ಶುಕ್ರವಾರ ಕನಕದಾಸ ಜಯಂತಿ ನಿಮಿತ್ತ ಬೆಂಗಲೂರಿಗೆ ಆಗಮಿಸಿದ ಪ್ರಧಾನಿ ಮೋದಿ ಅಂತರಾಷ್ಟ್ರೀಯ ವಿಮಾಣ ನಿಲ್ದಾಣದಲ್ಲಿ 108 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡಿದ್ದರು. ಇನ್ನು ಆದಿಚುಂಚನಗಿರಿ ಶ್ರೀಗಳ ಮೇಲೆ ಸಚಿವ ಆರ್.ಅಶೋಕ್ ಕೈ ಹಾಕಿರುವುದು ಹಾಗೂ ಜಗ್ಗೇಶ್ ಅವರ ಹಿಂದೆ ನಿಂತು ಅವರನ್ನು ತಳ್ಳಿಕೊಂಡು ಮುಖ ತೋರಿಸುವ ಅವರ ಸ್ಥಿತಿ ಶೋಚನೀಯವಾಗಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿಯನ್ನು ಟೀಕಿಸಿದೆ.
ಸ್ವಾಮಿಜಿಗಳಿಗೆ ಅವರದ್ದೇ ಆದ ಗೌರವವಿರುತ್ತದೆ. ಘನತೆ ಇರುತ್ತದೆ. ಹೆಗಲ ಮೇಲೆ ಕೈ ಹಾಕುವಷ್ಟು ಆದಿಚುಂಚನಗಿರಿ ಶ್ರೀಗಳು ಸಚಿವ ಅಶೋಕ್‌ಗೆ ಅವರಿಗೆ ಸದರ ಎನಿಸಿದ್ದಾರೆಯೇ? ಇದೇ ರೀತಿ ಮೋದಿ ಹೆಗಲಿಗೆ ಕೈ ಹಾಕುವ ಧೈರ್ಯವಿದೆಯೇ?. ಧರ್ಮ, ಸಂಸ್ಕೃತಿಯ ಬಗ್ಗೆ ಮಾತಾಡುವ ಬಿಜೆಪಿ ನಾಯಕರಿಗೆ ಕನಿಷ್ಠ ಸಂಸ್ಕಾರದ ಜ್ಞಾನವಿಲ್ಲಎಂದು ಕಿಡಿಕಾರಿದೆ.
ರಾಜ್ಯದ ಮುಖ್ಯಮಂತ್ರಿ ಫೋಟೋ ತೆಗೆಸಿಕೊಳ್ಳಲೂ ಹರಸಾಹಸಪಡಬೇಕೇ? ಪ್ರಧಾನಿ ಪಕ್ಕ ಸ್ವತಂತ್ರವಾಗಿ ನಿಲ್ಲಲೂ ಬೊಮ್ಮಾಯಿಯವರಿಗೆ ಸಾಧ್ಯವಾಗುತ್ತಿಲ್ಲ ಎಂದರೆ ಸಿಎಂ ಹುದ್ದೆಗೆ ಆಗುತ್ತಿರುವ ಅವಮಾನವಿದು. ಜಗ್ಗೇಶ್ ಅವರ ಹಿಂದೆ ನಿಂತು ಅವರನ್ನು ತಳ್ಳಿಕೊಂಡು ಮುಖ ತೋರಿಸುವ ಪಪ್ಪೆಟ್ ಸಿಎಂ ಅವರ ಸ್ಥಿತಿ ಶೋಚನೀಯವಾಗಿದೆ ಎಂದು ಟೀಕಿಸಿದೆ.







