• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

“ಕೃಷ್ಣಂ ಪ್ರಣಯ ಸಖಿ” ಚಿತ್ರದ “ಚಿನ್ನಮ್ಮ” ಹಾಡಿಗೆ ಗೋಲ್ಡನ್ ಸ್ಟಾರ್ ಅಭಿಮಾನಿಗಳು ಫಿದಾ

ಪ್ರತಿಧ್ವನಿ by ಪ್ರತಿಧ್ವನಿ
June 24, 2024
in ಸಿನಿಮಾ
0
“ಕೃಷ್ಣಂ ಪ್ರಣಯ ಸಖಿ” ಚಿತ್ರದ “ಚಿನ್ನಮ್ಮ” ಹಾಡಿಗೆ ಗೋಲ್ಡನ್ ಸ್ಟಾರ್ ಅಭಿಮಾನಿಗಳು ಫಿದಾ
Share on WhatsAppShare on FacebookShare on Telegram

ಬಹು ನಿರೀಕ್ಷಿತ ಈ ಚಿತ್ರ ಆಗಸ್ಟ್ 15 ರಂದು ತೆರೆಗೆ .

ADVERTISEMENT

ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಿಸಿರುವ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರದ “ಚಿನ್ನಮ್ಮ” ಹಾಡು‌ ಇತ್ತೀಚಿಗೆ ಮಂತ್ರಿ‌ ಮಾಲ್ ನಲ್ಲಿ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ಬಿಡುಗಡೆಯಾಯಿತು. ಬಹು ನಿರೀಕ್ಷಿತ ಈ ಚಿತ್ರ ಆಗಸ್ಟ್‌ 15 ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ. ಸುಪ್ರೀಂ ಹೀರೋ ಶಶಿಕುಮಾರ್ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.‌ ಈ ಚಿತ್ರದ ಪ್ರಮುಖಪಾತ್ರದಲ್ಲಿ ಶಶಿಕುಮಾರ್ ಅಭಿನಯಿಸಿದ್ದಾರೆ. ಆನಂದ್ ಆಡಯೋ ಯೂಟ್ಯೂಬ್ ನಲ್ಲಿ ಈ ಹಾಡನ್ನು ವೀಕ್ಷಿಸಬಹುದು. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ನಮ್ಮ ಚಿತ್ರದಲ್ಲಿ ಅರ್ಜುನ್ ಜನ್ಯ ಅವರು ಸಂಗೀತ ಸಂಯೋಜಿಸಿರುವ ಒಟ್ಟು ಏಳು ಹಾಡುಗಳಿದೆ. ಆ ಪೈಕಿ ಎರಡನೇ ಹಾಡು ಇಂದು ಬಿಡುಗಡೆಯಾಗಿದೆ‌. ಮೈಸೂರಿನಲ್ಲಿ ಬಿಡುಗಡೆಯಾದ ಮೊದಲ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿ, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಈ “ಚಿನ್ನಮ್ಮ” ಹಾಡು ಕೂಡ ಎಲ್ಲರಿಗೂ ಪ್ರಿಯವಾಗಲಿದೆ ಎಂದು ನಿರ್ದೇಶಕ ಶ್ರೀನಿವಾಸರಾಜು ತಿಳಿಸಿದರು.

ನಾನು ಬಹಳ ಇಷ್ಟಪಡುವ ಗೀತರಚನೆಕಾರರಾದ ಕವಿರಾಜ್ ಅವರು ಬರೆದಿರುವ “ಚಿನ್ನಮ್ಮ” ಹಾಡು ತುಂಬಾ ಚೆನ್ನಾಗಿದೆ. ಅರ್ಜುನ್ ಜನ್ಯ ಅವರ ಸಂಗೀತ, ಕೈಲಾಶ್ ಖೇರ್ ಹಾಗೂ ಇಂದು ನಾಗರಾಜ್ ಅವರ ಗಾಯನ ಮತ್ತು ಶೇಖರ್ ಮಾಸ್ಟರ್ ಅವರ ನೃತ್ಯ ನಿರ್ದೇಶನ ಹಾಗೂ ವೆಂಕಟ್ ರಾಮಪ್ರಸಾದ್ ಅವರ ಛಾಯಾಗ್ರಹಣ ಎಲ್ಲವೂ ಸೊಗಸಾಗಿದೆ. ಈ ಹಾಡು ಚಿತ್ರೀಕರಣವಾದ ಜಾಗ ಕೂಡ ಅದ್ಭುತವಾಗಿದೆ. ಈ ಚಿತ್ರದಲ್ಲಿ ಹಿರಿಯ ನಟ ಶಶಿಕುಮಾರ್ ಅವರ ಜೊತೆ ನಟಿಸಿದ್ದು ಖುಷಿಯಾಗಿದೆ ಎಂದರು ಗೋಲ್ಡನ್ ಸ್ಟಾರ್ ಗಣೇಶ್.

ಚಿತ್ರತಂಡದ ಸದಸ್ಯರ ಸಹಕಾರದಿಂದ ನಮ್ಮ‌ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವುದಾಗಿ ನಿರ್ಮಾಪಕ ಪ್ರಶಾಂತ್ ಜಿ ರುದ್ರಪ್ಪ ತಿಳಿಸಿದರು.

ಹಾಡು ಬರೆದಿರುವ ಕವಿರಾಜ್, ನಟಿ ಶರಣ್ಯ ಶೆಟ್ಟಿ, ನಟ ಶಿವಧ್ವಜ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

ಬಹು ನಿರೀಕ್ಷಿತ “ಕೃಷ್ಣಂ ಪ್ರಣಯ ಸಖಿ” ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದವರು ತಾರಾಬಳಗದಲ್ಲಿದ್ದಾರೆ.

Tags: goldenstarganeshRukmini Vasantsharanyashettyshashikumar
Previous Post

ಅವರು ಓಕೆ ಅಂದ್ರೆ ಓಕೆ ಅಂತ ಬೀಡಬೇಕು-ಅಧಿಕಪ್ರಸಂಗ ತೋರಿಸಬಾರದು..

Next Post

ಸೌಂದರ್ಯ ಜಗದೀಶ್ ರಿಂದ ದರ್ಶನ್ ಗೆಳತಿ ಪವಿತ್ರ ಗೌಡಗೆ ಎರಡು ಕೋಟಿ ಹಣ

Related Posts

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ
ಸಿನಿಮಾ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

by ಪ್ರತಿಧ್ವನಿ
April 14, 2026
0

ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ‘ಕೆಡಿ’ ಸಿನಿಮಾಗೆ ಸೆನ್ಸಾರ್ ಸಂಬಂಧಿತ ಅಡಚಣೆಗಳು ಎದುರಾಗಿದ್ದು, ಕೇಂದ್ರ ಸೆನ್ಸಾರ್ ಮಂಡಳಿಯ ಕ್ರಮದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಕನ್ನಡ ಸಿನಿಮಾಗಳಿಗೆ ಅನ್ಯಾಯವಾಗುತ್ತಿದೆ ಎಂಬ...

Read moreDetails
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

April 12, 2026
Next Post

ಸೌಂದರ್ಯ ಜಗದೀಶ್ ರಿಂದ ದರ್ಶನ್ ಗೆಳತಿ ಪವಿತ್ರ ಗೌಡಗೆ ಎರಡು ಕೋಟಿ ಹಣ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada