• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕುಮಾರಸ್ವಾಮಿ ಮತ ಕೇಳುವ ಹಕ್ಕು ಕಳೆದುಕೊಂಡಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಕೃಷ್ಣ ಮಣಿ by ಕೃಷ್ಣ ಮಣಿ
November 4, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

“ಚನ್ನಪಟ್ಟಣ ಕ್ಷೇತ್ರದಿಂದ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರು ಜನರ ಕಷ್ಟಕ್ಕೆ ಸ್ಪಂದಿಸಿಲ್ಲ, ಈ ಭಾಗದ ಜನರಿಗೆ ಒಂದೇ ಒಂದು ಉತ್ತಮ ಯೋಜನೆ ನೀಡಿಲ್ಲ. ಇಲ್ಲಿನ ಬಡವರಿಗೆ ಸಹಾಯ ಮಾಡಲು ಆಗದಿದ್ದರೆ ಅವರು ಮತ್ತೆ ಮತ ಕೇಳುವ ಹಕ್ಕು ಇದೆಯೇ? ಅವರು ಈ ಜನರ ಬಳಿ ಮತ ಕೇಳುವ ಹಕ್ಕು ಕಳೆದುಕೊಂಡಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು.

ADVERTISEMENT

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಹೊಂಗನೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯ ತಗಚಗೆರೆ ಹಾಗೂ ಭೂಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಅವರ ಪರ ಸೋಮವಾರ ಪ್ರಚಾರಸಭೆ ಉದ್ದೇಶಿಸಿ ಮಾತನಾಡಿದರು.

“ನಾನು ಹಾಗೂ ಸಿದ್ದರಾಮಯ್ಯ ಅವರು ವಿಧಾನಸಭೆ ಚುನಾವಣೆಗೂ ಮುನ್ನ ಐದು ಗ್ಯಾರಂಟಿ ಯೋಜನೆಗಳ ಭರವಸೆ ನೀಡಿದೆವು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬೆಲೆಏರಿಕೆ ಸಮಸ್ಯೆಗೆ ಮುಕ್ತಿ ನೀಡಿ ನಿಮ್ಮ ಬದುಕಿನಲ್ಲಿ ಬದಲಾವಣೆ ತರಬೇಕು ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆ ಜಾರಿ ಮಾಡಿದ್ದೇವೆ. ಇಂತಹ ಒಂದೇ ಒಂದು ಯೋಜನೆಯನ್ನು ನೀಡದ ಕುಮಾರಣ್ಣ ಇಲ್ಲಿ ಬಂದು ಮತ ಕೇಳುತ್ತಿದ್ದಾರೆ. ಈ ಭಾಗದ ಜನರ ಕಷ್ಟಕ್ಕೆ ಸ್ಪಂದಿಸಿದ್ದರೆ ಕುಮಾರಣ್ಣನಿಗೆ ಮತ ಕೇಳುವ ಹಕ್ಕಿತ್ತು. ಆದರೆ ನೀನು ಮತ ಕೇಳುವ ಹಕ್ಕು ಕಳೆದುಕೊಂಡಿದ್ದೀಯ. ನಿನ್ನನ್ನು ನಂಬಿ ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಿದ ಜನರನ್ನು ಕೈಬಿಟ್ಟು ಮಂಡ್ಯಕ್ಕೆ ಹೋಗಿದ್ದೀಯ. ಈಗ ಮತ್ತೆ ಬಂದು ಮತ ಕೇಳುತ್ತಿದ್ದೀಯಲ್ಲ, ನಿನಗೆ ಮತ ಕೇಳುವ ಹಕ್ಕಿದೆಯೇ?” ಎಂದು ಪ್ರಶ್ನಿಸಿದರು.

ಜನರಿಗೆ ಸಹಾಯ ಮಾಡಲು ಕುಮಾರಸ್ವಾಮಿಗೆ ಸಾಧ್ಯವಿರಲಿಲ್ಲವೇ?

“ಕುಮಾರಸ್ವಾಮಿ ಅವರು ಈ ಕ್ಷೇತ್ರದ ಜನಪ್ರತಿನಿಧಿಯಾಗಿ ಒಂದೇ ಒಂದು ದಿನ ಈ ಕ್ಷೇತ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ಮಾಡಲು ಬರಲಿಲ್ಲ. ಹಾಗಾದ್ರೆ ನಿನಗೆ ಶಾಸಕ ಸ್ಥಾನ ಯಾಕೆ ಬೇಕು? ಕನ್ನಡ ರಾಜ್ಯೋತ್ಸವದಂದು ನೀನು ಇಲ್ಲಿ ಕನ್ನಡ ಧ್ವಜ ಹಾರಿಸಲಿಲ್ಲ. ಅಲ್ಲಿಗೆ ನಿನ್ನ ಹಾಗೂ ಈ ಚನ್ನಪಟ್ಟಣ ಕ್ಷೇತ್ರದ ಜನರ ನಡುವೆ ಭಾವನಾತ್ಮಕ ಸಂಬಂಧ ಎಲ್ಲಿದೆ? ಹೀಗಾಗಿ ಕುಮಾರಣ್ಣ ಮತ ಕೇಳುವ ಹಕ್ಕು ಕಳೆದುಕೊಂಡಿದ್ದಾರೆ” ಎಂದು ಹರಿಹಾಯ್ದರು.

“ಈ ಕ್ಷೇತ್ರದಲ್ಲಿ ಅನೇಕ ಜನರು ಬಗರ್ ಹುಕ್ಕುಂ ಸಾಗುವಳಿಗೆ ಅರ್ಜಿ ಹಾಕಿದ್ದೀರಿ. ಅನೇಕರು ನಿವೇಶನ, ಮನೆಯಿಲ್ಲ ಎಂದು ಅರ್ಜಿ ಹಾಕಿದ್ದೀರಿ. ನಾನು ಇಲ್ಲಿ ಭೇಟಿ ಮಾಡಿ ನಿಮ್ಮ ಅರ್ಜಿ ನೋಡಿದ ಬಳಿಕ ಈ ಭಾಗದಲ್ಲಿ ನೂರಾರು ಎಕರೆ ಜಮೀನು ಖರೀದಿ ಮಾಡಿ ನಿವೇಶನ ಹಂಚಲಾಗುತ್ತಿದೆ. 5 ಸಾವಿರ ಕುಟುಂಬಗಳಿಗೆ ನಿವೇಶನ ಮಂಜೂರು ಮಾಡಿಸಿದ್ದೇನೆ. ಈ ಕೆಲಸ ಕುಮಾರಸ್ವಾಮಿ ಅವರಿಂದ ಸಾಧ್ಯವಾಗುತ್ತಿರಲಿಲ್ಲವೇ?” ಎಂದು ಟೀಕಿಸಿದರು.

“ದೇವರು ವರ, ಶಾಪ ಕೊಡುವುದಿಲ್ಲ. ಕೇವಲ ಅವಕಾಶ ಮಾತ್ರ ನೀಡುತ್ತಾನೆ. ಅದೇ ರೀತಿ ರಾಜಕೀಯದಲ್ಲಿ ನಮಗೆ ಜನ ಅವಕಾಶ ಕೊಟ್ಟಾಗ ನಾವು ಅವರಿಗೆ ಏನು ಮಾಡುತ್ತೇವೆ ಎಂಬುದು ಮುಖ್ಯ. ನಾವು ರಾಜಕಾರಣಿಗಳು ಚುನಾವಣೆಯಲ್ಲಿ ನಿಮ್ಮ ಸೇವೆ ಮಾಡುತ್ತೇವೆ ಎಂದು ಹೇಳಿ ನಿಮ್ಮ ಮುಂದೆ ಬಂದು ನಿಲ್ಲುತ್ತೇವೆ. ನಿಮ್ಮ ಬದುಕಿನಲ್ಲಿ ಬದಲಾವಣೆ ತಂದು, ನಿಮ್ಮ ಕಷ್ಟ ಸುಖಕ್ಕೆ ನಿಲ್ಲುತ್ತೇವೆ. ನಮಗೆ ಮತ ನೀಡಿ ಎಂದು ಕೇಳಲು ಬರುತ್ತೇವೆ” ಎಂದು ತಿಳಿಸಿದರು.

ನಿಮಗೇನು ಲಾಭ ಎಂದು ಆಲೋಚಿಸಿ
“ಯೋಗೇಶ್ವರ್ ಅವರು ಮೂರ್ನಾಲ್ಕು ಬಾರಿ ಶಾಸಕರಾಗಿ ಕೆಲಸ ಮಾಡಿದ್ದಾರೆ. ಕಳೆದ 2 ಬಾರಿ ಇದೇ ಕ್ಷೇತ್ರದಲ್ಲಿ ಸೋತಿದ್ದಾರೆ. ಈ ಎರಡು ಅವಧಿಯಲ್ಲಿ ನೀವು ಕುಮಾರಸ್ವಾಮಿ ಅವರನ್ನು ಗೆಲ್ಲಿಸಿದ್ದೀರಿ. ಕುಮಾರಸ್ವಾಮಿ ಅವರು ಈ ಕ್ಷೇತ್ರದಲ್ಲೂ ಶಾಸಕರಾಗಿ ಹಾಗೂ ಮುಖ್ಯಮಂತ್ರಿಯಾಗಿದ್ದರು. ಪಕ್ಕದ ಕ್ಷೇತ್ರದಿಂದಲೂ ಶಾಸಕರಾಗಿ, ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದರು. ರಾಮನಗರದಲ್ಲಿ ಅವರ ಧರ್ಮಪತ್ನಿ ಹಾಗೂ ನನ್ನ ಸಹೋದರಿ ಅನಿತಾ ಕುಮಾರಸ್ವಾಮಿ ಅವರು ಶಾಸಕಿಯಾಗಿ ಕೆಲಸ ಮಾಡಿದ್ದಾರೆ.ಯೋಗೇಶ್ವರ್ ಹಾಗೂ ಕುಮಾರಸ್ವಾಮಿ ಅವರ ಮಧ್ಯೆ ಏನಾಗಿದೆಯೋ ನಾನು ಚರ್ಚೆ ಮಾಡುವುದಿಲ್ಲ. ನಾನು ವ್ಯಕ್ತಿ ಮೇಲೆ ರಾಜಕೀಯ ಮಾಡುವುದಿಲ್ಲ. ನಿಮಗೇನು ಲಾಭ, ಕ್ಷೇತ್ರ ಹಾಗೂ ಕ್ಷೇತ್ರದ ಜನತೆಗೆ ಏನು ಲಾಭ ಎಂದು ಆಲೋಚನೆ ಮಾಡಿ” ಎಂದರು.

“ಕುಮಾರಣ್ಣನವರನ್ನು ನೀವು ಎರಡು ಬಾರಿ ಶಾಸಕರಾಗಿ ಆಯ್ಕೆ ಮಾಡಿ ಕಳುಹಿಸಿದಿರಿ. ಅವರು ನಿಮ್ಮ ಪ್ರತಿನಿಧಿಯಾಗಿ ನಿಮ್ಮ ಊರಿಗೆ ಬಂದು ಅವರು ಏನು ಮಾಡಿದ್ದಾರೆ? ಎಂದು ಯೋಗೇಶ್ವರ್ ಅವರು ಪ್ರಶ್ನೆ ಕೇಳಿದ್ದು, ನೀವೆಲ್ಲರೂ ಇಲ್ಲ ಎಂದು ಹೇಳಿದ್ದೀರಿ. ಲೋಕಸಭೆ ಚುನಾವಣೆ ಬಳಿಕ ಈ ಕ್ಷೇತ್ರದಲ್ಲಿ ಶಾಸಕ ಸ್ಥಾನ ಖಾಲಿಯಾಯಿತು. ನಂತರ ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ, ರಾಜ್ಯದ ಉಪಮುಖ್ಯಮಂತ್ರಿಯಾಗಿ ನಿಮ್ಮ ಮನೆ ಬಾಗಿಲಿಗೆ ಬಂದು ನಿಮ್ಮ ಸಮಸ್ಯೆಗಳನ್ನು ಆಲಿಸಿದೆ. 26 ಸಾವಿರ ಜನ ನನಗೆ ಅರ್ಜಿ ತಂದು ಪಿಂಚಣಿ, ಸಾಲ ಸೌಲಭ್ಯ, ಮನೆ, ನಿವೇಷನಕ್ಕೆ ಮನವಿ ಮಾಡಿದಿರಿ. ನಾನು ಸುಮಾರು 20ಕ್ಕೂ ಹೆಚ್ಚು ಬಾರಿ ಕ್ಷೇತ್ರಕ್ಕೆ ಬಂದು ಸಭೆ ಮಾಡಿದ್ದೇನೆ” ಎಂದು ತಿಳಿಸಿದರು.

“ಮೊದಲು ಕುಮಾರಸ್ವಾಮಿ ಅವರ ಲೆಕ್ಕ ಹಾಕುವುದಾದರೆ, ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಇಕ್ಬಾಲ್ ಹುಸೇನ್ ವಿರುದ್ಧ ಕಣಕ್ಕಿಳಿಸಿದರು. ಜನ ಉಪಕಾರ ಮಾಡಿದವರನ್ನು ಸ್ಮರಿಸುತ್ತಾರೆ. ಕುಮಾರಣ್ಣ ಹಾಗೂ ಅನಿತಕ್ಕ ಅವರು ರಾಮನಗರದಲ್ಲಿ ಕೆಲಸ ಮಾಡಿದ್ದೇ ಆಗಿದ್ದರೆ, ನಿಖಿಲ್ ಅವರು ಯಾಕೆ ಸೋಲುತ್ತಿದ್ದರು? ಅವರು ಏನಾದರೂ ಸಹಾಯ ಮಾಡಿದ್ದರೆ ನಿಖಿಲ್ ಯಾಕೆ ಸೋಲುತ್ತಿದ್ದರು?” ಎಂದು ಪ್ರಶ್ನಿಸಿದರು.

“ನಾವು ಯೋಗೇಶ್ವರ್ ಅವರಿಗೆ ಕರೆದು ಟಿಕೆಟ್ ಕೊಟ್ಟಿದ್ದೇವೆ. ಕಾರಣ, ಯೋಗೇಶ್ವರ್ ಅವರು ಕಾಂಗ್ರೆಸ್ ಸರ್ಕಾರದ ಜತೆ ಸೇರಿ ಕ್ಷೇತ್ರದ ಅಭಿವೃದ್ಧಿಗೆ ಬದ್ಧವಾಗಿದ್ದಾರೆ. ನಾವು ಮನೆಗೆ ಉಚಿತ ವಿದ್ಯುತ್ ನೀಡಿದ್ದೇವೆ. ಯೋಗೇಶ್ವರ್ ಕೇರೆಗಳಿಗೆ ನೀರು ತುಂಬಿಸಿದ್ದಾರೆ. ನಾನು ಈ ಭಾಗದ ರೈತರಿಗೆ ವಿದ್ಯುತ್ ಟಿಸಿಗಳನ್ನು ಹಾಕಿಸಿದ್ದೇನೆ. ಇಂತಹ ಒಂದು ಕೆಲಸವನ್ನು ಕುಮಾರಸ್ವಾಮಿ ಮಾಡಿದ್ದಾರಾ?” ಎಂದು ತಿಳಿಸಿದರು.

ನಿಖಿಲ್ ಬಗ್ಗೆ ಮಾತನಾಡುವುದಿಲ್ಲ:
“ನಾನು ಕುಮಾರಸ್ವಾಮಿ ಅವರ ಮಗನ ಬಗ್ಗೆ ಮಾತನಾಡಲು ಹೋಗುವುದಿಲ್ಲ. ಪಾಪ ಕಂದ. ಅವರು ಇಲ್ಲಿ ನಿಲ್ಲು ಎಂದರೂ ನಿಲ್ಲುತ್ತಾನೆ, ಅಲ್ಲಿ ನಿಲ್ಲು ಎಂದರೂ ನಿಲ್ಲುತ್ತಾನೆ. ಕಣ್ಣೀರು ಹಾಕು ಎಂದರೂ ಹಾಕುತ್ತಾನೆ, ನಗು ಎಂದರೂ ನಗುತ್ತಾನೆ. ಆತನನ್ನು ನಾನು ಪ್ರಶ್ನೆ ಮಾಡುವುದಿಲ್ಲ. ಆತ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಚುನಾವಣೆಯಲ್ಲಿ ಸ್ಪರ್ಧೆ ಮಾಡಿರುವುದಾಗಿ ಹೇಳಿದ್ದಾರೆ. ಅವರು ಒತ್ತಕ್ಕೆ ಸ್ಪರ್ಧಿಸಿದ್ದಾರೆಯೇ ಹೊರತು, ಜನರ ಸೇವೆಗಾಗಿ ಅಲ್ಲ. ನಿಮ್ಮ ಕಷ್ಟ ಸುಖಕ್ಕೆ ಭಾಗಿಯಾಗಲು ನಾವು ಸಂಕಲ್ಪ ಮಾಡಿದ್ದೇವೆ” ಎಂದು ತಿಳಿಸಿದರು.

“ನನ್ನ ಪ್ರಶ್ನೆ ಇರುವುದು ಕುಮಾರಣ್ಣನಿಗೆ. ಇಲ್ಲಿ ಮತ ಕೇಳಬೇಕು ಎಂದರೆ ಧೈರ್ಯಬೇಕು. ನಾವು ನಿಮ್ಮ ಕ್ಷೇತ್ರದ ಜನರ ಋಣ ತೀರಿಸುತ್ತೇವೆ ಎಂದು ನಾನು ಎದೆ ತಟ್ಟಿಕೊಂಡು ಹೇಳಬಲ್ಲೆ. ಈಗಾಗಲೇ ಸಾವಿರಾರು ಜನರಿಗೆ ನಿವೇಶನ ಹಂಚಲು ಕಾರ್ಯಕ್ರಮ ರೂಪಿಸಲಾಗಿದೆ” ಎಂದರು.

“ಯೋಗೇಶ್ವರ್ ರೆಡಿಮೇಡ್ ಗಂಡು. ಅವರಿಗೆ ನಿಮ್ಮ ಕಷ್ಟ, ಸುಖ, ನೋವು ಗೊತ್ತಿದೆ. ನಿಮ್ಮ ಹಳ್ಳಿಗಳು ಗೊತ್ತಿದೆ. ಅವರಿಗೆ ಬೆಂಬಲವಾಗಿ ಸರ್ಕಾರವಿದೆ. ಅವರ ಬೆನ್ನಿಗೆ ಈ ಡಿ.ಕೆ. ಶಿವಕುಮಾರ್ ಇದ್ದಾನೆ. ನಾನು ಎಂದಾದರೂ ಕೊಟ್ಟ ಮಾತು ತಪ್ಪಿದ್ದೀನಾ?

ನನಗೆ ಮಹಿಳೆಯರ ಮೇಲೆ ವಿಶೇಷ ನಂಬಿಕೆ ಇದೆ. ನಮ್ಮ ಎಲ್ಲ ಕಾರ್ಯಕ್ರಮಗಳು ಮಹಿಳೆಯರ ಮೇಲೆ ಕೇಂದ್ರೀಕೃತವಾಗಿದೆ. ಇಲ್ಲಿರುವ ಪ್ರತಿ ಮಹಿಳೆಯರು ತಮ್ಮ ಕುಟುಂಬದ ನಾಲ್ಕು ಮತಗಳನ್ನು ಕಾಂಗ್ರೆಸ್ ಹಾಕಿಸಬೇಕು. ಎದುರಾಳಿ ಪಕ್ಷದವರು ಏನನ್ನೇ ಸುರಿಸಲಿ, ಯಾವುದೇ ಬಣ್ಣ ಹಾಕಿಕೊಳ್ಳಲಿ, ಯಾವುದೇ ನಾಟಕವಾಡಲಿ. ನಮಗೆ ನಿಮ್ಮ ಮೇಲೆ ನಂಬಿಕೆ ಇದೆ. ಚನ್ನಪಟ್ಟಣದಲ್ಲಿ ಅಭಿವೃದ್ಧಿ ಪರ್ವ ಮಾಡಿಯೇ ಮಾಡುತ್ತೇವೆ. ಯೋಗೇಶ್ವರ್ ಅವರನ್ನು ವಿಧಾನಸೌಧಕ್ಕೆ ಕಳುಹಿಸಿ ನಿಮ್ಮ ಸೇವೆಗೆ ನಮ್ಮನ್ನು ಉಪಯೋಗಿಸಿಕೊಳ್ಳಿ.

ಬೇರೆ ಪಕ್ಷದ ಕಾರ್ಯಕರ್ತರು ದಳದಲ್ಲಿ ಸಮಯ ವ್ಯರ್ಥ ಮಾಡಿಕೊಳ್ಳಬೇಡಿ. ಕುಮಾರಣ್ಣ ದಳವನ್ನು ಕೈಬಿಟ್ಟಾಯ್ತು. ಹೀಗಾಗಿ ಆ ಪಕ್ಷದ ಕಾರ್ಯಕರ್ತರು ನಮ್ಮ ಜತೆ ಕೈಜೋಡಿಸಿ” ಎಂದರು.

ಕಷ್ಟಕಾಲದಲ್ಲಿ ಗೆಲ್ಲಿಸಿದ ಜನರಿಗೆ ಧನ್ಯವಾದಗಳು:

ವಿರೂಪಾಕ್ಷಿಪುರ ಹೊಬಳಿಯ ಮಹಾಜನತೆ ನನ್ನನ್ನು ಕಷ್ಟ ಕಾಲದಲ್ಲಿ ಗೆಲ್ಲಿಸಿ ಆಶೀರ್ವಾದ ಮಾಡಿ ಇಷ್ಟು ದೊಡ್ಡ ಮರವಾಗಿ ಬೆಳೆಸಿದ್ದೀರಿ. ನಿಮಗೆ ಒಂದು ಕೋಟಿ ನಮನಗಳು. ಕಾಂಗ್ರೆಸ್ ಪಕ್ಷ ನನಗೆ ಟಿಕೆಟ್ ನೀಡದಿದ್ದಾಗ ನನ್ನ ಬೆನ್ನಿಗೆ ನಿಂತ ಅಣ್ಣಯ್ಯಪ್ಪ, ಸಂಜೀವಯ್ಯ ಹಾಗೂ ಅವರ ಪುತ್ರ ಮಹದೇವಪ್ಪ, ಶಿವಪ್ಪ, ಚಿಕ್ಕರಾಜು, ಪದ್ಮರಾಯ ಅವರನ್ನು ಈ ಸಂದರ್ಭದಲ್ಲಿ ಸ್ಮರಿಸುತ್ತೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಶಿಷ್ಯ ಇಂದು ಇಷ್ಟು ಎತ್ತರಕ್ಕೆ ಬೆಳೆದಿದ್ದಾನೆ.

ಕಷ್ಟ ಕಾಲದಲ್ಲಿ ನೀವು ನನ್ನ ಜತೆ ನಿಂತಿದ್ದೀರಿ. ನಾನು 1985ರಲ್ಲಿ ದೇವೇಗೌಡರ ವಿರುದ್ಧ ಸೋತಿದ್ದೆ. ನಂತರ ಸತತವಾಗಿ ನಾಲ್ಕು ಬಾರಿ ನನನ್ನು ಗೆಲ್ಲಿಸಿದಿರಿ. ಕ್ಷೇತ್ರ ಪುನರ್ ವಿಂಗಡಣೆ ಬಳಿಕ ಸಾತನೂರು ಕ್ಷೇತ್ರ ಕನಕಪುರ ಕ್ಷೇತ್ರವಾಯಿತು. ಈ ವಿರೂಪಾಕ್ಷಪುರ ಹೊಬಳಿ ಚನ್ನಪಟ್ಟಣ ಕ್ಷೇತ್ರಕ್ಕೆ ಸೇರಿತು. ಆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ಯೋಗೇಶ್ವರ್ ಅವರಿಗೆ ಹೆಚ್ಚು ಮತ ನೀಡಿ ಗೆಲ್ಲಿಸಿದ್ದೀರಿ.

ಮನುಷ್ಯನಿಗೆ ನಂಬಿಕೆ ಮುಖ್ಯ. ನಿಮ್ಮ ಮೇಲೆ ವಿಶ್ವಾಸವಿಟ್ಟು ನಾವು ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇವೆ. ಯೋಗೇಶ್ವರ್ ಅವರನ್ನು ನಮ್ಮ ಪಕ್ಷದ ಅಭ್ಯರ್ಥಿಯನ್ನಾಗಿ ಮಾಡಿದ್ದೇವೆ. ನಾವು ಇಲ್ಲಿಗೆ ಬರುವಾಗ ಬಿ.ವಿ ಹಳ್ಳಿ ಕೆರೆ ತೋರಿಸಿ, ನೀರು ತುಂಬಿಸಲು ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ನಾನು ಆಡಳಿತ ಪಕ್ಷದಲ್ಲಿದ್ದು, ನನ್ನ ಮೇಲೆ ಹಾಗೂ ಯೋಗೇಶ್ವರ್ ಅವರ ಮೇಲೆ ಜವಾಬ್ದಾರಿ ಇದೆ. ನಿಮ್ಮ ಬದುಕಿನಲ್ಲಿ ಬದಲಾವಣೆ ತರುವ ಸಂಕಲ್ಪ ಮಾಡಿ ನಾವು ನಿಮ್ಮ ಮುಂದೆ ಬಂದಿದ್ದೇವೆ. ನಾನು ಈ ಭಾಗದ ಶಾಸಕನಾಗಿದ್ದಾಗ ಪ್ರತಿ ವರ್ಷ ಅಧಿಕಾರಿಗಳನ್ನು ಕರೆದುಕೊಂಡು ನಿಮ್ಮ ಊರಿಗೆ ಬರುತ್ತಿದ್ದೆ. ಇಂತಹ ಕೆಲಸವನ್ನು ಕುಮಾರಸ್ವಾಮಿ ಎಂದಾದರೂ ಮಾಡಿದ್ದಾರಾ? ಇಲ್ಲಿ ಕೇವಲ ಯೋಗೇಶ್ವರ್ ಮಾತ್ರ ಅಭ್ಯರ್ಥಿಯಲ್ಲ. ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರೂ ಅಭ್ಯರ್ಥಿಯೇ.

ನಮ್ಮ ಸರ್ಕಾರ ಮಡಕೆಯಲ್ಲ:

ನಮ್ಮ ಸರ್ಕಾರ ಮುಂದಿನ ಮೂರುವರೆ ವರ್ಷ ಮಾತ್ರವಲ್ಲ. ಆನಂತರದ ಐದು ವರ್ಷಗಳ ಅವಧಿಗೂ ನಮ್ಮ ಸರ್ಕಾರ ಆಡಳಿತ ನಡೆಸಲಿದೆ. ಬಿಸಾಕಿದ ತಕ್ಷಣ ಒಡೆಯಲು ನಮ್ಮ ಸರ್ಕಾರ ಮಡಕೆಯಲ್ಲ. ಕನಕಪುರದ ಜನ ಹೇಗೆ ನನನ್ನು 1.23 ಲಕ್ಷ ಮತಗಳ ಅಂತರದಲ್ಲಿ ಗೆಲ್ಲಿಸಿದರೋ ಅದೇ ರೀತಿ ಯೋಗೇಶ್ವರ್ ಅವರನ್ನು ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲಿಸಿಕೊಳ್ಳಬೇಕು.

ನೀವು ಇಲ್ಲಿ ಮತ ಹಾಕುವಾಗ ಬರುವ ಶಬ್ಧ ದೆಹಲಿಯಲ್ಲಿ ಕುಮಾರಸ್ವಾಮಿಗೆ ಕೇಳಿಸಬೇಕು. ನಾನು ಇಲ್ಲಿ ಉದ್ಯೋಗ ಮೇಳ ಮಾಡಿದ ನಂತರ ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಉದ್ಯೋಗ ಮೇಳ ಮಾಡಿದ್ದಾರೆ. ಮಿಸ್ಟರ್ ಕುಮಾರಸ್ವಾಮಿ ಅದೇ ಕೆಲಸವನ್ನು ಚನ್ನಪಟ್ಟಣದಲ್ಲಿ ಯಾಕೆ ಮಾಡಲಿಲ್ಲ? ಇಲ್ಲಿನ ಯುವಕರಿಗೆ ಉದ್ಯೋಗ ಕೊಡಿಸಬಹುದಿತ್ತಲ್ಲವೇ? ಈ ಜನರಿಗೆ ಸಹಾಯ ಮಾಡುವ ಮನೋಭಾವ ನಿಮಗಿಲ್ಲ. ಇಲ್ಲಿ ಜಾಗ ಖಾಲಿ ಮಾಡಿ ಯೋಗೇಶ್ವರ್ ಅವರಿಗೆ ತಬ್ಬಿಕೊಂಡೇ ಮೋಸ ಮಾಡಲು ಪ್ರಯತ್ನಿಸಿದೆ. ಅದು ಯೋಗೇಶ್ವರ್ ಅವರಿಗೆ ಅರ್ಥವಾಗಿ ಜನರಿಗೆ ಸಹಾಯ ಮಾಡಬೇಕಾದರೆ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು ಅರಿತು ಕಾಂಗ್ರೆಸ್ ಸೇರಿದ್ದಾರೆ.

Tags: BJPCongress PartyCP YogeshwardevegowdaDK Shivakumardk sureshNikhil Kumarswamyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಿಗ್ ಬಾಸ್ ಮನೆಯಲ್ಲಿ ಕಿಚ್ಚು ಹಚ್ಚಿದ ಪಗಡೆ ಆಟ –  ಅನುಷಾ – ಚೈತ್ರಾ ನಡುವೆ ಟಾಕ್ ವಾರ್.!

Next Post

ಮುಡಾ ಹಗರಣ, ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತರ ನೋಟಿಸ್‌..

Related Posts

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
0

ಅಂದು ಮೈಸೂರಿನ ಮೂಡಾ ( MUDA ) ಭೂ ಹಗರಣಕ್ಕೆ ಸಿದ್ದರಾಮಯ್ಯ ಗೆ ಸಂಕಷ್ಟ ತಂದಿದ್ದ ಸ್ನೇಹಮಹಿ ಕೃಷ್ಣ ಇದೀಗ ಧರ್ಮಸ್ಥಳ ಗ್ರಾಮದ ಪ್ರಕರಣಕ್ಕೆ ಮತ್ತೆ ಎಂಟ್ರಿ...

Read moreDetails

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

August 21, 2025
Next Post
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತರ ನೋಟಿಸ್‌..

ಮುಡಾ ಹಗರಣ, ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತರ ನೋಟಿಸ್‌..

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ
Top Story

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada