ಕರ್ನಾಟಕ ವಿಧಾನಸಭಾ ಚುನಾವಣೆ ಕಣ ರಂಗೇರಿದ್ದು, ರಾಜ್ಯದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆಯುತ್ತಿದೆ. ವಿವಿಧ ಪಕ್ಷಗಳ ಟಿಕೆಟ್ ಗಾಗಿ ಭಾರೀ ಲಾಬಿ ನಡೆಯುತ್ತಿದ್ದು, ಪಕ್ಷಗಳಿಗೆ ಭಿನ್ನಮತ ಶಮನವೇ ತಲೆನೋವಾಗಿ ಪರಿಣಮಿಸಿದೆ. ಈ ನಡುವೆ, ನಾಳೆ ಅಂದರೆ ಮಾರ್ಚ್ 22 ರಂದು ಬಿಡುಯಾಗಲಿದೆ ಎನ್ನಲಾದ ಕೈ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮತ್ತೆ ಮುಂದಕ್ಕೆ ತಳ್ಳಿ ಹೋಗಿದೆ ಎನ್ನಲಾಗಿದೆ.
ಪಕ್ಷದಲ್ಲಿ ಆಂತರಿಕ ಭಿನ್ನಮತ ತೀವ್ರವಾದ, ಹಾಗೂ ಸಿದ್ದರಾಮಯ್ಯ ಕ್ಷೇತ್ರದ ಬಗ್ಗೆ ಗೊಂದಲ ಮುಂದುವರೆದಿದ್ದರಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮುಂದಕ್ಕೆ ಹೋಗುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ಹೇಳಿವೆ.
ಮಂಡ್ಯದ ದ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ತೆರಳಿ ಮಂಗಳವಾರ ಕಾಲಭೈರವೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿರುವ ಕೆಪಿಸಿಸಿ ಅಧ್ಯಕ್ಷ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ, ಯುಗಾದಿಯಂದು ಬಿಡುಗಡೆಯಾಗುತ್ತದೆ ಎಂದು ಹೇಳಿದ್ದರು. ಆದರೆ, ನಂತರ ಬಂದ ಬಲ್ಲ ಮಾಹಿತಿಗಳ ಪ್ರಕಾರ ಪಟ್ಟಿ ಬಿಡುಗಡೆ ತಡವಾಗಲಿದೆ ಎನ್ನಲಾಗಿದೆ.
