ಸಿದ್ದರಾಮಯ್ಯರನ್ನು ರಾಜಕೀಯವಾಗಿ ಮುಗಿಸಲು ಕುಮಾರಸ್ವಾಮಿ ಪ್ರಯತ್ನಿಸುತ್ತಿದ್ದಾರೆ. ಅದು ಎಂದಿಗೂ ಸಾಧ್ಯವಿಲ್ಲ. ಸಿದ್ದರಾಮಯ್ಯ ಅಲ್ಪಸಂಖ್ಯಾತರೊಂದಿಗೆ ಎಂದಿಗೂ ಸ್ಪಂದಿಸುವವರು ಎಂದು ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಕಿಡಿ ಕಾರಿದ್ದಾರೆ.
ಸಿದ್ದರಾಮಯ್ಯ ಜೆಡಿಎಸ್ ಪಕ್ಷದಲ್ಲಿ ಇದ್ದಾಗಲೂ ಕುಮಾರಸ್ವಾಮಿಯವರು ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. ಸಿದ್ದರಾಮಯ್ಯ ಯಾರನ್ನೂ ರಾಜಕೀಯವಾಗಿ ಮುಗಿಸಲ್ಲ. ಆದರೆ ಕುಮಾರಸ್ವಾಮಿ ಹಾಗಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ನನಗೆ ಹಜ್ ಖಾತೆ ಸಿಕ್ಕಿತ್ತು. ನಾನು ಕಾಂಗ್ರೆಸ್ಗೆ ಬಂದ ತಕ್ಷಣ ಸಿದ್ದರಾಮಯ್ಯ ಸರಕಾರ ಆಹಾರ ಖಾತೆ ಕೊಟ್ಟಿತು ಎಂದು ಹೇಳಿದ್ದಾರೆ.

ಇಕ್ಬಾಲ್ ಸರಡಗಿ ಅವರನ್ನು ಸೋಲಿಸಿದ್ದು ಕುಮಾರಸ್ವಾಮಿ . ವಿಧಾನಪರಿಷತ್ ಚುನಾವಣೆಯಲ್ಲಿ ಭೈರತಿ ಸುರೇಶ್ ಪಕ್ಷೇತರ ಅಭ್ಯರ್ಥಿಯಾಗಿದ್ದರು. ಜೆಡಿಎಸ್ ಪಕ್ಷದಲ್ಲಿ ಆಗ ಏಳೆಂಟು ಹೆಚ್ಚುವರಿ ಮತಗಳಿದ್ದವು. ಅದನ್ನು ಭೈರತಿ ಸುರೇಶ್ ಅವರಿಗೆ ಮಾರಾಟ ಮಾಡಿದ್ದು ಯಾರೆಂದು ನೆನಪಿದೆಯಾ? ಎಂದು ನೇರ ಪ್ರಶ್ನೆ ಹಾಕಿದ್ದಾರೆ.
ನನ್ನ ರಾಜಕೀಯ ಗುರುಗಳು ಇಬ್ಬರೇ. ಒಂದು ಸಿದ್ದರಾಮಯ್ಯ. ಇನ್ನೊಂದು ದೇವೇಗೌಡ್ರು. ಹೆಚ್ ಡಿ ದೇವೇಗೌಡ ನಿಜವಾದ ಜಾತ್ಯತೀತ ನಾಯಕ. ಅವರ ಎತ್ತರದಲ್ಲಿ ಎಚ್ಡಿಕೆ ಒಂದು ಪರ್ಸೆಂಟ್ ಸಹ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ






