಕೆ ಚಿತ್ರೀಕರಣ ನಂತರದ ಚಟುವಟಿಕೆಗಳು(ಪೋಸ್ಟ್ ಪ್ರೊಡಕ್ಷನ್) ಬಿರುಸಿನಿಂದ ಸಾಗಿದೆ‌. ಸದ್ಯದಲ್ಲೇ ಪ್ರೇಕ್ಷಕರಿಗೆ ಮನೋರಂಜನೆಯ ರಸದೌತಣ ನೀಡಲು ಚಿತ್ರಮಂದಿರಗಳಿಗೆ “ಯಲಾಕುನ್ನಿ” ಚಿತ್ರ ಬರಲಿದೆ‌. ಬೆಂಗಳೂರು, ಮೈಸೂರು ಹಾಗೂ ಶ್ರೀರಂಗಪಟ್ಟಣದಲ್ಲಿ ಚಿತ್ರೀಕರಣ ನಡೆದಿದೆ. ಶ್ರೀರಂಗಪಟ್ಟಣದಲ್ಲಿ ಚಿತ್ರಕ್ಕಾಗಿ ವಿಶೇಷ ಸೆಟ್ ಸಹ ಹಾಕಲಾಗಿತ್ತು.

ಕೋಮಲ್ ಕುಮಾರ್ ಅವರು ಮೊದಲ ಬಾರಿಗೆ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವುದು ಈ ಚಿತ್ರದ ವಿಶೇಷ‌.ಕೋಮಲ್ ಅವರ ಜೊತೆಗೆ ದೊಡ್ಡ ದೊಡ್ಡ ಕಲಾವಿದರ ದಂಡೆ ಈ ಚಿತ್ರದಲ್ಲಿದೆ. ದತ್ತಣ್ಣ , ಸಾಧು ಕೋಕಿಲ , ಮಿತ್ರ, ಸುಚೇಂದ್ರ ಪ್ರಸಾದ್ , ಶಿವರಾಜ್ ಕೆ ಆರ್ ಪೇಟೆ , ತಬಲಾ ನಾಣಿ, ರಾಜು ತಾಳಿ ಕೋಟೆ, ಸುಮನ್ ನಗರ ಕರ್, ಮಾನಸಿ ಸುಧೀರ್(ಕಾಂತಾರ) , ಜಗ್ಗೇಶ್ ಅವರ ದ್ವಿತಿಯ ಪುತ್ರ ಯತಿರಾಜ್ ಜಗ್ಗೇಶ್, ಜಯಸಿಂಹ ಮುಸುರಿ , ರಘು ರಾಮನಕೊಪ್ಪ ,ಮಹಾಂತೇಶ್, ಬೌಬೌ ಜಯರಾಮ್ , ನಿರ್ದೇಶಕ ಸಹನ ಮೂರ್ತಿ , ಭಜರಂಗಿ ಪ್ರಸನ್ನ , ತಿಥಿ ತಮ್ಮಣ್ಣ, ಪ್ರದೀಪ್ ಪೂಜಾರಿ, ತೇಜಸ್, ಉಮೇಶ್ ಸಕ್ಕರೆ ನಾಡು ಮಂತಾದರವರ ತಾರಾಬಳಗವಿರುವ ಈ ಚಿತ್ರದ ನಾಯಕಿಯರಾಗಿ ನಿಸರ್ಗ ಅಪ್ಪಣ್ಣ ಮತ್ತು ಗಿಚ್ಚಿಗಿಲಿಯ ಅಮೃತಾ ಬಣ್ಣ ಹಚ್ಚಿದ್ದಾರೆ.

ವಿಶೇಷ ವಾಗಿ ವಜ್ರಮುನಿ ಯವರ ಮೊಮ್ಮೊಗ ಆಕರ್ಶ್ ಈ ಚಿತ್ರದ ಮೂಲಕ ಮೊದಲ ಬಾರಿಗೆ ಬಣ್ಣದ ಲೋಕ ಪ್ರವೇಶಿಸುತ್ತಿದ್ದಾರೆ. ಮಯೂರ್ ಪಟೇಲ್ ಅವರು ಖಳ ನಾಯಕನಾಗಿ ನಟಿಸಿದ್ದಾರೆ.

ಸಂಪೂರ್ಣ ಹಳ್ಳಿ ಸೊಗಡಿನಲ್ಲಿ ಮೂಡಿಬಂದಿರುವ ‘ಯಲಾಕುನ್ನಿ’ ಸಿನಿಮಾಕ್ಕೆ ರಥಾವರ ಖ್ಯಾತಿಯ ಧರ್ಮ ವಿಶ್ ಸಂಗೀತ ನಿರ್ದೇಶನ, ದೀಪು ಎಸ್ ಕುಮಾರ್ ಸಂಕಲನ ಹಾಗೂ ಹಾಲೇಶ್ ಭದ್ರಾವತಿ ಅವರ ಛಾಯಾಗ್ರಹಣವಿದೆ. ಮುರಳಿ ಮಾಸ್ಟರ್ ನೃತ್ಯ ಸಂಯೋಜನೆ ಮಾಡಿರುವ ಈ ಚಿತ್ರಕ್ಕೆ ನರಸಿಂಹ ಮಾಸ್ಟರ್ ಸಾಹಸ ಸಂಯೋಜನೆ ಮಾಡಿದ್ದಾರೆ. “ಯಲಾಕುನ್ನಿ” ಚಿತ್ರಕ್ಕೆ ‘ಮೇರಾ ನಾಮ್ ವಜ್ರಮುನಿ’ ಎಂಬ ಅಡಿಬರಹವಿದೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'Halesh BhadravatiKomalmovie 'YalakunniMurali MasterSadhu Kokila
Previous Post

ಸೀರೇ ಕಳ್ಳಿಯರ ಬಂಧನ.. 38 ಲಕ್ಷದ ಸೀರೆ ಜಪ್ತಿ..

Next Post

ಗಣೇಶ, ಈದ್ ಮಿಲಾದ್ ವೇಳೆ `DJ’ಬಳಕೆಗೆ ಅವಕಾಶವಿಲ್ಲ: ರಾಜ್ಯ ಸರ್ಕಾರ ಖಡಕ್ ಆದೇಶ

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
ಗಣೇಶ, ಈದ್ ಮಿಲಾದ್ ವೇಳೆ `DJ’ಬಳಕೆಗೆ ಅವಕಾಶವಿಲ್ಲ: ರಾಜ್ಯ ಸರ್ಕಾರ ಖಡಕ್ ಆದೇಶ

ಗಣೇಶ, ಈದ್ ಮಿಲಾದ್ ವೇಳೆ `DJ'ಬಳಕೆಗೆ ಅವಕಾಶವಿಲ್ಲ: ರಾಜ್ಯ ಸರ್ಕಾರ ಖಡಕ್ ಆದೇಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada