ಬೆಂಗಳೂರಿನಲ್ಲಿ ಕೆ.ಎಸ್.ಡಿ.ಎಲ್ (KSDL) ಅಧಿಕಾರಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಕೆ.ಎಸ್.ಡಿ.ಎಲ್ ನಲ್ಲಿ ಮೆಟಿರಿಯಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿ ಅಮೃತ್ ಸಿರಿಯೂರ್ (Amrutha’s siriyur) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಎಂದು ಗುರುತಿಸಲಾಗಿದೆ.
ಅಮೃತ್ ಸಿರಿಯೂರ್ ಆತ್ಮ ಹತ್ಯೆಗೆ ಶರಣಾಗುವ ಮುನ್ನ ಡೆತ್ ನೊಟ್ (Death note) ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ.ಕೈಯಲ್ಲಿಯೇ ಡೆತ್ ನೋಟ್ ಹಿಡಿದುಕೊಂಡು ಆತ್ಮಹತ್ಯೆ ಗೆ ಶರಣಾಗಿದ್ದಾರೆ.

ಅಮೃತ್ ಸಿರಿಯೂರ್ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣ ಇಂದು ಬೆಳಕಿಗೆ ಬಂದಿದೆ. ಈ ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಇದ್ರೂ ಕೂಡ ಪ್ರಕರಣ ದಾಖಲಿಸದ ಪೊಲೀಸರ ನಡೆಯ ವಿರುದ್ಧ ಅನುಮಾನಗಳು ವ್ಯಕ್ತವಾಗುತ್ತಿದೆ.
ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ (Mahalakshmi layout)ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಕೆ.ಎಸ್.ಡಿ.ಎಲ್ ನ ಹಿರಿಯ ಅಧಿಕಾರಿಗಳ ಹೆಸರನ್ನು ಡೆತ್ ನೋಟ್ ನಲ್ಲಿ ಉಲ್ಲೇಖ ಮಾಡಿ ಈ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಚೇರಿಯಲ್ಲಿ ಕೆಲಸದ ಸಂಬಂಧ ತಮ್ಮಮೇಲೆ ಹೆಚ್ಚಿನ ಒತ್ತಡ ಹಾಕುವುದು ಮತ್ತು ಕಿರುಕುಳ ನೀಡಿರುವ ಆರೋಪ ಮಾಡಿರುವ ಮೃತ ಅಧಿಕಾರಿ ಮೇಲಧಿಕಾರಿಗಳ ಕಿರುಕುಳದಿಂದ ತಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ನಲ್ಲಿ ತಿಳಿಸಿದ್ದಾರೆ.





