ಹಿಂದೂ ಸಂಘಟನೆಯ ಕಾರ್ಯಕರ್ತ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ಕೆಎಸ್ ಈಶ್ವರಪ್ಪ ರಾಜೀನಾಮೆ ಘೋಷಿಸಿದಾರೆ.
ಶಿವಮೊಗ್ಗದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಚಾಮುಂಡೇಶ್ವರಿ ಭಕ್ತನಾಗಿರುವ ಅವರು ಈ ಪ್ರಕರಣದಲ್ಲಿ ನಾನು ನಿರ್ದೋಷಿಯಾಗಿ ಹೊರಬರುತ್ತೇನೆ ಎಂಬ ವಿಶ್ವಾಸವಿದೆ ಎಂದು ಅವರು ಹೇಳಿದರು.

ಗ್ರಾಮೀಣಾಭಿವೃದ್ಧಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ. ರಾಜೀನಾಮೆ ನೀಡುವ ಕುರಿತು ೨-೩ ದಿನದ ಹಿಂದೆಯೇ ರಾಜೀನಾಮೆಗೆ ನಿರ್ಧರಿಸಿದ್ದೆ. ಆದರೆ ತನಿಖೆ ಹೊರಗೆ ಬರಲಿ ಎಂದು ಬಯಸಿದ್ದೆ. ತನಿಖೆಯಲ್ಲಿ ನಾನು ನಿರ್ದೋಷಿಯಾಗಿ ಹೊರಗೆ ಬರುತ್ತೇನೆ ಎಂಬ ವಿಶ್ವಾಸವಿದೆ ಎಂದು ಈಶ್ವರಪ್ಪ ಹೇಳಿದರು.