ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಪ್ರಸಕ್ತ ವರ್ಷದ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಇದರೊಂದಿಗೆ ಕೆಎಸ್ಆರ್ಟಿಸಿಯ ಮುಕುಟಕ್ಕೆ ಜಾಗತಿಕ ಮನ್ನಣೆ ಸಿಕ್ಕಂತಾಗಿದೆ.
ಸಿಂಗಾಪುರದ ವಿಶ್ವ ಸುಸ್ಥಿರ ಕಾಂಗ್ರೆಸ್ ನೀಡುವ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ 2023ನೇ ಸಾಲಿನ 14ನೇ ಆವೃತ್ತಿಯ 18ನೇ ಪ್ರಶಸ್ತಿಗೆ ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳ ಅನುಷ್ಠಾನ ವರ್ಗದಲ್ಲಿ ಕೆಎಸ್ಆರ್ಟಿಸಿ ಆಯ್ಕೆಯಾಗಿದೆ.
ಸಿಂಗಾಪುರದಲ್ಲಿ ಗುರುವಾರ (ಆಗಸ್ಟ್ 17) ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿಗಮದ ಪರವಾಗಿ ಮುಖ್ಯ ಲೆಕ್ಕಾಧಿಕಾರಿ ಹಾಗೂ ಆರ್ಥಿಕ ಸಲಹೆಗಾರ್ತಿ ಮಂಜುಳ ನಾಯ್ಕ್, ಮಂಡಳಿ ಕಾರ್ಯದರ್ಶಿ ಹಾಗೂ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಲತಾ ಟಿ.ಎಸ್ ಪ್ರಶಸ್ತಿ ಸ್ವೀಕರಿಸಿದರು.

ಹೊಸ ಸೇವೆಗಳನ್ನು ಪರಿಚಯಿಸುವ ಮೂಲಕ ದೇಶದ ಗಮನ ಸೆಳೆದಿರುವ ಕೆಎಸ್ಆರ್ಟಿಸಿ ಹಲವಾರು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.
ಈ ಸುದ್ದಿ ಓದಿದ್ದೀರಾ? ಪರಿಸರ ಸೂಕ್ಷ್ಮ ವಲಯದಲ್ಲಿ ಕಟ್ಟಡ ನಿರ್ಮಾಣ ವಿಚಾರ, ಗೋಲ್ಡನ್ ಸ್ಟಾರ್ ಗಣೇಶ್ಗೆ ನೋಟಿಸ್
2018-19ರಲ್ಲಿ ಜೀವನಮಟ್ಟ ಸುಧಾರಿಸುವ ಉತ್ತಮ ಉಪಕ್ರಮಗಳ ಪ್ರಶಸ್ತಿ, ಅತ್ಯುತ್ತಮ ಪ್ರಯಾಣಿಕ ಸಾರಿಗೆ ಸಂಸ್ಥೆ ವಿಭಾಗದಲ್ಲಿ ಎಕ್ಸೆಲೆನ್ಸಿ ಪ್ರಶಸ್ತಿ ಪಡೆದುಕೊಂಡಿತ್ತು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು 2020ರಲ್ಲಿ ಶ್ರೀ ಶೌಚಾಲಯ ಮತ್ತು ಮೊಬೈಲ್ ಫೀವರ್ ಕ್ಲಿನಿಕ್ ಅಭಿವೃದ್ಧಿಪಡಿಸಿದ್ದಕ್ಕಾಗಿ ರಾಷ್ಟ್ರೀಯ ಉದ್ದಿಮೆಗಳ ಅತ್ಯುತ್ತಮ ಪ್ರಶಸ್ತಿ ಪಡೆದುಕೊಂಡಿತ್ತು.
2021ರಲ್ಲಿ ಭಾರತೀಯ ಸಾರ್ವಜನಿಕ ಮಂಡಳಿ ನೀಡುವ ಪಿಆರ್ಸಿಐ ಎಕ್ಸಲೆನ್ಸ್ ಪ್ರಶಸ್ತಿಯನ್ನು ಐದು ವರ್ಗದಲ್ಲಿ ಸಾಧಿಸಿದೆ. ಇದೀಗ ಈ ಬಾರಿ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿ ಪಡೆದುಕೊಂಡು ಸಾರಿಗೆ ಸಂಸ್ಥೆಯ ಕೀರ್ತಿ ಹೆಚ್ಚಿಸಿದೆ.











