• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕುಮಾರಸ್ವಾಮಿ_ಜಮೀರ್ ಸಂಬಂಧ ಗಳಸ್ಯ-ಕಂಠಸ್ಯ, ಅವರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ:ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
November 12, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು:”ಕುಮಾರಸ್ವಾಮಿ-ಜಮೀರ್ ಅವರ ಸಂಬಂಧ ಗಳಸ್ಯ-ಕಂಠಸ್ಯ ರೀತಿಯದು. ಅವರ ನಡುವಣ ಮಾತುಕತೆ ಅವರ ವೈಯಕ್ತಿಕ ವಿಚಾರ. ಅದರಲ್ಲಿ ಬಿಜೆಪಿ ರಾಜಕೀಯ ಮಾಡಲು ಹೊರಟಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ADVERTISEMENT

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

ಕುಮಾರಸ್ವಾಮಿ ದೂರು ನೀಡಲಿ:

ಉಪಚುನಾವಣೆ ಪ್ರಚಾರದ ವೇಳೆ ಕುಮಾರಸ್ವಾಮಿ ಅವರ ಬಗ್ಗೆ ಜಮೀರ್ ಅವರು ಜನಾಂಗೀಯ ನಿಂದನೆ ಮಾಡಿದ್ದಾರೆ ಎಂದು ಕೇಳಿದಾಗ, “ಅವರಿಬ್ಬರ ನಡುವೆ ಹಳೆಯ ಸ್ನೇಹ ಇದೆ. ಜಮೀರ್ ಅವರು ಕುಮಾರಸ್ವಾಮಿ ಯಾವ ಚಡ್ಡಿ ಹಾಕಿದ್ದಾರೆ ನೋಡಿದ್ದೇನೆ ಎನ್ನುತ್ತಾರೆ. ಕುಮಾರಸ್ವಾಮಿ ಕೂಡ ಜಮೀರ್ ಅವರ ಬಗ್ಗೆ ನನಗೆ ಗೊತ್ತು ಎನ್ನುತ್ತಾರೆ. ಜಮೀರ್ ಹೇಳಿಕೆ ಬಗ್ಗೆ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರಾ? ಅವರ ನಡುವೆ ಸ್ನೇಹದಲ್ಲಿ ಹಿಂದೆಂದೂ ಇಂತಹ ಮಾತು ಬಂದಿಲ್ಲವಾದರೆ ಕುಮಾರಸ್ವಾಮಿ ಅವರು ಜಮೀರ್ ವಿರುದ್ಧ ಜನಾಂಗೀಯ ನಿಂದನೆ ದೂರು ನೀಡಲಿ” ಎಂದರು.

ವೈಯಕ್ತಿಕ ವಿಚಾರದಲ್ಲಿ ಹಸ್ತಕ್ಷೇಪ ಬೇಡ:

ಜಮೀರ್ ಹೇಳಿಕೆ ಸಮರ್ಥನೆ ಮಾಡಿಕೊಳ್ಳುತ್ತೀರಾ ಎಂದು ಕೇಳಿದಾಗ, “ನಾವು ಸಮರ್ಥಿಸಿಕೊಳ್ಳುತ್ತಿಲ್ಲ. ಅವರಿಬ್ಬರ ನಡುವಣ ವೈಯಕ್ತಿಕ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡುವುದು ಬೇಡ. ಬಿಜೆಪಿಯವರು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದು, ಇದ್ಯಾವುದೂ ಲೆಕ್ಕಕ್ಕೆ ಬರುವುದಿಲ್ಲ. ಇವರು ಅವರಿಗೆ ಡ್ರೈವರ್ ಆಗಿದ್ದರೋ, ಡ್ರೈವರ್ ಓನರ್ ಕೆಲಸ ಮಾಡಿದ್ದರೋ ಅವರಿಬ್ಬರಿಗೆ ಗೊತ್ತು. ನನಗೆ ಆತ್ಮೀಯರಾಗಿರುವ ಅಲ್ಪಸಂಖ್ಯಾತ ಸಮುದಾಯದವರನ್ನು ಸಾಬ್ರೆ ಎಂದು ಕರೆಯುತ್ತೇವೆ. ಕೆಲವರನ್ನು ಗೌಡ ಎಂದು ಕರೆಯುತ್ತೇವೆ. ಇದು ಪ್ರೀತಿ ವಿಶ್ವಾಸದಲ್ಲಿ ನಡೆಯುವ ಸಂಭಾಷಣೆ. ಕುಮಾರಸ್ವಾಮಿ ಮೇಲೆ ಜಮೀರ್ ಗೆ ಪ್ರೀತಿ. ಕುಮಾರಸ್ವಾಮಿ ಕೂಡ ಪ್ರೀತಿಯಿಂದ ಇವರನ್ನು ಕುಳ್ಳ ಎಂದು ಕರೆಯುತ್ತಾರಂತೆ.ಇದರಲ್ಲಿ ರಾಜಕಾರಣ ಬೇಕೇ” ಎಂದು ತಿಳಿಸಿದರು.

ಗುತ್ತಿಗೆಯಲ್ಲಿ ಮೀಸಲಾತಿ ಪ್ರಸ್ತಾವನೆ ಇಲ್ಲ:

ಚನ್ನಪಟ್ಟಣ ಉಪಚುನಾವಣೆಯಲ್ಲಿ ಇದರ ಪರಿಣಾಮ ಬೀರುವುದಿಲ್ಲವೇ ಎಂದು ಕೇಳಿದಾಗ, “ಚನ್ನಪಟ್ಟಣ ಹಾಗೂ ಬೇರೆ ಎಲ್ಲೂ ಯಾವ ಪರಿಣಾಮವನ್ನೂ ಬೀರುವುದಿಲ್ಲ. ವಿರೋಧ ಪಕ್ಷದವರು ಸೋಲಿನ ಭಯದಿಂದ ಇದಕ್ಕೆ ಬಣ್ಣ ಹಚ್ಚಿ ಟ್ವೀಟ್ ಮಾಡುತ್ತಿದ್ದಾರೆ, ಮಾಡಿಕೊಳ್ಳಲಿ” ಎಂದು ಹೇಳಿದರು.

ಕಾಮಗಾರಿ ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ 4% ಮೀಸಲಾತಿ ನೀಡುವ ಪ್ರಸ್ತಾವನೆ ಬಗ್ಗೆ ಕೇಳಿದಾಗ, “ಇದೆಲ್ಲವೂ ಸುಳ್ಳು. ವಿರೋಧಿಗಳು ಚುನಾವಣೆ ಸಮಯದಲ್ಲಿ ಪ್ರಚಾರ ಪಡೆಯಲು ಈ ರೀತಿ ಸುಳ್ಳು ಹಬ್ಬಿಸುತ್ತಿದ್ದಾರೆ. ಅಧಿಕಾರಿಯುತ ಸ್ಥಾನದಲ್ಲಿದ್ದುಕೊಂಡು ಹೇಳುತ್ತಿದ್ದೇನೆ, ನಮ್ಮ ಸರ್ಕಾರದ ಮುಂದೆ ಅಂತಹ ಯಾವುದೇ ಪ್ರಸ್ತಾವನೆಗಳಿಲ್ಲ. ಈ ಹಿಂದೆ ಪರಿಶಿಷ್ಟ ಜಾತಿಯವರಿಗೆ ಈ ಅವಕಾಶ ನೀಡಲು ಮುಂದಾಗಿದ್ದೆವು. ಅದರ ಹೊರತಾಗಿ ಅಲ್ಪಸಂಖ್ಯಾತರು, ಮುಸಲ್ಮಾನರಿಗೆ ಈ ಮೀಸಲಾತಿ ನೀಡುವ ಚರ್ಚೆ ಇಲ್ಲ” ಎಂದು ಸ್ಪಷ್ಟನೆ ನೀಡಿದರು.

ಸೋಲುವ ಭಯದಿಂದ ಬಿಜೆಪಿ ಸುಳ್ಳಿನ ಕಂತೆ:

“ಚುನಾವಣೆ ಸಮಯದಲ್ಲಿ ಬಿಜೆಪಿ ಇಂತಹ ಸುಳ್ಳು ಹಬ್ಬಿಸುತ್ತಿದ್ದಾರೆ. ಚುನಾವಣೆ ಸೋಲುವ ಭಯದಿಂದ ಬೆಳ್ಳಿ ಬಟ್ಟಲು, ದೇವರ ಫೋಟೊ, ಹರಿಷಿನ ಕುಂಕುಮ, ಹಣ ಹಂಚಿ ಚುನಾವಣೆ ಮಾಡುತ್ತಿದ್ದಾರೆ. ಅವರು ಮಾತನಾಡುತ್ತಿರುವುದೆಲ್ಲಾ ಸುಳ್ಳಿನ ಕಂತೆ” ಎಂದು ವಾಗ್ದಾಳಿ ನಡೆಸಿದರು.

ರಾಜ್ಯ, ಜನರ ಹಿತ ಕಾಯುತ್ತೇವೆ: ಬಂಡೀಪುರ ರಸ್ತೆಯಲ್ಲಿ ರಾತ್ರಿ ಸಂಚಾರಕ್ಕೆ ಮತ್ತೆ ಅವಕಾಶ ನೀಡಲಾಗುವುದೇ ಎಂದು ಕೇಳಿದಾಗ, “ಬಂಡೀಪುರ ಭಾಗದ ಜನಪ್ರತಿನಿಧಿಗಳು ನನ್ನ ಬಳಿ ಚರ್ಚೆ ಮಾಡಿದ್ದು, ಎರಡೂ ರಾಜ್ಯಗಳ ಸರ್ಕಾರಗಳ ಜತೆ ಚರ್ಚೆ ಮಾಡಿ, ಎರಡೂ ರಾಜ್ಯಗಳಿಗೂ ಯಾವರೀತಿ ಅನುಕೂಲ ಮಾಡಿಕೊಡಲಾಗುವುದು ಎಂದು ತೀರ್ಮಾನ ಮಾಡಲಾಗುವುದು.ರಾಜ್ಯದ ಹಿತ, ಜನರ ಹಿತ ಕಾಪಾಡಿಕೊಂಡು ಪರಿಶೀಲನೆ ಮಾಡಲಾಗುವುದು” ಎಂದು ತಿಳಿಸಿದರು.

ತಮ್ಮದು ಹಿಟ್ಲರ್, ಕೊತ್ವಾಲ್ ಸಂಸ್ಕೃತಿ ಎಂದು ಬಿಜೆಪಿ ಟ್ವೀಟ್ ಮಾಡಿರುವ ಬಗ್ಗೆ ಕೇಳಿದಾಗ, “ಅವರು ನನಗೆ ಹಿಟ್ಲರ್ ಹೆಸರು ನೀಡುತ್ತಿದ್ದಾರಲ್ಲಾ ನಾನು ಅದನ್ನು ಸ್ವೀಕರಿಸುತ್ತೇನೆ. ನನ್ನ ಮನೆ ಮುಂದೆ ಬೋರ್ಡ್ ತಂದು ಹಾಕಲಿ” ಎಂದು ತಿಳಿಸಿದರು.

Tags: BJP lies.Congress PartyElectionFear of losingJameer Ahmed Khanrelationship between Kumaraswamy
Previous Post

ಟ್ರಂಪ್ 1.0 ನಲ್ಲಿ ಜಿಎಸ್‌ಪಿ ಸ್ಥಿತಿಯನ್ನು ಹಿಂತೆಗೆದುಕೊಂಡರೂ, ಭಾರತ-ಯುಎಸ್ ವ್ಯಾಪಾರವು ಹೆಚ್ಚಾಯಿತು, ಟ್ರಂಪ್ 2.0 ಪ್ರವೃತ್ತಿಯನ್ನು ಮುಂದುವರಿಸಬಹುದು: ಎಸ್‌ಬಿಐ

Next Post

ವಿಜಯದಾಸರ ಆರಾಧನಾ ಪರ್ವಕಾಲದಲ್ಲೇ “ದಾಸವರೇಣ್ಯ ಶ್ರೀ ವಿಜಯ ದಾಸರು” ಚಿತ್ರದ ಎರಡನೇ ಭಾಗಕ್ಕೆ ಚಾಲನೆ‌

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
Next Post

ವಿಜಯದಾಸರ ಆರಾಧನಾ ಪರ್ವಕಾಲದಲ್ಲೇ "ದಾಸವರೇಣ್ಯ ಶ್ರೀ ವಿಜಯ ದಾಸರು" ಚಿತ್ರದ ಎರಡನೇ ಭಾಗಕ್ಕೆ ಚಾಲನೆ‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada