ಮಂಡ್ಯ: ಯೋಗಿ ಆದಿತ್ಯನಾಥ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಇಬ್ರಾಹಿಂ ಈ ಬಗ್ಗೆ ಕ್ಷಮೆಯಾಚಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಒತ್ತಾಯಿಸಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಹಿಂದೂಪರ ಸಂಘಟನೆ ಪ್ರತಿಭಟನೆ ಮಾಡಲಾಗಿದ್ದು, ಯೋಗಿ ಆದಿತ್ಯನಾಥ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇಬ್ರಾಹಿಂ ಅವರ ಈ ವರ್ತನೆ ಹಿಂದೂ ವಿರೋಧಿಯಾಗಿದ್ದು, ಹೆಣ್ಣು ಮಕ್ಕಳ ಮೇಲೆ ಅಗೌರವ ತೋರಿದ್ದಾರೆ. ಹೀಗಾಗಿ ಸಿಎಂ ಇಬ್ರಾಹಿಂ ಅವರ ಹೇಳಿಕೆಯನ್ನ ಖಂಡಿಸುತ್ತೇನೆ. ಅಲ್ಲದೇ ಕುಮಾರಸ್ವಾಮಿ ಅವರು ಸಹ ಈ ವಿಚಾರದಲ್ಲಿ ಮೌನವಹಿಸಿದ್ದಾರೆ.
ಕಾಂಗ್ರೆಸ್ ಬಸ್ ಯಾತ್ರೆ ಆರಂಭ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಅವರು ಎಲ್ಲಾ ರೀತಿಯ ಯಾತ್ರೆ ಮಾಡುತ್ತಿದ್ದು, ಚುನಾವಣೆ ಹತ್ತಿರ ಬರುತ್ತಿರುವುದರಿಂದ ಇದನ್ನೆಲ್ಲಾ ಮಾಡುತ್ತಿದ್ದಾರೆ. ಆದರೆ ಭಾರತ್ ಜೋಡೋ ಯಾತ್ರೆ ಬಳಿಕ ಬಸ್ ಯಾತ್ರೆ ಬೇಕಿತ್ತಾ? ಎಂದು ಪ್ರಶ್ನಿಸಿದ ಅವರು, ಎರಡೂ ಬಸ್ ಬಿಟ್ಟಿದ್ದು, ಶಿವಕುಮಾರ್ ಒಂದು ಬಸ್, ಸಿದ್ದರಾಮಯ್ಯದು ಒಂದು ಬಸ್‌ನಲ್ಲಿ ಪ್ರಯಾಣ ಮಾಡುತ್ತಾರೆ.
ಆದರೆ ಈ ಬಸ್ ಯಾವಾಗ ಎಲ್ಲಿ ಪಂಚರಾಗುತ್ತೇ ಎಂದು ನೋಡೋಣ. ಬಸ್ ಯಾತ್ರೆಯಲ್ಲಿ ಈಗ ಜೊತೆಯಲ್ಲಿ ಹೋಗುವ ಇಬ್ಬರು ನಂತರ ಇಬ್ಭಾಗವಾಗಲಿದ್ದು, ಇಬ್ಬರ ಕಿತ್ತಾಟ ಯಾವ ದಿಕ್ಕಿಗೆ ಸೇರುತ್ತೆ ನೋಡಬೇಕು ಎಂದ ಅವರು, ಸ್ಯಾಂಟ್ರೋ ರವಿ ವಿಚಾರದಲ್ಲಿ ಅವರು, ಯಾರೆಂದು ನನಗೆ ಗೊತ್ತಿಲ್ಲ ಎಂದರು.