ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ರಾಜ್ಯ ಸರಕಾರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ(ಬಿಡಿಎ)ಆಯುಕ್ತ ಸ್ಥಾನದಿಂದ ಎಂ.ಬಿ.ರಾಜೇಶ್ ಗೌಡ ಅವರನ್ನು ಎತ್ತಂಗಡಿ ಮಾಡಲಾಗಿದ್ದು, ಅವರ ಜಾಗಕ್ಕೆ ಕುಮಾರ ನಾಯ್ಕ್ ಅವರನ್ನು ನೇಮಿಸಿದೆ.
ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯ್ಕ್ ಅವರನ್ನು ಬಿಡಿಎ ನೂತನ ಆಯಕ್ತರಾಗಿ ನೇಮಕ ಮಾಡಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಬೆಂಗಳೂರಿನಲ್ಲಿ ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಹೊಂದಿದ ಬಡಾವಣೆಯಲ್ಲಿ ಹಲವು ಜನರಿಗೆ ಪರ್ಯಾಯ ನಿವೇಶನಗಳನ್ನು ಹಂಚಿಕೆ ಮಾಡಿದ ಕಾರಣಕ್ಕೆ ರಾಜೇಶ್ ಗೌಡ ಅವರನ್ನು ಸುಪ್ರೀಂ ಕೋರ್ಟ್ ನಿನ್ನೆ ತೀವ್ರ ತರಾಟೆಗೆ ತೆಗೆದುಕೊಂಡಿತ್ತು.
ಕೋರ್ಟ್ ಆದೇಶದ ಬಗ್ಗೆ ಅವಿಧೇಯತೆ ತೋರಿದ್ದಕ್ಕೆ ರಾಜೇಶ್ ಗೌಡ ಅವರನ್ನು ಪ್ರಾಧಿಕಾರದಿಂದ ವರ್ಗಾವಣೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಸುಪ್ರಿಂ ಕೋರ್ಟ್ ನಿರ್ದೇಶನ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಅವರನ್ನು ವರ್ಗಾವಣೆ ಮಾಡಲಾಗಿದ್ದು, ಕುಮಾರ್ ನಾಯ್ಕ್ ಅವರಿಗೆ ಹೆಚ್ಚುವರಿಯಾಗಿ ಬಿಡಿಎ ಆಯುಕ್ತರ ಹುದ್ದೆ ನೀಡಲಾಗಿದೆ.