ದಿಯಾ ಖ್ಯಾತಿಯ ದೀಕ್ಷಿತ ಶೆಟ್ಟಿ ನಟನೆಯ KTM ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಇನ್ನು ಚಿತ್ರದ ಟೀಸರ್‌ಅನ್ನು ಸ್ಯಾಂಡಲ್‌ವುಡ್‌ನ 50 ಸೆಲೆಬ್ರಿಟಿಗಳು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದು ವಿಶೇಷವಾಗಿತ್ತು.
ವಿಕ್ರಮ್ ರವಿಚಂದ್ರನ್, ಶೃತಿ ಹರಿಹರನ್, ವಿಜಯ ರಾಘವೇಂದ್ರ, ದೀಪಿಕಾ ದಾಸ್, ಅನುಪಮಾ ಗೌಡ, ನವೀನ್ ಶಂಕರ್, ಮೇಘಾ ಶೆಟ್ಟಿ, ಸಿದ್ದು ಮೂಲಿಮನಿ, ಖುಷಿ ರವಿ, ಇಶಾನ್, ಶೈನ್ ಶೆಟ್ಟಿ, ಯಶ್ ಶೆಟ್ಟಿ ಸೇರಿದಂತೆ 50 ಜನ ಸೆಲೆಬ್ರೆಟಿಗಳು ಸೋಶಿಯಲ್ ಮೀಡಿಯಾದಲ್ಲಿ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ನವಿರಾದ ಪ್ರೇಮ್ ಕಹಾನಿ ಹೊತ್ತ KTM ಚಿತ್ರಕ್ಕೆ ಅಥರ್ವ ಚಿತ್ರ ಖ್ಯಾತಿಯ ಅರುಣ್ ಆಕ್ಷನ್ ಕಟ್ ಹೇಳಿದ್ದು ಮಹಾಸಿಂಹ ಮೂವೀಸ್ ಬ್ಯಾನರ್‌ನಡಿ ವಿನಯ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ನವೀನ್ ಕ್ಯಾಮೆರಾ ವರ್ಕ್, ಚೇತನ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.
ಚಿತ್ರದಲ್ಲಿ ಒಟ್ಟು ನಾಲ್ಕು ಶೇಡ್‌ನಲ್ಲಿ ದೀಕ್ಷಿತ ಶೆಟ್ಟಿ ಕಾಣಿಸಿಕೊಳ್ಳತ್ತಿದ್ದು ಕಾಜಲ್ ಕುಂದರ್ ಹಾಗೂ ಸಂಜನಾ ಡೋಸ್ ಚಿತ್ರದಲ್ಲಿ ನಾಯಕಿಯರಾಗಿ ತೆರೆ ಹಂಚಿಕೊಂಡಿದ್ದಾರೆ. ಇನ್ನುಳಿದಂತೆ ಉಷಾ ಭಂಡಾರಿ, ಪ್ರಕಾಶ್ ತುಮಿನಾಡು, ರಘು ರಮಣಕೊಪ್ಪ, ಶಾನಿಲ್ ಗುರು, ಬಾಬು ಹಿರಿಯಣಯ್ಯ, ದೇವ್ ದೇವಯ್ಯ,ಅಭಿಷೇಕ್, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸಂತೋಷ್ ತಾರಾಬಳಗದಲ್ಲಿದ್ದಾರೆ.






