ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಹಾಗೂ ಎಡಿಜಿಪಿ ಚಂದ್ರಶೇಖರ್ (ADGP Chandrashekar) ನಡುವಿನ ಸಮರ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ನಿನ್ನೆ ಸುದ್ದಿಗೋಷ್ಠಿ ನಡೆಸಿ, ಕುಮಾರಸ್ವಾಮಿ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಆರೋಪಗಳ ಸುರಿಮಳೆ ಗೈದಿದ್ದರು.
ಇದೀಗ ಚಂದ್ರಶೇಖರ್ ವಿರುದ್ಧ ಹೆಚ್‌ಡಿಕೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ (Amit sha) ದೂರು ನೀಡಿದ್ದಾರೆ. ನಿನ್ನೆ ದೂರವಾಣಿ ಮೂಲಕ ಹೆಚ್‌ಡಿಕೆ, ಅಮಿತ್ ಶಾ ಜೊತೆ ಚರ್ಚಿಸಿ, ಚಂದ್ರಶೇಖರ್ ವಿರುದ್ಧ ಗೃಹ ಇಲಾಖೆಯಿಂದ ಕ್ರಮ ತೆಗೆದುಕೊಳ್ಳಲು ಮನವಿ ಮಾಡಿದ್ದಾರೆ.
ಹೆಚ್.ಡಿ.ಕುಮಾರಸ್ವಾಮಿ ಐಪಿಎಸ್ ಅಧಿಕಾರಿಯ (Ips officer) ಅಕ್ರಮಗಳ ಮಾಹಿತಿ ಸಂಗ್ರಹಿಸಿ ಎಲ್ಲಾ ಮಾಹಿತಿಯನ್ನೂ ಕೇಂದ್ರ ಗೃಹ ಸಚಿವರಿಗೆ ರವಾನಿಸಿದ್ದಾರಂತೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಅಮಿಶ್ ಶಾ, ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗ್ತಿದೆ.