ರಾಜ್ಯದಲ್ಲಿ ದೀಪಾವಳಿ ಹಬ್ಬದ (Deepavali) ಹಿನ್ನಲೆ, ಪ್ರಯಾಣಿಕರಿಗೆ ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಿದೆ. ಸಾಲು ಸಾಲು ರಜೆಯಿರುವ ಕಾರಣ, ಊರಿಗೆ ಹೋಗುವವರ ಸಂಖ್ಯೆ ಸಹಜವಾಗಿ ಹೆಚ್ಚಾಗಲಿದೆ. ಇದರ ಜೊತೆಗೆ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡ ಸೀಟ್ ಬುಕಿಂಗ್ (Advance booking) ಮಾಡೋದಕ್ಕೂ ಅವಕಾಶ ನೀಡಲಾಗಿದೆ.

ಅಕ್ಟೋಬರ್ 31ರಂದು ನರಕ ಚತುರ್ದಶಿ, ನವಂಬರ್ 1 ಕನ್ನಡ ರಾಜ್ಯೋತ್ಸವ ಹಾಗೂ ನವಂಬರ್ 2 ರಂದು ಬಲಿಪಾಡ್ಯಮಿ ಹಿನ್ನಲೆ, 2 ಸಾವಿರ ಹೆಚ್ಚುವರಿ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
ಬೆಂಗಳೂರಿನ (Bangalore) ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆಗೆ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.






