ಕೆಎಸ್ಆರ್‌ಟೊಸೊ ಬಸ್‌ವೊಂದು ಸೋಮವಾರ (ಆಗಸ್ಟ್ 21) ಬೆಳಿಗ್ಗೆ ಮಡಿಕೇರಿ (Madikeri) ಟೋಲ್ಗೇಟ್ ಬಳಿ ಇರುವ ಜನರಲ್ ತಿಮ್ಮಯ್ಯ ವೃತ್ತಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಸೇನಾನಿ ಜನರಲ್ ತಿಮ್ಮಯ್ಯ ಪ್ತಿಮೆ (General Timmaiah Statue) ಸೇನಾನಿ ಪ್ರತಿಮೆ ನೆಲಕ್ಕುರುಳಿದೆ.

ಬಸ್ ಡಿಪೋದಿಂದ ಬಸ್ ನಿಲ್ದಾಣಕ್ಕೆ ಬರುತ್ತಿದ್ದ ಈ ಬಸ್ನಲ್ಲಿ ಚಾಲಕ ಮತ್ತು ನಿರ್ವಾಹಕ ಇಬ್ಬರೇ ಇದ್ದರು. ವಾಹನವೊಂದು ಅಡ್ಡಲಾಗಿ ಬಂದಿದ್ದರಿಂದ ಬಸ್ ಅನ್ನು ಪಕ್ಕಕ್ಕೆ ತಿರುಗಿಸಿದಾಗ ಜನರಲ್ ತಿಮ್ಮಯ್ಯ ಮೂರ್ತಿಗೆ ಗುದ್ದಿ ಅಪಘಾತ ಸಂಭವಿಸಿದೆ.
ನಿರ್ವಾಹಕರಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ತೆರಳಿದ್ದು ಪರಿಶೀಲನೆ ನಡೆಸಿದ್ದಾರೆ. ಬಸ್ ಚಾಲಕ ಕೊಟ್ರೇಶ್ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

