• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಲೆಮಾರಿ ಸಿದ್ದರಾಮಯ್ಯ ವಿರುದ್ಧ ಸಾಮಾನ್ಯ ಕಾರ್ಯಕರ್ತನನ್ನ ನಿಲ್ಲಿಸಿ ಗೆಲ್ಲಿಸ್ತೀವಿ : ಈಶ್ವರಪ್ಪ

ಪ್ರತಿಧ್ವನಿ by ಪ್ರತಿಧ್ವನಿ
January 2, 2023
in ಕರ್ನಾಟಕ, ರಾಜಕೀಯ
0
ಅಲೆಮಾರಿ ಸಿದ್ದರಾಮಯ್ಯ ವಿರುದ್ಧ ಸಾಮಾನ್ಯ ಕಾರ್ಯಕರ್ತನನ್ನ ನಿಲ್ಲಿಸಿ ಗೆಲ್ಲಿಸ್ತೀವಿ : ಈಶ್ವರಪ್ಪ
Share on WhatsAppShare on FacebookShare on Telegram

ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ ವಿರುದ್ದ ತಮ್ಮ ವಾಗ್ದಾಳಿಯನ್ನ ಮುಂದುವರೆಸಿರುವ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅಲೆಮಾರಿ ಸಿದ್ದರಾಮಯ್ಯ ವಿರುದ್ಧ ಸಾಮಾನ್ಯ ಕಾರ್ಯಕರ್ತನನ್ನ ನಿಲ್ಲಿಸಿ ಗೆಲ್ಲಿಸ್ತೀವಿ ಎಂದು ಹೇಳಿದ್ದಾರೆ.

ADVERTISEMENT

ಶಿವಮೊಗ್ಗದಲ್ಲಿ ಈ ಕುರಿತು ಮಾತನಾಡಿದ ಕೆ.ಎಸ್.ಈ ಚುನಾವಣೆಯಲ್ಲಿ ಗೆದ್ದ ಶಾಸಕ ಬೇರೆ ಕ್ಷೇತ್ರ ಹುಡುಕುವುದು ರಾಜ್ಯದ ಮತ್ತು ಆ ಕ್ಷೇತ್ರದ ಮತದಾರರಿಗೆ ಮಾಡುವ ಅವಮಾನ ತನ್ನ ಅಭಿವೃದ್ಧಿ ಕಾರ್ಯಗಳನ್ನು ಕ್ಷೇತ್ರದ ಜನತೆಯ ಮುಂದಿಟ್ಟು ಮತ ಕೇಳುವಂತಿರಬೇಕು ಅಲೆಮಾರಿಯಂತೆ ಕ್ಷೇತ್ರ ಹುಡುಕಬಾರದು ಎಂದು ಚಾಟಿ ಬೀಸಿದ್ದಾರೆ.

ಇವತ್ತಿಗೂ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆಂದು ಹೇಳುತ್ತಿಲ್ಲ ಇಂದಲ್ಲ ನಾಳೆ ಯಾವ ಪಕ್ಷದಿಂದ ಸ್ಪರ್ಧೆ ಎಂದು ಹೇಳುವ ದಿನ ಕೂಡ ಬರಲಿದೆ ಯಾವ ಕ್ಷೇತ್ರದಿಂದ ಸ್ಪರ್ಧೆ ಎಂಬುವುದೇ ಗೊತ್ತಿಲ್ಲದ ವ್ಯಕ್ತಿ ರಾಜ್ಯವನ್ನು ಆಡಳಿತ ಮಾಡುತ್ತಾರಾ ಸಿದ್ದರಾಮಯ್ಯರಿಗೆ ಸರಿಯಾದ ಕ್ಷೇತ್ರ ಸಿಗಲ್ಲ ಯಾವುದೇ ಕ್ಷೇತ್ರದಿಂದ ನಿಂತರು ಸೋಲುತ್ತಾರೆ ಬಿಜೆಪಿಯ ಸಾಮಾನ್ಯ ಕಾರ್ಯಕರ್ತನ ಕಣಕ್ಕಿಳಿಸಿ ಸಿದ್ದರಾಮಯ್ಯನನ್ನು ಸೋಲಿಸುತ್ತೇವೆ ಎಂದು ಭವಿಷ್ಯ ನುಡಿದಿದ್ದಾರೆ.

ಿನ್ನು ಕಳಸ ಬಂಡೂರಿ ಯೋಜನೆ ಜಾರಿ ವಿಚಾರವಾಗಿ ಮಾತನಾಡಿ ಈ ವಿಚಾರದಲ್ಲಿ ಬಿಜೆಪಿ ಅಗ್ರಸ್ಥಾನದಲ್ಲಿದೆ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪ್ರಯತ್ನ ನಡೆಸಿಲ್ಲ ಮಲ್ಲಿಕಾರ್ಜುನ ಖರ್ಗೆ, ಧರ್ಮಸಿಂಗ್ , ಎಚ್ ಕೆ ಪಾಟೀಲ್ ಅವರು ಸೋನಿಯಾ ಭೇಟಿ ಮಾಡಿ ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ನಮ್ಮೊಂದಿಗಿದೆ ಎಂದಿದ್ದರು. ಇದಾದ ಒಂದು ತಿಂಗಳಲ್ಲಿ ಗೋವಾ ಚುನಾವಣೆ ಸಂದರ್ಭದಲ್ಲಿ ಸೋನಿಯಾ ಗಾಂಧಿ ಹೇಳಿದ್ದರು. ಒಂದು ಹನಿ ನೀರು ಕೂಡ ಕರ್ನಾಟಕಕ್ಕೆ ಕೊಡಲ್ಲ ಎಂದು ಭಾಷಣ ಮಾಡಿದ್ದರು. ಕಾಂಗ್ರೆಸ್ ನದು ದ್ವಂದ್ವ ರಾಜಕಾರಣ ಮಹಾದಾಯಿ ಯೋಜನೆ ರಾಜಕಾರಣಕ್ಕಾಗಿ ಬಳಸಿಕೊಂಡರು ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮಹದಾಯಿ ಯೋಜನೆ ಮಾಡಿದ್ದೆವು. ಅಂದು ಡಿಸಿಎಂ ಆಗಿದ್ದ ಯಡಿಯೂರಪ್ಪ 100 ಕೋಟಿ ಅನುದಾನ ನೀಡಿದ್ದರು. ಅಂದಿನಿಂದಲೂ ಮಹಾದಾಯಿ ಯೋಜನೆ ವಿಚಾರ ಚಲಾವಣೆಯಲ್ಲಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ ಮಹಾರಾಷ್ಟ್ರ ಕರ್ನಾಟಕ ಗೋವಾ ಸಿಎಂ ಒಟ್ಟಿಗೆ ಸಭೆ ಕರೆದು ಬಗೆಹರಿಸಲು ಪ್ರಯತ್ನಿಸಿಲ್ಲ. ರಾಜ್ಯಕ್ಕೆ ನ್ಯಾಯ ಕೊಡಲು ರಾಜ್ಯ ಹಾಗೂ ಕೇಂದ್ರ ಸರ್ಕಾರ ಬದ್ದವಾಗಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ನಾವು ಅದನ್ನು ಮಾಡಲ್ಲ. ಯೋಜನೆ ಜಾರಿಗೊಳಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನು ಸಿದ್ದೇಶ್ವರ ಸ್ವಾಮಿಗಲ ಅನಾರೋಗ್ಯದ ವಿಚಾರವಾಗಿ ಪ್ರತಿಕ್ರಿಯಿಸಿ ಸಿದ್ದೇಶ್ವರ ಸ್ವಾಮಿಗಳು ಸಿದ್ದಾಂತದ ಗಣಿ. ಶಿಸ್ತಿನ ಸಿಪಾಯಿಗಳ ನಾಯಕ. ಬೆಳಿಗ್ಗೆ ಆರು ಗಂಟೆಗೆ ಪ್ರಚಚನ ಪ್ರಾರಂಭಿಸುತ್ತಿದ್ದರು ಅವರ ಪ್ರವಚನ‌ ಕೇಳಲು ಮುಂಚಿತವಾಗಿ ಬಂದು ಜನ ಕೂರುತ್ತಿದ್ದರು. ಭಾರತೀಯ ಸಂಸ್ಕೃತಿಯ ವಿಚಾರವನ್ನು ಅವರಿಂದಲೇ ಕೇಳಬೇಕು. ಅವರು ಆದಷ್ಟು ಬೇಗ ಗುಣಮುಖರಾಗಿ, ಎಲ್ಲರಿಗೂ ಮಾರ್ಗದರ್ಶನ ಮಾಡಲಿ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಹಾರೈಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಮನರಂಜನಾ ಕ್ಷೇತ್ರಕ್ಕೆ ಮೂರು ಸಾವಿರ ಕೋಟಿ ಹೂಡಿಕೆ ಘೋಷಿಸಿದ ಹೊಂಬಾಳೆ

Next Post

ರಾಜಸ್ಥಾನ; ಹಳಿ ತಪ್ಪಿದ ರೈಲು, 26 ಮಂದಿಗೆ ಗಾಯ

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ರಾಜಸ್ಥಾನ; ಹಳಿ ತಪ್ಪಿದ ರೈಲು, 26 ಮಂದಿಗೆ ಗಾಯ

ರಾಜಸ್ಥಾನ; ಹಳಿ ತಪ್ಪಿದ ರೈಲು, 26 ಮಂದಿಗೆ ಗಾಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada