• Home
  • About Us
  • ಕರ್ನಾಟಕ
Tuesday, October 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೆಆರ್ ಎಸ್ ವರ್ಷದಲ್ಲಿ 3ನೇ ಬಾರಿ ಭರ್ತಿ

ವರುಣನ ಕೃಪೆಗೆ DCM ಡಿ.ಕೆ.ಶಿವಕುಮಾರ್ ಹರ್ಷ

ಪ್ರತಿಧ್ವನಿ by ಪ್ರತಿಧ್ವನಿ
October 26, 2025
in ಕರ್ನಾಟಕ, ರಾಜಕೀಯ, ವಿಶೇಷ
0
ಕೆಆರ್ ಎಸ್ ವರ್ಷದಲ್ಲಿ 3ನೇ ಬಾರಿ ಭರ್ತಿ
Share on WhatsAppShare on FacebookShare on Telegram

ADVERTISEMENT

93 ವರ್ಷದಲ್ಲಿ 77 ಬಾರಿ ಭರ್ತಿ

ಈ ಬೇಸಿಗೆಯಲ್ಲಿ ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆ ಇಲ್ಲ

ತಮಿಳುನಾಡಿಗೆ ಹೆಚ್ಚುವರಿಯಾಗಿ 135.412 ಟಿಎಂಸಿ ನೀರು

ಕಾವೇರಿ ಈಗ ಸಂತೃಪ್ತಿಯಾಗಿ ಮೈದುಂಬಿ ಹರಿಯುತ್ತಿದ್ದಾಳೆ. ಒಂದೇ ವರ್ಷದಲ್ಲಿ ಮೂರನೇ ಬಾರಿ ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗಿ ಇತಿಹಾಸ ನಿರ್ಮಾಣವಾಗಿರುವುದು ಮಾತ್ರವಲ್ಲದೆ ಬೆಂಗಳೂರಿಗೆ ಬೇಸಿಗೆಯ ನೀರಿನ ಕೊರತೆ ಕೂಡ ಕಣ್ಮರೆಯಾಗುತ್ತದೆ. ಜೊತೆಗೆ ತಮಿಳುನಾಡಿಗೆ ಈ ವರ್ಷ ಕರ್ನಾಟಕದಿಂದ ಹರಿಸಬೇಕಿದ್ದ ನೀರಿನ ಹಂಚಿಕೆಯ ಸಮಸ್ಯೆ ಕೂಡ ಬಗೆಹರಿದಂತಾಗಿದೆ.

Satish Kumar Moodi Exclusive Podcast : ಜಾತಿಯ ಹೆಸರಲ್ಲಿ ರಾಜಕೀಯ ಲೆಕ್ಕಾಚಾರ..! #pratidhvani

ಸರ್ವೋಚ್ಚ ನ್ಯಾಯಾಲಯದ ಆದೇಶದ ಪ್ರಕಾರ (16/6/2018ರಂತೆ) ತಮಿಳುನಾಡಿಗೆ ವರ್ಷಕ್ಕೆ 177.25 ನೀರನ್ನು ಹರಿಸಬೇಕಿತ್ತು.‌ ಜೂನ್‌ ನಿಂದ ಜೂನ್ ವರೆಗಿನ ಜಲವರ್ಷ ಪ್ರಕಾರ ಜೂನ್ 2025ರಿಂದ ಇಲ್ಲಿಯವರೆಗೆ 138.014 ಟಿಎಂಸಿ ನೀರು ಬಿಳಿಗೊಂಡ್ಲು ಜಲ ಮಾಪನ ಕೇಂದ್ರದಿಂದ ತಮಿಳುನಾಡಿಗೆ ಬಿಡಬೇಕಿತ್ತು. ಈ ವರ್ಷ ಉತ್ತಮ ಮಳೆ ಹಿನ್ನೆಲೆಯಲ್ಲಿ 273.426 ಟಿಎಂಸಿ ನೀರು ಹರಿದು ಹೋಗಿದ್ದು, ಹೆಚ್ಚುವರಿಯಾಗಿ, 135.412 ಟಿಎಂಸಿ ನೀರು ಹರಿದುಹೋಗುತ್ತಿದೆ. ಹೀಗಾಗಿ ಈ ವರ್ಷ ತಮಿಳುನಾಡು ಹಾಗೂ ಕರ್ನಾಟಕದ ಕಾವೇರಿ ನದಿ ನೀರು ಹಂಚಿಕೆ ವಿಚಾರದ ಸಮಸ್ಯೆ ಪ್ರಕೃತಿದತ್ತವಾಗಿ ಬಗೆಹರಿದಿದೆ.

 

ಇನ್ನೂ ಈ ವರ್ಷ ಬೆಂಗಳೂರಿನ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಇಲ್ಲ. ಕಾವೇರಿ ಜಲಾನಯನ ಪ್ರದೇಶದ ಹಾರಂಗಿ, ಕೆಆರ್ ಎಸ್, ಕಬಿನಿ, ಹೇಮಾವತಿ ಜಲಾಶಯಗಳು ಅಕ್ಟೋಬರ್ ನಲ್ಲಿ ಮತ್ತೆ ಭರ್ತಿಯಾಗಿ, 115 ಟಿಎಂಸಿ ನೀರು ಸಂಗ್ರಹವಿದೆ. ಇದರ ಜೊತೆಗೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಕಾವೇರಿ ನೀರಾವರಿ ನಿಗಮದ 6576 ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿವೆ. ಇದರ ಜೊತೆಗೆ ಸಣ್ಣ ನೀರಾವರಿ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ ವ್ಯಾಪ್ತಿಯ ಕೆರೆಗಳು ಸಂಪೂರ್ಣ ಭರ್ತಿಯಾಗಿದೆ. ಹೀಗಾಗಿ ಬೆಂಗಳೂರಿಗೆ ನೀರಿನ ಸಮಸ್ಯೆ ತಲೆದೋರುವುದಿಲ್ಲ.

 

ಬೆಂಗಳೂರಿಗೆ ವರ್ಷಕ್ಕೆ 31 ಟಿಎಂಸಿ ನೀರು ಕುಡಿಯುವ ನೀರಿಗೆ ಬೇಕಿದೆ. ಅಂದರೆ ಪ್ರತಿ ತಿಂಗಳು ಬೆಂಗಳೂರಿಗರಿಗೆ 2.60 ಟಿಎಂಸಿ ನೀರಿನ ಅವಶ್ಯಕತೆ ಇದೆ. ಕೆಆರ್ ಎಸ್ ಜೊತೆಗೆ ಕಾವೇರಿ ಜಲಾನಯನ ಪ್ರದೇಶದ ಅಣೆಕಟ್ಟುಗಳು, ಕೆರೆಗಳು ಭರ್ತಿಯಾಗಿದ್ದು ಬೆಂಗಳೂರಿಗೆ ಈ ಬೇಸಿಗೆಗೆ ಕುಡಿಯುವ ನೀರಿನ ಸಮಸ್ಯೆ ತಲೆದೋರುವುದಿಲ್ಲ.

ಬಿಳಿಗೊಂಡ್ಲು ಜಲಮಾಪನ ಕೇಂದ್ರದಿಂದ ತಮಿಳುನಾಡಿಗೆ ಹರಿದ ನೀರು

 

ಕೆಆರ್ ಎಸ್ ಭರ್ತಿ ಹಿನ್ನೆಲೆ ತಮಿಳುನಾಡಿಗೆ ನಿಗದಿತ ಪ್ರಮಾಣಕ್ಕಿಂತ ಹೆಚ್ಚುವರಿ ನೀರು ಹರಿದುಹೋಗುತ್ತಿದೆ. ಬಿಳಿಗೊಂಡ್ಲು ಮಾಪನ ಕೇಂದ್ರದಿಂದ ಜೂನ್‌ ನಲ್ಲಿ 9.19 ಟಿಎಂಸಿಗೆ ಬದಲಿಗೆ 42.256 ಟಿಎಂಸಿ, ಜುಲೈನಲ್ಲಿ 31.24 ಟಿಎಂಸಿ ಬದಲಿಗೆ 103.514 ಟಿಎಂಸಿ, ಆಗಸ್ಟ್ ನಲ್ಲಿ 45.95 ಟಿಎಂಸಿ ಬದಲಿಗೆ 51.943 ಟಿಎಂಸಿ, ಸೆಪ್ಟೆಂಬರ್ ನಲ್ಲಿ 36.76 ಟಿಎಂಸಿ ಬದಲಿಗೆ 40.790 ಟಿಎಂಸಿ, ಅಕ್ಟೋಬರ್ ನಲ್ಲಿ 14.35 ಟಿಎಂಸಿ ಬದಲಿಗೆ 31.344 ಟಿಎಂಸಿಯಂತೆ ಈ ವರ್ಷ ತಮಿನಾಡಿಗೆ ಇದುವರೆಗೆ 138.014 ಟಿಎಂಸಿ ನೀರಿನ ಬದಲಿಗೆ 273.426 ಟಿಎಂಸಿ ನೀರು ಹರಿದುಹೋಗಿದೆ.

ವಿಶೇಷ ಎಂದರೆ ಸುಪ್ರೀಂ ಕೋರ್ಟ್ ಆದೇಶದಂತೆ ಜೂನ್ 2025ರಿಂದ ಮೇ 2026ರವರೆಗೆ ಬಿಳಿಗೊಂಡ್ಲು ಜಲಾಶಯ ಮಾಪನ ಕೇಂದ್ರದಿಂದ 177.25 ಟಿಎಂಸಿ ನೀರನ್ನು ತಮಿಳುನಾಡಿಗೆ ಬೀಡಬೇಕಿತ್ತು. ಆದರೆ ಕೇವಲ ಐದೇ ತಿಂಗಳಲ್ಲಿ 273.426 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿದುಹೋಗುವ ಮೂಲಕ ವರ್ಷದ ನಿಗದಿತ ಪ್ರಮಾಣಕ್ಕಿಂತ 135.412 ಟಿಎಂಸಿ ನೀರನ್ನು ಈಗಾಗಲೇ ಹೆಚ್ಚುವರಿಯಾಗಿ ಹರಿದುಹೋಗಿದೆ.

ಅಕ್ಟೋಬರ್ ಮೂರನೇ ವಾರ ಕೆಆರ್ ಎಸ್ ನಲ್ಲಿ ಗರಿಷ್ಠ ಪ್ರಮಾಣದ ನೀರು ಸಂಗ್ರಹವಾಗಿದ್ದು ಹೊರಹರಿವಿನ ಪ್ರಮಾಣವನ್ನು ಕೂಡ ಹೆಚ್ಚಿಸಲಾಗಿದೆ. ಕೆಆರ್ ಎಸ್ ನಿಂದ ಹೊರಹರಿವು 20,540 ಕ್ಯೂಸೆಕ್ಸ್ ಇದೆ. ಬಿಳಿಗೊಂಡ್ಲು ಮಾಪನ ಕೇಂದ್ರದಲ್ಲಿ ಹೊರಹರಿವು 41,424 ಕ್ಯೂಸೆಕ್ಸ್ ನಷ್ಟಿದೆ.

Anantkumar Hegde  ಜಾಡಿಸಿ ಒದ್ದರೆ ಬುದ್ಧಿ ಬರುತ್ತೆ #pratidhvani

93 ವರ್ಷದ ಬಳಿಕ ಮೂರನೇ ಬಾರಿ ಕೆಆರ್ ಎಸ್ ಭರ್ತಿ

2024ರಲ್ಲಿ ಕಾಡಿದ ಬರ 2025ರಲ್ಲಿ ಕಣ್ಮರೆಯಾಗಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಪರಿಣಾಮ 93 ವರ್ಷದ ಬಳಿಕ ಕೆಆರ್ ಎಸ್ ಜೂನ್ ನಲ್ಲೇ ಭರ್ತಿಯಾಗಿ ಇತಿಹಾಸ ಸೃಷ್ಟಿಸಿತು. ನಂತರ ಅಕ್ಟೋಬರ್ ಎರಡನೇ ವಾರದಲ್ಲಿ ಜಲಾಶಯ ಎರಡನೇ ಬಾರಿ ಭರ್ತಿಯಾಗಿತ್ತು. ಅ.18-23ರವರೆಗೆ ಅಣೆಕಟ್ಟೆಯ ಗರಿಷ್ಠ ಸಾಮರ್ಥ್ಯ 124.80 ಅಡಿಗಳಷ್ಟು ನೀರು ಸಂಗ್ರಹ ಕಾಯ್ದುಕೊಳ್ಳುವ ಮೂಲಕ ವರ್ಷದಲ್ಲಿ ಮೂರನೇ ಬಾರಿ ಜಲಾಶಯ ಭರ್ತಿಯಾಗಿ ದಾಖಲೆ ನಿರ್ಮಿಸಿದೆ. 93 ವರ್ಷದಲ್ಲಿ 16 ಬಾರಿ ಮಾತ್ರ ಕೆಆರ್ ಎಸ್ ಭರ್ತಿಯಾಗಿಲ್ಲ.

 

ಕೋಟ್

ಬೀದರ್ ನಿಂದ ಚಾಮರಾಜನಗರದವರೆಗೆ, ಬಳ್ಳಾರಿಯಿಂದ ಕೋಲಾರದವರೆಗೆ ರಾಜ್ಯಾದ್ಯಂತ ಉತ್ತಮ ಮಳೆಯಾಗಿದೆ. ಜಲಾಶಯಗಳು, ಕೆರೆಕಟ್ಟೆಗಳು ಭರ್ತಿಯಾಗಿರುವುದರಿಂದ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಕೃಷಿಗೆ ಯಾವುದೇ ತೊಂದರೆ ಇಲ್ಲ. ನಮ್ಮ ಸರ್ಕಾರ ವರುಣನ ಕೃಪೆಗೆ ಪಾತ್ರವಾಗಿದೆ.

-ಡಿ.ಕೆ.ಶಿವಕುಮಾರ್
ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರು, ಕರ್ನಾಟಕ ಸರ್ಕಾರ

Tags: about krs damdam fullKRS Damkrs dam 2020krs dam 2024krs dam accidentkrs dam agekrs dam at nightkrs dam augustkrs dam authoritykrs dam back waterkrs dam bhartikrs dam boatingkrs dam bridgekrs dam brindavankrs dam buildingkrs dam flood viewkrs dam fullkrs dam full three timeskrs dam full waterkrs dam full waterflowkrs dam gate openkrs dam historykrs dam livekrs dam mysorekrs dam newskrs dam recordskrs dam todaykrs dam videokrs dam viewkrs dam waterkrs full view
Previous Post

ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆಗಳನ್ನು ರೂಪಿಸಲು ಸುತೋಲೆ: ಪ್ರಿಯಾಂಕ್ ಖರ್ಗೆ

Next Post

ಬೆಂಗಳೂರಿನ ಗಾಂಧಿ ನಗರ ಕ್ಷೇತ್ರದಲ್ಲಿ 11200 ನಕಲಿ ಮತದಾರರಿದ್ದಾರೆ.ಸಚಿವ ದಿನೇಶ್ ಗುಂಡೂರಾವ್

Related Posts

Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
0

“ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಸಂಸದ ತೇಜಸ್ವಿ ಸೂರ್ಯ ಅವರು ಕೊಟ್ಟ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ. ಆದರೂ ಅವರ ಸಲಹೆಗಳನ್ನು ಗೌರವಿಸುತ್ತೇನೆ. ಅವುಗಳನ್ನು ಪರಿಶೀಲಿಸಲು ಅಧಿಕಾರಿಗಳಿಗೆ...

Read moreDetails
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

October 28, 2025

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

October 28, 2025
ಈ ವಾರ ತೆರೆಗೆ ಬಹು ನಿರೀಕ್ಷಿತ “ಬ್ರ್ಯಾಟ್”(BRAT). .

ಈ ವಾರ ತೆರೆಗೆ ಬಹು ನಿರೀಕ್ಷಿತ “ಬ್ರ್ಯಾಟ್”(BRAT). .

October 28, 2025
Next Post
ಬೆಂಗಳೂರಿನ ಗಾಂಧಿ ನಗರ ಕ್ಷೇತ್ರದಲ್ಲಿ 11200 ನಕಲಿ ಮತದಾರರಿದ್ದಾರೆ.ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರಿನ ಗಾಂಧಿ ನಗರ ಕ್ಷೇತ್ರದಲ್ಲಿ 11200 ನಕಲಿ ಮತದಾರರಿದ್ದಾರೆ.ಸಚಿವ ದಿನೇಶ್ ಗುಂಡೂರಾವ್

Recent News

Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ
Top Story

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

by ಪ್ರತಿಧ್ವನಿ
October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ
Top Story

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

by ಪ್ರತಿಧ್ವನಿ
October 28, 2025
Top Story

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

by ಪ್ರತಿಧ್ವನಿ
October 28, 2025
ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ
Top Story

ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ

by ಪ್ರತಿಧ್ವನಿ
October 28, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

October 28, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada