ಶಿವಮೊಗ್ಗ : ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಟಿಕೆಟ್ ಘೋಷಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವ ನಡುವೆಯೇ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ತಮ್ಮ ರಾಜಕೀಯ ಜೀವನಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ,ಪಿ ನಡ್ಡಾಗೆ ಪತ್ರ ಬರೆಯುವ ಮೂಲಕ ಚುನಾವಣಾ ಕಣಕ್ಕೆ ಈಶ್ವರಪ್ಪ ವಿದಾಯ ಘೋಷಿಸಿದ್ದಾರೆ.

ನಾನು ಈ ಬಾರಿ ಯಾವುದೇ ಕ್ಷೇತ್ರದಿಂದ ಚುನಾವಣೆಗೆ ನಿಲ್ಲುತ್ತಿಲ್ಲ. ನನ್ನನ್ನು ಯಾವುದೇ ಕ್ಷೇತ್ರದಿಂದ ಸ್ಪರ್ಧೆಗೆ ಇಳಿಸಬೇಡಿ ಎಂದು ಮನವಿ ಮಾಡಿ ಜೆ,ಪಿ ನಡ್ಡಾಗೆ ಈಶ್ವರಪ್ಪ ಪತ್ರ ಬರೆದಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ತಮಗೆ ಟಿಕೆಟ್ ತಪ್ಪುವ ಭಯ ಇದ್ದ ಹಿನ್ನೆಲೆಯಲ್ಲಿ ಈಶ್ವರಪ್ಪ ಮೊದಲೇ ರಾಜಕೀಯ ಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ ಎಂದು ಹೇಳಲಾಗ್ತಿದೆ. ಆದರೆ ಇದರ ಜೊತೆಯಲ್ಲಿ ತಮ್ಮ ಪುತ್ರನ ರಾಜಕೀಯ ಭವಿಷ್ಯವನ್ನು ರೂಪಿಸುವ ಸಲುವಾಗಿ ಈ ನಿರ್ಧಾರ ಘೋಷಿಸಿದ್ದಾರೆ ಎನ್ನಲಾಗಿದೆ.