
ಕೊಡಗು:ಮೈಸೂರಿನಿಂದ ವಿರಾಜಪೇಟೆಗೆ ಬರುತ್ತಿದ್ದ KSRTC ಬಸ್ ಅಪಘಾತಕ್ಕೀಡಾದ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ದೇವರಪುರದ ಬಳಿ ನಡೆದಿದೆ.

ಇಂದು ರಾತ್ರಿ 8.30ರ ಸುಮಾರಿಗೆ ನಡೆದಿರುವ ದುರ್ಘಟನೆ. ಘಟನೆಯಲ್ಲಿ ಬಸ್ ಚಾಲಕ ಸೇರಿ 17 ಪ್ರಯಾಣಿಕರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಗಾಯಾಳುಗಳಿಗೆ ಗೋಣಿಕೊಪ್ಪ, ವಿರಾಜಪೇಟೆ ಸೇರಿದಂತೆ ಅಕ್ಕಪಕ್ಕದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಮರಕ್ಕೆ ಡಿಕ್ಕಿ ಹೊಡೆದಿರುವ ರಭಸಕ್ಕೆ ಬಸ್ ನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ.