ದೆಹಲಿಯ ಎಐಸಿಸಿ ಕಚೇರಿಯಲ್ಲಿ ಪಕ್ಷದ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕರ್ನಾಟಕ ಕಾಂಗ್ರೆಸ್ ನಾಯಕರು ಮಹತ್ವದ ಸಭೆ ನಡೆಸುತ್ತಿದ್ದಾರೆ.
ಮುಂಬರುವ ರಾಜ್ಯ ವಿಧಾನಸಭೆ, ಬಿಬಿಎಂಪಿ, ತಾಲ್ಲೂಕು-ಜಿಲ್ಲಾ ಪಂಚಾಯಿತಿ ಚುನಾವಣೆ ಸಂಬಂಧ ಈ ಸಭೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಇನ್ನು ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆಸಲು ಉದ್ದೇಶಿಸಿರುವ ಬಸ್ ಯಾತ್ರೆಗೆ ಸಭೆಯಲ್ಲಿ ಅಂತಿಮ ರೂಪುರೇಷೆ ನೀಡಲಾಗುವುದು ಹಾಗೂ ಇದೇ ವೇಳೆ ಟಿಕೆಟ್ ಹಂಚಿಕೆ ಕುರಿತಾಗಿ ಸಭೆಯಲ್ಲಿ ಚರ್ಚಿಸಲಾಗುತ್ತಿದೆ ತಿಳಿದು ಬಂದಿದೆ.
ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷರಾದ ರಾಮಲಿಂಗ ರೆಡ್ಡಿ, ಧ್ರುವನಾರಾಯಣ, ಸಲೀಂ ಅಹ್ಮದ್, ಕೆ.ಜೆ.ಜಾರ್ಜ್, ಪ್ರಚಾರ ಸಮಿತಿ ಅಧ್ಯಕ್ಷರಾದ ಎಂ.ಬಿ.ಪಾಟೀಲ್, ಪ್ರಣಾಳಿಕೆ ಸಮಿತಿ ಅಧ್ಯಕ್ಷರಾದ ಡಾ | ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದಾರೆ.