• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಹಾಡುಗಳ ಮೂಲಕ ಪ್ರೇಕ್ಷಕರ ಮನ ಗೆದ್ದ “ಕೃಷ್ಣಂ ಪ್ರಣಯ ಸಖಿ”..

ಪ್ರತಿಧ್ವನಿ by ಪ್ರತಿಧ್ವನಿ
August 5, 2024
in Top Story, ಇದೀಗ, ಕರ್ನಾಟಕ, ವಿಶೇಷ, ಸಿನಿಮಾ
0
ಹಾಡುಗಳ ಮೂಲಕ ಪ್ರೇಕ್ಷಕರ ಮನ ಗೆದ್ದ “ಕೃಷ್ಣಂ ಪ್ರಣಯ ಸಖಿ”..
Share on WhatsAppShare on FacebookShare on Telegram

ಪ್ರಶಾಂತ್ ಜಿ ರುದ್ರಪ್ಪ (Prashanth G Rudrappa) ನಿರ್ಮಾಣದ, ಶ್ರೀನಿವಾಸರಾಜು (Srinivasraju) ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ (Hero Golden Star Ganesh) ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” (Krishnam Pranaya Sakhi) ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿರುವ ಚಿತ್ರ. ಈ ಚಿತ್ರದಲ್ಲಿ ಮ್ಯಾಜಿಕಲ್ ಕಂಪೋಸರ್ ಎಂದೇ ಖ್ಯಾತರಾಗಿರುವ ಅರ್ಜುನ್ ಜನ್ಯ (Magical Musician Composer Arjun Janya) ಸಂಗೀತ ನೀಡಿರುವ ಏಳು ಹಾಡುಗಳಿದೆ. ಈಗಾಗಲೇ ನಾಲ್ಕು ಹಾಡುಗಳು ಬಿಡುಗಡೆಯಾಗಿದೆ‌. ಚಿತ್ರ ಆಗಸ್ಟ್ 15 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಚಿತ್ರ ಬಿಡುಗಡೆಗೂ ಮುನ್ನ ಹಾಡುಗಳ ಮೂಲಕ “ಕೃಷ್ಣಂ ಪ್ರಣಯ ಸಖಿ” ಪ್ರೇಕ್ಷಕರ ಮನ ತಲುಪಿದೆ. ನಿರೀಕ್ಷೆಗೂ ಮೀರಿ ಹಾಡುಗಳು ಹಿಟ್ ಅಗಿದೆ. ಈ ಸಂಭ್ರಮವನ್ನು ಹಂಚಿಕೊಳ್ಳಲು ಚಿತ್ರದ ಆಡಿಯೋ ಹಕ್ಕು ಪಡೆದುಕೊಂಡಿರುವ ಆನಂದ್ ಆಡಿಯೋ(Anand Audio) ದವರು ಸಮಾರಂಭ ಆಯೋಜಿಸಿದ್ದರು. ಹಾಡುಗಳನ್ನು ಬರೆದಿರುವವರನ್ನು ಹಾಗೂ ಹಾಡಿದರವನ್ನು ಫಲಕ ನೀಡಿ ಸನ್ಮಾನಿಸಿದರು. ಗಾಯಕರಾದ ಚಂದನ್ ಶೆಟ್ಟಿ(Chandan Shetty), ಜಸ್ಕರಣ್ ಸಿಂಗ್(Jaskaran Singh), ಗೀತರಚನೆಕಾರ ನಿಶಾನ್ ರೈ (Nishan Rai) ಅವರನ್ನು ಹಾಗೂ ಚಿತ್ರತಂಡದ ಸದಸ್ಯರನ್ನು ಆನಂದ್ ಆಡಿಯೋ ಶ್ಯಾಮ್ ಮತ್ತು ಆನಂದ್ ಆತ್ಮೀಯವಾಗಿ ಸನ್ಮಾನಿಸಿದರು. ನಂತರ ಚಿತ್ರತಂಡದವರು ಮಾತನಾಡಿದರು.

ADVERTISEMENT

ಇಂದು ನಾಲ್ಕನೇ ಹಾಡು ಬಿಡುಗಡೆಯಾಗಿದೆ ಎಂದು ಮಾತನಾಡಿದ ನಾಯಕ ಗಣೇಶ್, ಈವರೆಗೂ ಬಿಡುಗಡೆಯಾಗಿರುವ ಮೂರು ಹಾಡುಗಳು ನಿರೀಕ್ಷೆಗೂ ಮೀರಿ ಜನಪ್ರಿಯವಾಗಿದೆ‌. ಹಾಗಾಗಿ ಈ ಸಮಾರಂಭವನ್ನು ಆನಂದ್ ಆಡಿಯೋದವರು ಆಯೋಜಿಸಿದ್ದಾರೆ‌. ಅವರಿಗೆ ಧನ್ಯವಾದಗಳು. ಇತ್ತೀಚೆಗೆ ಹಾಡುಗಳು ಹಿಟ್ ಆಗುವುದು ಬಹಳ ಕಡಿಮೆ. ಮೊದಲೆಲ್ಲಾ ಆಡಿಯೋ ಹಿಟ್‍ ಅಂತ ಕಾರ್ಯಕ್ರಮ ಮಾಡುತ್ತಿದ್ದೆವು. ಇತ್ತೀಚೆಗೆ ಆಗಿರಲಿಲ್ಲ. ಮೂರನೇ ಹಾಡು ಯಶಸ್ವಿಯಾದಾಗ ಯಾಕೆ ಇಂಥದ್ದೊಂದು ಕಾರ್ಯಕ್ರಮ ಮಾಡಬಾರದು ಎಂದು ಆನಂದ್ ಆಡಿಯೋದವರು ಹೇಳುತ್ತಿದ್ದರು. ಆನಂದ್ ಆಡಿಯೋದವರ ಜೊತೆಗೆ ನನ್ನದು ಬಹಳ ದೊಡ್ಡ ಸಂಬಂಧ. ನನ್ನ ಚಿತ್ರಜೀವನದ ಯಶಸ್ಸಿಗೆ ಸಂಗೀತ ಮಹತ್ವದ ಪಾತ್ರ ವಹಿಸುತ್ತದೆ ಮತ್ತು ಆ ಕ್ರೆಡಿಟ್‍ ಆನಂದ್‍ ಆಡಿಯೋದವರಿಗೂ ಸಲ್ಲಬೇಕು. ಈ ಚಿತ್ರದ ಆಡಿಯೋ ಹಕ್ಕುಗಳನ್ನು ಡಬ್ಬಲ್‍ ದುಡ್ಡು ಕೊಟ್ಟು ಆನಂದ್ ಆಡಿಯೋದವರು ಕೊಂಡಿದ್ದಾರೆ. ಮುಂದಿನ ಚಿತ್ರಕ್ಕೆ ಇನ್ನೂ ಡಬ್ಬಲ್‍ ದುಡ್ಡು ಕೊಡಲಿ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ಪ್ರತಿಯೊಬ್ಬ ಗೀತರಚನೆಕಾರ, ಗಾಯಕರು ಎಲ್ಲರಿಗೂ ಧನ್ಯವಾದಗಳು. ಜಸ್ಕರಣ್ ಅವರು ವೇದಿಕೆ ಮೇಲೆ ನಿಂತು ಹಾಡಿದಾಗ ದೈವಿಕ ಭಾವನೆ ಮೂಡಿತು. ಇವರು ಯಾರೋ ನಮ್ಮ ತರಹದವರೇ ಅಂತನಿಸಿತು. ತುಂಬಾ ಚೆನ್ನಾಗಿ ಹಾಡಿದ್ದಾರೆ. ಅದರಲ್ಲೂ “ದ್ವಾಪರ” ಹಾಡಂತೂ ಸಮಾಜಿಕ ಜಾಲತಾಣಗಳಲ್ಲಿ ಬಹಳ ಫೇಮಸ್ ಆಗಿದೆ. ರೀಲ್ಸ್ ಮಾಡುತ್ತಿರುವವರ ಸಂಖ್ಯೆ ದಿನದಿನಕ್ಕೂ ಹೆಚ್ಚುತ್ತಿದೆ. ಹಾಡುಗಳ ಯಶಸ್ಸಿನ ಹೆಚ್ಚಿನ ಭಾಗದ ಕ್ರೆಡಿಟ್ ನಿರ್ದೇಶಕರಿಗೆ ಹೋಗಬೇಕು. ಏಕೆಂದರೆ ಸಂಗೀತ ನಿರ್ದೇಶಕ ಅರ್ಜುನ್‍ ಜನ್ಯ ಬಹಳ ಬ್ಯುಸಿ. ಅವರನ್ನು ಹಿಡಿಯೋದೇ ಕಷ್ಟ. ಮಧ್ಯಾಹ್ನದ ಊಟ ಆಯ್ತಾ ಎಂದು ಫೋನ್ ಮಾಡಿದರೆ, ರಾತ್ರಿ ವಾಪಸ್ಸು ಮಾಡುತ್ತಾರೆ. ಅಷ್ಟು ಬ್ಯುಸಿ. ಅವರಿಂದ ಇಷ್ಟು ಕೆಲಸ ತೆಗೆದಿದ್ದಾರೆ. ಒಂದೊಂದು ಹಾಡು ಸಹ ದೊಡ್ಡ ಹಿಟ್‍ ಆಗುತ್ತದೆ, ಆ ತರಹ ಮಾಡುತ್ತೀನಿ ಎಂದು ಹೇಳುತ್ತಿದ್ದರು. ಅದನ್ನು ನಿಜ ಮಾಡಿ ತೋರಿಸಿದ್ದಾರೆ ಎಂದರು.

ಅರ್ಜುನ್‍ ಜನ್ಯ ಅವರು ಮ್ಯಾಜಿಕಲ್‍ ಕಂಪೋಸರ್ ಎಂಬುದು ಎಲ್ಲರಿಗೂ ಗೊತ್ತಿದೆ. ಈ ಚಿತ್ರ ಒಂದು ಸಂಗೀತಮಯ ಚಿತ್ರವಾಗಬೇಕು ಎಂಬ ಆಸೆ ನನಗಿತ್ತು. ಆದರೆ, ಹೀಗೇ ಆಗುತ್ತದೆ ಎಂದು ಹೇಳುವುದು ಕಷ್ಟ. ಅರ್ಜುನ್‍ ಬಹಳ ಬ್ಯುಸಿಯಾಗಿದ್ದಾರೆ. ಅದರಲ್ಲೂ ನಮಗೆ ಸಮಯ ಕೊಟ್ಟು ಈ ರೀತಿ ಜನಪ್ರಿಯ ಹಾಡುಗಳನ್ನು ಮಾಡಿಕೊಟ್ಟಿರುವುದು ಬಹಳ ಖುಷಿಯ ವಿಷಯ. ಚಿತ್ರದಲ್ಲಿ ಮೊದಲು ಒಂಬತ್ತು ಹಾಡುಗಳಿದ್ದವು. ಕೊನೆಗೆ ಕಡಿಮೆಯಾಗಿ, ಏಳು ಹಾಡುಗಳಿವೆ. ಎಲ್ಲಾ ಹಾಡುಗಳು ಹಿಟ್ ಆಗುತ್ತವೆ ಎಂಬ ನಂಬಿಕೆ ನನಗೆ ಮೊದಲ ದಿನದಿಂದಲೇ ಇತ್ತು. ಅದು ಪ್ರೂವ್‍ ಆಗಿದೆ. ಈ ವಿಷಯದಲ್ಲಿ ಅರ್ಜುನ್‍ ಜನ್ಯ ಅವರಿಗೆ ಧನ್ಯವಾದ ತಿಳಿಸಬೇಕು. ಈ ಹಾಡುಗಳನ್ನು ಪ್ರಮೋಟ್‍ ಮಾಡುತ್ತಿರುವ ಮತ್ತು ನನ್ನ ಮೇಲೆ ನಂಬಿಕೆ ಇಟ್ಟು ಚಿತ್ರಕ್ಕೆ ಹಣ ಹೂಡಿದ ನಿರ್ಮಾಪಕ ಪ್ರಶಾಂತ್‍ ಅವರಿಗೆ ಧನ್ಯವಾದಗಳು. ಈ ಚಿತ್ರ ಪ್ರಮುಖವಾಗಿ ಆಗುವುದಕ್ಕೆ ಗಣೇಶ್‍ ಕಾರಣ. ಅವರು ನನ್ನ ಮೇಲೆ ನಂಬಿಕೆ ಇಟ್ಟರು. ನನ್ನ ಜಾನರ್ ನಿಂದ ಆಚೆ ಬಂದು ಚಿತ್ರ ಮಾಡುವುದಕ್ಕೆ ಪ್ರೋತ್ಸಾಹ ಕೊಟ್ಟರು. ಪ್ರತಿ ಹಂತದಲ್ಲೂ ತೊಡಗಿಸಿಕೊಂಡರು. ‘ದ್ವಾಪರ’ವರೆಗೂ ಬೇರೆಬೇರೆ ರೀತಿಯ ಹಾಡುಗಳಿದ್ದವು. ಇನ್ನು ಮುಂದಿನ ಒಂದು ವಾರದಲ್ಲಿ ಮೆಲೋಡಿ ಹಾಡುಗಳು ಬರಲಿವೆ. ಈ ಚಿತ್ರಕ್ಕೆ ಟ್ರೇಲರ್ ಅವಶ್ಯಕತೆ ಇರಲಿಲ್ಲ ಎಂದು ಒಂದು ವರ್ಷದ ಹಿಂದೆ ಅನಿಸಿತ್ತು. ಇದೊಂದು ಮ್ಯೂಸಿಕಲ್‍ ಚಿತ್ರವಾದ್ದರಿಂದ, ಈ ಚಿತ್ರವನ್ನು ಹಾಡುಗಳಿಂದ ಮಾತ್ರ ಪ್ರಮೋಟ್‍ ಮಾಡುವುದು ನನ್ನ ಆಸೆ. ಹಾಗಾಗಿ, ಚಿತ್ರದ ಟ್ರೇಲರ್ ಬಿಡುಗಡೆ ಮಾಡುತ್ತಿಲ್ಲ. ಇದು ಈ ಚಿತ್ರಕ್ಕೆ ಮಾತ್ರ ಎಂದು ನಿರ್ದೇಶಕ ಶ್ರೀನಿವಾಸರಾಜು ತಿಳಿಸಿದರು.

ನಟಿ ಶರಣ್ಯ ಶೆಟ್ಟಿ(Sharanya Shetty), ಹಿರಿಯ ನಟ ರಾಮಕೃಷ್ಣ(Ramakrishna), ಕಾರ್ಯಕಾರಿ ನಿರ್ಮಾಪಕ ಶರತ್(Sharath), ಗಾಯಕರಾದ ಚಂದನ್ ಶೆಟ್ಟಿ, ಜಸ್ಕರಣ್ ಸಿಂಗ್, ಹಾಡು ಬರೆದಿರುವ ನಿಶಾನ್ ರೈ ಹಾಗೂ ಆನಂದ್ ಆಡಿಯೋ ಸಂಸ್ಥೆಯ ಶ್ಯಾಮ್ ಮತ್ತು ಆನಂದ್ ಹಾಡುಗಳು ಗೆದ್ದಿರುವ ಆನಂದವನ್ನು ಮಾತಿನ ಮೂಲಕ ಹಂಚಿಕೊಂಡರು.

Tags: Anand AudioArjun Janyachandan shettygolden star ganeshKrishnam Pranaya SakhiRamakrishnaSharanya Shetty
Previous Post

ಮಂಜುಮ್ಮೇಲ್ ಬಾಯ್ಸ್ ವಿರುದ್ಧ ಗೆದ್ದ ಇಳಯರಾಜ..!!

Next Post

ಆಗಸ್ಟ್ 23 ಕ್ಕೆ ಬರಲಿದ್ದಾನೆ “ಮೈ ಹೀರೋ”..

Related Posts

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”
ಕರ್ನಾಟಕ

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

by ಪ್ರತಿಧ್ವನಿ
January 18, 2026
0

ಮೈಸೂರು: ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರು ಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದರು....

Read moreDetails
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
Next Post
ಆಗಸ್ಟ್ 23 ಕ್ಕೆ ಬರಲಿದ್ದಾನೆ “ಮೈ ಹೀರೋ”..

ಆಗಸ್ಟ್ 23 ಕ್ಕೆ ಬರಲಿದ್ದಾನೆ "ಮೈ ಹೀರೋ"..

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada