• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯಕ್ಕೆ ಬಂದ ಲೋಕಸಭೆ ಸಭಾಧ್ಯಕ್ಷರಿಗೆ ಅಗೌರವ ಸಲ್ಲ: ಜಂಟಿ ಕಲಾಪಕ್ಕೆ ಜೆಡಿಎಸ್ ಹಾಜರಿ ಬಗ್ಗೆ ಕಾರಣ ಕೊಟ್ಟ ಹೆಚ್.ಡಿ.ಕೆ

Any Mind by Any Mind
September 24, 2021
in ಕರ್ನಾಟಕ
0
ರಾಜ್ಯಕ್ಕೆ ಬಂದ ಲೋಕಸಭೆ ಸಭಾಧ್ಯಕ್ಷರಿಗೆ ಅಗೌರವ ಸಲ್ಲ: ಜಂಟಿ ಕಲಾಪಕ್ಕೆ ಜೆಡಿಎಸ್ ಹಾಜರಿ ಬಗ್ಗೆ ಕಾರಣ ಕೊಟ್ಟ ಹೆಚ್.ಡಿ.ಕೆ
Share on WhatsAppShare on FacebookShare on Telegram

ಲೋಕಸಭೆ ಸಭಾಧ್ಯಕ್ಷರು ಹಾಗೂ ಅವರು ಅಲಂಕರಿಸಿರುವ ಪೀಠಕ್ಕೆ ಅಗೌರವ ತೋರಬಾರದು ಎನ್ನುವ ಒಂದೇ ಕಾರಣಕ್ಕೆ ಇಂದು ನಡೆದ ವಿಧಾನಮಂಡಲ ಜಂಟಿ ಅಧಿವೇಶನ ಕಲಾಪದಲ್ಲಿ ಜೆಡಿಎಸ್ ಪಕ್ಷದ ಶಾಸಕರು ಪಾಲ್ಗೊಂಡಿದ್ದರು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳೂ ಆದ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ADVERTISEMENT

ಕಲಾಪದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, “ರಾಜ್ಯದ ಸಂಸದೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರು ಲೋಕಸಭೆಯ ಸಭಾಧ್ಯಕ್ಷರನ್ನು ಆಹ್ವಾನಿಸಿ ಜಂಟಿ ಅಧಿವೇಶವನ್ನು ಆಯೋಜಿಸಿದ್ದಾರೆ. ಇಂಥ ಅಪರೂಪದ ಸಂದರ್ಭದಲ್ಲಿ ಗೈರು ಹಾಜರಾಗುವುದು ಎಂದರೆ ಲೋಕಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿದಂತೆ. ಹೀಗೆ ಆಗುವುದು ಬೇಡ ಹಾಗೂ ಸಂಸದೀಯ, ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿಹಿಡಿಯುವ ಏಕೈಕ ಉದ್ದೇಶದಿಂದ ಕಲಾಪದಲ್ಲಿ ನಮ್ಮ ಪಕ್ಷ ಭಾಗವಹಿಸಿತು” ಎಂದಿದ್ದಾರೆ.

ಸಂಸದೀಯ ವ್ಯವಸ್ಥೆಯಲ್ಲಿ ಈ ರೀತಿಯಲ್ಲಿ ಲೋಕಸಭೆಯ ಅಧ್ಯಕ್ಷರು ವಿಧಾನ ಮಂಡಲ ಜಂಟು ಕಲಾಪವನ್ನು ಉದ್ದೇಶಿಸಿ ಮಾತನಾಡಲು ಅವಕಾಶ ಇಲ್ಲ ಎನ್ನುವ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ಈ ಬಗ್ಗೆ ಸಾಂವಿಧಾನಿಕ ತಜ್ಞರೇ ಉತ್ತರ ನೀಡಲಿ ಎಂದಿದ್ದಾರೆ.

ಇನ್ನು, ಕಾಂಗ್ರೆಸ್ ಪಕ್ಷದ ಸದಸ್ಯರು ಜಂಟಿ ಕಲಾಪವನ್ನು ಬಹಿಷ್ಕರಿಸಿದ್ದರಲ್ಲಾ ಎಂಬ ಪ್ರಶ್ನೆಗೆ, ಅದು ಆ ಪಕ್ಷಕ್ಕೆ ಬಿಟ್ಟ ವಿಚಾರ. ನಮ್ಮ ಪಕ್ಷದ ನಿಲುವನ್ನು ನಾವು ತೆಗೆದುಕೊಂಡಿದ್ದೇವೆ ಎಂದು ಉತ್ತರಿಸಿದರು ಹೆಚ್.ಡಿ.ಕುಮಾರಸ್ವಾಮಿ, ಸದನದ ಕಲಾಪದ ಬಗ್ಗೆ ಹೊರಗೆ ಮಾತನಾಡುವುದು ಸರಿಯಲ್ಲ. ಕಲಾಪ ಹೇಗೆ ನಡೆಯುತ್ತಿದೆ ಎಂಬುದು ರಾಜ್ಯ ಜನತೆಗೆ ಚೆನ್ನಾಗಿ ಗೊತ್ತಾಗುತ್ತಿದೆ. ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಆದರೆ, ಕಲಾಪದ ಬಗ್ಗೆ ಬಹಿರಂಗವಾಗಿ ಮಾತನಾಡಿ ಸದನಕ್ಕೆ ಅಗೌರವ ತೋರುವ ಅಥವಾ ಸದನ ಪಾವಿತ್ರ್ಯತೆಗೆ ಧಕ್ಕೆ ತರಬಾರದು ಎನ್ನುವುದು ನನ್ನ ನಿಲುವು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಭಾರತದ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ ‘ಪ್ರಜಾಪ್ರಭುತ್ವ ಮತ್ತು ಸಂಸದೀಯ ಮೌಲ್ಯಗಳ ರಕ್ಷಣೆಯ ಕುರಿತಾಗಿ ಇದೇ ಪ್ರಥಮ ಬಾರಿಗೆ ಕರ್ನಾಟಕ ವಿಧಾನಮಂಡಲ ಜಂಟಿ ಅಧಿವೇಶನವನ್ನುದ್ದೇಶಿಸಿ ಲೋಕಸಭೆ ಸಭಾಧ್ಯಕ್ಷರಾದ ಓಂ ಬಿರ್ಲಾ ಅವರು ಭಾಷಣ ಮಾಡಿದ್ದ ಮಾತನಾಡಿದರು.

Tags: ಬಿಜೆಪಿ
Previous Post

UPSC 2020 ಫಲಿತಾಂಶ ಪ್ರಕಟ : ಬಿಹಾರದ ಶುಭಂ ಫಸ್ಟ್ : ಕರ್ನಾಟಕದ ಅಕ್ಷಯ್ ಸಿಂಹಾ 77ನೇ ರ್ಯಾಂಕ್!

Next Post

ಭಾರತದಲ್ಲಿ ತಯಾರಾದ 60 ಕೋಟಿ J&J ಲಸಿಕೆಗಳು ಶ್ರೀಮಂತ ಪಶ್ಚಿಮಾತ್ಯ ದೇಶಗಳಿಗೆ ರಫ್ತು!

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

March 3, 2026
ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

March 3, 2026
Next Post
ಭಾರತದಲ್ಲಿ ತಯಾರಾದ 60 ಕೋಟಿ J&J ಲಸಿಕೆಗಳು ಶ್ರೀಮಂತ ಪಶ್ಚಿಮಾತ್ಯ ದೇಶಗಳಿಗೆ ರಫ್ತು!

ಭಾರತದಲ್ಲಿ ತಯಾರಾದ 60 ಕೋಟಿ J&J ಲಸಿಕೆಗಳು ಶ್ರೀಮಂತ ಪಶ್ಚಿಮಾತ್ಯ ದೇಶಗಳಿಗೆ ರಫ್ತು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada