• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶಾಸಕ ಕೋಟ ಶ್ರೀನಿವಾಸ ಪೂಜಾರಿ ಊರಿನಲ್ಲೇ ಪೊಲೀಸರಿಂದ ಜಾತಿ ನಿಂದನೆ, ದೈಹಿಕ ಹಲ್ಲೆ : ಇಬ್ಬರು ದಲಿತ ಮಹಿಳೆಯರು ಆಸ್ಪತ್ರೆಗೆ ದಾಖಲು!

Any Mind by Any Mind
October 7, 2023
in ಕರ್ನಾಟಕ
0
ಶಾಸಕ ಕೋಟ ಶ್ರೀನಿವಾಸ ಪೂಜಾರಿ ಊರಿನಲ್ಲೇ ಪೊಲೀಸರಿಂದ ಜಾತಿ ನಿಂದನೆ, ದೈಹಿಕ ಹಲ್ಲೆ : ಇಬ್ಬರು ದಲಿತ ಮಹಿಳೆಯರು ಆಸ್ಪತ್ರೆಗೆ ದಾಖಲು!
Share on WhatsAppShare on FacebookShare on Telegram

ADVERTISEMENT

ಉಡುಪಿ ಜಿಲ್ಲೆ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಊರಾದ ಕೋಟ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿ ಇಬ್ಬರು ದಲಿತ ಮಹಿಳೆಯರ ಮೇಲೆ ಕಳ್ಳತನ ಪ್ರಕರಣಗಳನ್ನು ದಾಖಲಿಸಿ ಎರಡು ದಿನ ಠಾಣೆಗೆ ಬಂಧಿಸಿ ಜಾತಿ ನಿಂದನೆ ಮಾಡಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿದ್ದಾದೆ ಎಂದು ಆರೋಪ ಕೇಳಿಬಂದಿದೆ. ಇಬ್ಬರು ಮಹಿಳೆಯರನ್ನು ನಗರದ ಅಜ್ಜರಕಾಡಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಮಾಹಿತಿ ಪ್ರಕಾರ, ಬ್ರಹ್ಮಾವರದ ಸಾಲಿಗ್ರಾಮದ ನಿವಾಸಿಗಳಾದ ಆಶಾ ಜಿ ಮತ್ತು ಸುಜಾತ ಅವರು ಅಕ್ಟೋಬರ್ 2 ರಂದು ನೂಜಿ ಗ್ರಾಮದ ಕಿರಣ್ ಕುಮಾರ್ ಶೆಟ್ಟಿ ಅವರ ಮನೆಗೆ ಕೆಲಸಕ್ಕೆ ಹೋಗಿದ್ದರು, ಮಧ್ಯಾಹ್ನ 1.30 ಕ್ಕೆ ಕಿರಣ್ ಅವರ ಮನೆಯಿಂದ ಹೊರಟು ತಮ್ಮ ಮನೆಗೆ ಹೋಗಿದ್ದಾರೆ.

ಅಕ್ಟೋಬರ್ 2 ರಂದು ಸಂಜೆ 6.30 ಕ್ಕೆ ಕೋಟ ಪೊಲೀಸ್ ಠಾಣೆಯ ಎಸ್‌ಐ ಸುಧಾರ್ ಪ್ರಭು ಅವರು ಆಶಾ ಜಿ ಅವರಿಗೆ ಕರೆ ಮಾಡಿ ಕಿರಣ್ ಕುಮಾರ್ ಶೆಟ್ಟಿ ಅವರು ತಮ್ಮ ಮನೆಯಲ್ಲಿ ಚಿನ್ನದ ಬಳೆ ಕಳೆದುಹೋಗಿರುವ ಬಗ್ಗೆ ದೂರು ನೀಡಿದ್ದಾರೆ ತಕ್ಷಣನೀವು ಠಾಣೆಗೆ ವರದಿ ಬರಬೇಕು ಎಂದು ತಿಳಿಸಿದ್ದಾರೆ. ಅದರಂತೆ, ಆಶಾ ಮತ್ತು ಸುಜಾತ ಪೊಲೀಸ್ ಠಾಣೆಗೆ ಹೋಗಿದ್ದಾರೆ. ಅಲ್ಲಿ ಅವರಿಗೆ ಜಾತಿಯ ಆಧಾರದ ಮೇಲೆ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ. ಇದಲ್ಲದೇ ಆಶಾ ಅವರ ಹಣೆಗೆ ಪಿಸ್ತೂಲ್ ತೋರಿಸಿ ಎನ್‌ಕೌಂಟರ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ. ಆಶಾಗೆ ಕುಡಿಯುವ ನೀರು ಸಹ ನೀಡಲಿಲ್ಲ ಮತ್ತು ವಾಶ್‌ರೂಮ್‌ಗಳನ್ನು ಬಳಸಲು ಅವಕಾಶ ನೀಡದೆ ಪೊಲೀಸರು ವಿಕೃತವಾಗಿ ನಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಆಶಾ ಅವರನ್ನು ಅಕ್ಟೋಬರ್ 3 ರಂದು ಕೂಡ ಠಾಣೆಗೆ ಬರುವಂತೆ ತಿಳಿಸಲಾಗಿತ್ತು. ಆಶಾ ಸುಮಾರ 10.30 ಕ್ಕೆ ಠಾಣೆಗೆ ಹೋದಾಗ. ಎಸ್‌ಐ ಸುಧಾ ಪ್ರಭು ಮತ್ತು ಸಿಬ್ಬಂದಿ ರೇವತಿ ಹಾಗೂ ಮತ್ತೊಬ್ಬ ವ್ಯಕ್ತಿ ಕಿರಣ್‌ಕುಮಾರ್ ಶೆಟ್ಟಿ ಜೊತೆ ಸೇರಿ ಆಶಾ ಮೇಲೆ ಹಾಗೂ ಸುಜಾತಾ ಮೇಲೆ ಜಾತಿ ನಿಂದನೆ ಮಾಡಿದ್ದಾರೆ. ಸುಜಾತಾಳನ್ನು ಕಿರಣ್ ಕುಮಾರ್ ಶೆಟ್ಟಿ ಬಲವಂತವಾಗಿ ಮನೆಗೆ ಕರೆದೊಯ್ದು ಆಕೆಯ ಕಪಾಲಕ್ಕೆ ಹೊಡೆದು ಹಲ್ಲೆ ಮಾಡಿದ್ದಾನೆ. ಅಲ್ಲದೆ ಆಶಾಳನ್ನು ನೆಲದ ಮೇಲೆ ತಳ್ಳಿ ಆಕೆಯನ್ನು ಕಾಲಿನಲ್ಲಿ ಹೊಡೆದು ಹೊಟ್ಟೆಗೆ ಒದ್ದಿದ್ದಾನೆ ಎಂದು ತಿಳಿದುಬಂದಿದೆ.

ಅಕ್ಟೋಬರ್ 3ರಂದು ರಾತ್ರಿ 7.45ರ ಸುಮಾರಿಗೆ ಆಶಾಳನ್ನು ಠಾಣೆಯಿಂದ ಹೊರಗೆ ಕಳುಹಿಸುವ ಮುನ್ನ ಪೊಲೀಸರು ವಿಡಿಯೋ ಮಾಡಿ ಪೊಲೀಸ್ ಠಾಣೆಯಲ್ಲಿ ಆಕೆಗೆ ಕಿರುಕುಳ ನೀಡಿಲ್ಲ ಎಂದು ಬಲವಂತವಾಗಿ ಹೇಳುವಂತೆ ಹೇಳಿದ್ದಾರೆ. ಅಲ್ಲದೆ ಆಶಾಗೆ ಸುಳ್ಳು ಕೇಸ್ ಹಾಕುವುದಾಗಿ ಬೆದರಿಸಿದ್ದಾರೆ.

ಈ ಸಂಬಂಧ ಸಂತ್ರಸ್ತೆ ಆಶಾ ಉಡುಪಿ ಎಸ್ಪಿಗೆ ದೂರು ನೀಡಿದ್ದಾರೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಇಸ್ರೇಲ್ – ಪ್ಯಾಲೆಸ್ಟೀನ್ ನಡುವೆ ಯುದ್ಧ ಶುರು.. ಭಾರತದ ಬೆಂಬಲ ಯಾರಿಗೆ..?

Next Post

ಕೇರಳದಲ್ಲಿ ಬಿಜೆಪಿ ಜೊತೆ ಮೈತ್ರಿಗೆ HD ದೇವೇಗೌಡ ಪ್ರಸ್ತಾಪ : ಆಗಲ್ಲ ಎಂದು ತಿರಸ್ಕರಿಸಿದ ಕೇರಳ JDS!

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
ಕೇರಳದಲ್ಲಿ ಬಿಜೆಪಿ ಜೊತೆ ಮೈತ್ರಿಗೆ HD ದೇವೇಗೌಡ ಪ್ರಸ್ತಾಪ : ಆಗಲ್ಲ ಎಂದು ತಿರಸ್ಕರಿಸಿದ ಕೇರಳ JDS!

ಕೇರಳದಲ್ಲಿ ಬಿಜೆಪಿ ಜೊತೆ ಮೈತ್ರಿಗೆ HD ದೇವೇಗೌಡ ಪ್ರಸ್ತಾಪ : ಆಗಲ್ಲ ಎಂದು ತಿರಸ್ಕರಿಸಿದ ಕೇರಳ JDS!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!