• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

ಕುಮಾರಸ್ವಾಮಿಗೆ ಅನಾರೋಗ್ಯ.. ಏನಾಗಿದೆ..?

ಕೃಷ್ಣ ಮಣಿ by ಕೃಷ್ಣ ಮಣಿ
August 31, 2023
in ಅಂಕಣ, ಅಭಿಮತ
0
ಜೆಡಿಎಸ್ ಆತ್ಮಾವಲೋಕನ ಸಭೆ: ಪಕ್ಷದ ಸಂಘಟನೆ ಬಲಪಡಿಸಲು ಹೆಚ್.ಡಿ.ಕುಮಾರಸ್ವಾಮಿ ಸಂಕಲ್ಪ
Share on WhatsAppShare on FacebookShare on Telegram

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಬನ್ನೇರುಘಟ್ಟ ರಸ್ತೆಯ ಸಾಗರ್​ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಚಿಕಿತ್ಸೆ ನೀಡಲಾಗ್ತಿದೆ. ಅಪೋಲೋ ಆಸ್ಪತ್ರೆ ವೈದ್ಯರು ಬಿಡುಗಡೆ ಮಾಡಿರುವ ಹೆಲ್ತ್​​ ಬುಲೆಟಿನ್​ ಪ್ರಕಾರ, ಮಂಗಳವಾರ ಮಧ್ಯರಾತ್ರಿ 3 ಗಂಟೆ ಸುಮಾರಿಗೆ ಆಸ್ಪತ್ರೆಗೆ ಬಂದಿದ್ದಾರೆ. ಚಿಕಿತ್ಸೆ ಮುಂದುವರಿಸಲಾಗಿದೆ. ಕುಮಾರಸ್ವಾಮಿ ಅವರ ಆರೋಗ್ಯಕ್ಕೆ ಯಾವುದೇ ಸಮಸ್ಯೆಯಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿಗೆ ತಡರಾತ್ರಿ ಸುಸ್ತು ಮತ್ತು ವೀಕ್ನೆಸ್ ಎಮದು ಆಸ್ಪತ್ರೆ ದಾಖಲು ಆಗಿದ್ದಾರೆ ಎನ್ನಲಾಗಿತ್ತು.

ADVERTISEMENT
ಎಚ್‌.ಡಿ.ಕುಮಾರಸ್ವಾಮಿ
ಎಚ್‌.ಡಿ.ಕುಮಾರಸ್ವಾಮಿ

ಮಾಜಿ ಸಿಎಂ ಕುಮಾರಸ್ವಾಮಿ ಆಗಿದ್ದು ಮೈಂಡ್​ಗೆ ಸ್ಟ್ರೋಕ್​..!

ಅಪೋಲೋ ಆಸ್ಪತ್ರೆ ವೈದ್ಯ ಡಾ. ಸತೀಶ್ ಚಂದ್ರ ಮಾಹಿತಿ ನೀಡಿದ್ದು, ಕುಮಾರಸ್ವಾಮಿ ಅವರ ಎಡಭಾಗದಲ್ಲಿ ರಕ್ತನಾಳ ಸಮಸ್ಯೆಯಾಗಿತ್ತು. ಎಡಭಾಗದಲ್ಲಿ ಮೈಲ್ಡ್ ಸ್ಟ್ರೋಕ್ ಆಗಿತ್ತು. ಮಾತು ತೊದಲುತ್ತಿತ್ತು, ತುಂಬಾ ಸುಸ್ತಾಗಿದ್ರು. ಆಡ್ಮಿಟ್ ಆದ ಬಳಿಕ ಒಂದು ಗಂಟೆಯಲ್ಲೇ ಆರೋಗ್ಯ ಸ್ತಿರವಾಗಿದ್ದಾರೆ. ಇನ್ನೂ‌ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಗುರುವಾರ ಜನರಲ್‌ ವಾರ್ಡ್​ಗೆ ಶಿಫ್ಟ್ ಮಾಡ್ತೀವಿ. ಇನ್ನೂ ಎರಡ್ಮೂರು ದಿನ ಆಸ್ಪತ್ರೆಯಲ್ಲಿ ಇರಬೇಕಾಗುತ್ತೆ. ಗುರುವಾರ ಬೆಳಗ್ಗೆ ಮತ್ತೊಂದು ಹೇಲ್ತ್ ಬುಲೆಟಿನ್ ಬಿಡುಗಡೆ ಮಾಡುತ್ತೇವೆ. ಮಾಜಿ ಸಿಎಂ ಕುಮಾರಸ್ವಾಮಿ ಎಲ್ಲರ ಜೊತೆ ಮಾತನಾಡುತ್ತಿದ್ದಾರೆ. ಆರೋಗ್ಯವಾಗಿದ್ದಾರೆ ಯಾವುದೇ ತೊಂದರೆ ಇಲ್ಲ ಎಂದಿದ್ದಾರೆ.

ಎಚ್‌.ಡಿ.ಕುಮಾರಸ್ವಾಮಿ

ಸೀರಿಯಸ್​ ಅನ್ನೋ ವದಂತಿ.. ಕಷ್ಟ ಕಷ್ಟ ಅಂತಾ ಗುಸುಗುಸು..!

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಮೈಂಡ್​ಗೆ ಸ್ಟ್ರೋಕ್​ ಆಗಿದ್ದು, ತುಂಬಾ ಸೀರಿಯಸ್​ ಆಗಿದ್ದಾರೆ. ಕಷ್ಟ ಎಂದು ವೈದ್ಯರು ಹೇಳಿದ್ದಾರೆ ಅನ್ನೋ ಸುದ್ದಿ ಹರಿದಾಡ್ತಿದೆ. ಆದರೆ ವೈದ್ಯರು ಮಾತ್ರ ಸ್ಟ್ರೋಕ್​ ಆದ 3 ಗಂಟೆಯೊಳಗೆ ಉತ್ತಮ ವ್ಯವಸ್ಥೆ ಇರುವ ಆಸ್ಪತ್ರೆಗೆ ದಾಖಲು ಮಾಡಿದರೆ ಸ್ಟ್ರೋಕ್ ಸಮಸ್ಯೆ ಸರಿ ಮಾಡಲು ಸಾಧ್ಯವಿದೆ. ಕುಮಾರಸ್ವಾಮಿ ಅವರಿಗೆ ಸ್ಟ್ರೋಕ್​ ಆಗಿದ್ದು ಸತ್ಯ. ಆದರೆ ಕೂಡಲೇ ಆಸ್ಪತ್ರೆಗೆ ಬಂದಿದ್ರಿಂದ ಯಾವುದೇ ಸಮಸ್ಯೆ ಇಲ್ಲ, ಸಮಸ್ಯೆಗೆ ಚಿಕಿತ್ಸೆ ಕೊಟ್ಟಿದ್ದು ಚೇತರಿಸಿಕೊಳ್ತಿದ್ದಾರೆ ಎಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅನಾರೋಗ್ಯದ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದು, ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ. ಮಂಜುನಾಥ್​ ಜೊತೆಗೆ ಮಾತನಾಡಿದ್ದಾರೆ. ಬಿ.ಎಸ್​ ಯಡಿಯೂರಪ್ಪ ಕೂಡ ಅಪೋಲೋ ಆಸ್ಪತ್ರೆ ವೈದ್ಯರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಕುಮಾರಣ್ಣ ಆರೋಗ್ಯವಾಗಿದ್ದಾರೆ ಸುಳ್ಳು ಸುದ್ದಿ ಹರಡಿಸಬೇಡಿ..!

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅನಾರೋಗ್ಯದ ಬಗ್ಗೆ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಕುಮಾರಸ್ವಾಮಿಯವ್ರು ಆರಾಮಾಗಿದ್ದಾರೆ. ಊಹಾಪೋಹದ ಸುದ್ದಿಗಳನ್ನ ಹರಡಬೇಡಿ. ರಾಜ್ಯದ ಜನತೆ ಗಾಬರಿಯಾಗುವುದು ಬೇಡ. ಯಾರೂ ಸಹ ಆತಂಕಪಡೋದು ಬೇಡ ಎಂದಿದ್ದಾರೆ. ಕುಮಾರಸ್ವಾಮಿ ಸಹೋದರ ರಮೇಶ್ ಹಾಗು ಸಂಸದ ಪ್ರಜ್ವಲ್​ ರೇವಣ್ಣ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿದ್ದಾರೆ. ಆ ಬಳಿಕ ಮಾತನಾಡಿ ಪ್ರಜ್ವಲ್​ ರೇವಣ್ಣ, ಆರಾಮಾಗಿದ್ದಾರೆ, ಸ್ವಲ್ಪ ಜ್ವರ ಇತ್ತು. ನಾಳೆ ಬರ್ತೀನ್ ಬಿಡೋ, ಡಿಸ್ಚಾರ್ಜ್ ಆಗ್ತೀನಿ ಅಂದಿದ್ದಾರೆ. ಆರೋಗ್ಯವಾಗಿದ್ದಾರೆ. ಊಹಾಪೋಹಗಳಿಗೆ ತಲೆಕೆಡಿಕೊಳ್ಳಬೇಡಿ. ನಾನು ಹೋದಾಗ ಊಟ ಮಾಡ್ತಿದ್ರು. ವೈದ್ಯರ ಬಳಿಯೂ ಮಾತಾಡಿದೆ, ಆರೋಗ್ಯ ಚೆನ್ನಾಗಿದೆ ಎಂದಿದ್ದಾರೆ.

ಎಡಪಾರ್ಶ್ವಕ್ಕೆ ಸ್ಟ್ರೋಕ್​ ಆಗಿದ್ದು, ಬಾಯಿಗೆ ಹಾನಿ..!

ಆಸ್ಪತ್ರೆಯ ಮೂಲಗಳ ಪ್ರಕಾರ ಎಡಭಾಗಕ್ಕೆ ಪಾರ್ಶ್ವವಾಯು ಆಗಿದ್ದು, ಬಾಯಿ ಸಣ್ಣ ಪ್ರಮಾಣದಲ್ಲಿ ಹಾನಿಯಾಗಿತ್ತು ಎನ್ನಲಾಗಿದೆ. ಶೀಘ್ರವೇ ಚಿಕಿತ್ಸೆ ನೀಡಿರೋದ್ರಿಂದ ದೊಡ್ಡ ಪ್ರಮಾಣದ ಹಾನಿಯನ್ನು ತಡೆಯಲಾಗಿದ್ದು, ಒಂದೆರಡು ದಿನದಲ್ಲಿ ಬಾಯಿ ಸರಿಯಾಗಲಿದ್ದು, ಆ ನಂತರವಷ್ಟೇ ಮಾಧ್ಯಮಗಳ ಎದುರು ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಆದರೆ ಕುಮಾರಸ್ವಾಮಿ ಅವರಿಗೆ ಆರೋಗ್ಯದಲ್ಲಿ ಏರುಪೇರು ಆಗುತ್ತಿದ್ದ ಕೂಡಲೇ ಕ್ಷಣಮಾತ್ರವೂ ತಡ ಮಾಡದೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ರಿಂದ ಯಾವುದೇ ಸಮಸ್ಯೆ ಇಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಕೃಷ್ಣಮಣಿ

Tags: anitha kumaraswamyHD KumaraswamyJDSKarnatakaNikhil Kumaraswamy
Previous Post

ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ ಖುಷಿ ಸಿನಿಮಾ ಎಂಟ್ರಿಗೆ ದಿನಗಣನೆ..!

Next Post

ಚಂದ್ರನ ಮೇಲೆ ವಾಸ ಮಾಡಲು ಸಾಧ್ಯವಿದೆಯೆ?, ಖನಿಜ ಸಂಪತ್ತಿನ ಆಗರ ಚಂದ್ರಲೋಕ..

Related Posts

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !
ಅಂಕಣ

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

by ಪ್ರತಿಧ್ವನಿ
February 14, 2026
0

ವಿಶೇಷ ಲೇಖನ : ಸನತ್‌ ರೈ, ಪತ್ರಕರ್ತರು.. ಬೆಂಗಳೂರು :  ಆತ್ಮೀಯ ಕ್ರಿಕೆಟ್ ಅಭಿಮಾನಿಗಳೇ.., ಐಸಿಸಿ ಬಂಡವಾಳ ಹೂಡಿರುವ, ಬಿಸಿಸಿಐ ನಿರ್ದೇಶನದ, ಪಿಸಿಬಿ ಚಿತ್ರಕಥೆ ಬರೆದಿರುವ, ಶ್ರೀಲಂಕಾ...

Read moreDetails
ಹಿರಿ ಜೀವದ ನರೇಗಾ ಯಶೋಗಾಥೆ : ನೆಮ್ಮದಿಯ ಬದುಕಿಗೆ “ಖಾತ್ರಿ”ಯಿದ್ದ ಉದ್ಯೋಗಕ್ಕೆ ಬೀಳದಿರಲಿ ಕತ್ತರಿ..!

ಹಿರಿ ಜೀವದ ನರೇಗಾ ಯಶೋಗಾಥೆ : ನೆಮ್ಮದಿಯ ಬದುಕಿಗೆ “ಖಾತ್ರಿ”ಯಿದ್ದ ಉದ್ಯೋಗಕ್ಕೆ ಬೀಳದಿರಲಿ ಕತ್ತರಿ..!

February 13, 2026

ನಿರ್ಮಲಾ ಸೀತಾರಾಮನ್‌ರನ್ನು ಭೇಟಿಯಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು…!!

February 12, 2026
ಅಂತರರಾಷ್ಟ್ರೀಯ ಕಾಫಿ ಉತ್ಸವ ಉದ್ಘಾಟಿಸಿದ ಸಚಿವ ಎಂಬಿ ಪಾಟೀಲ

ಅಂತರರಾಷ್ಟ್ರೀಯ ಕಾಫಿ ಉತ್ಸವ ಉದ್ಘಾಟಿಸಿದ ಸಚಿವ ಎಂಬಿ ಪಾಟೀಲ

February 12, 2026
ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

February 7, 2026
Next Post
ಚಂದ್ರಯಾನ 3

ಚಂದ್ರನ ಮೇಲೆ ವಾಸ ಮಾಡಲು ಸಾಧ್ಯವಿದೆಯೆ?, ಖನಿಜ ಸಂಪತ್ತಿನ ಆಗರ ಚಂದ್ರಲೋಕ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada