• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯ ಕಾಂಗ್ರೆಸ್ ತನ್ನ ವೈಫಲ್ಯ ಮುಚ್ಚಲು ಮೋದಿ ಮೇಲೆ ವಾಗ್ದಾಳಿ ಮಾಡುತ್ತಿದೆ : ಹೆಚ್.ಡಿ ಕುಮಾರಸ್ವಾಮಿ

Any Mind by Any Mind
January 18, 2024
in ಕರ್ನಾಟಕ, ರಾಜಕೀಯ
0
ರಾಜ್ಯ ಕಾಂಗ್ರೆಸ್ ತನ್ನ ವೈಫಲ್ಯ ಮುಚ್ಚಲು ಮೋದಿ ಮೇಲೆ ವಾಗ್ದಾಳಿ ಮಾಡುತ್ತಿದೆ : ಹೆಚ್.ಡಿ ಕುಮಾರಸ್ವಾಮಿ
Share on WhatsAppShare on FacebookShare on Telegram

ನವದೆಹಲಿ: ಪ್ರಧಾನಮಂತ್ರಿಗಳನ್ನು (Prime minister) ಬಹಿರಂಗ ಚರ್ಚೆಗೆ ಕರೆದಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉದ್ಧಟತನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HDKUMARASWAMY )ಕಿಡಿಕಾರಿದರು

ADVERTISEMENT

ನವದೆಹಲಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; ರಾಜ್ಯ ಕಾಂಗ್ರೆಸ್ (Congress) ಸರಕಾರ ಹಾಗೂ ಕೇಂದ್ರ ಸರಕಾರದ ನಡುವೆ ವಿಶ್ವಾಸದ ಕೊರತೆ ಎದ್ದು ಕಾಣುತ್ತಿದೆ. ರಾಜ್ಯ ಸರಕಾರ ಪ್ರತಿಯೊಂದಕ್ಕೂ ಕೇಂದ್ರವ ಮತ್ತು ಪ್ರಧಾನಮಂತ್ರಿಗಳನ್ನು ದೂರುವ ಪರಿಪಾಠ ಬೆಳೆಸಿಕೊಂಡಿದೆ. ಇದು ಸರಿಯಲ್ಲ. ಕಾಂಗ್ರೆಸ್ ಸರಕಾರವು ತನ್ನ ಆಡಳಿತ ವೈಫಲ್ಯ, ಗ್ಯಾರಂಟಿಗಳ ವಿಫಲತೆ, ಬರಗಾಲ, ರೈತರ ಸಂಕಷ್ಟದ ಬಗ್ಗೆ ಜನರ ಗಮನವನ್ನು ಬೇರೆಡೆಗೆ ಹೊರಳಿಸುವ ಉದ್ದೇಶದಿಂದ ನಿರಂತರವಾಗಿ ಮೋದಿ ಅವರ ಮೇಲೆ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದೆ ಎಂದು ಹೇಳಿದರು.

ರಾಜ್ಯ ಸರಕಾರದ ಈ ನಡವಳಿಕೆಯ ಬಗ್ಗೆ ಕನ್ನಡಿಗರು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಉತ್ತರ ಕೊಡುತ್ತಾರೆ ಎಂದ ಅವರು; ಜನರ ಸಮಸ್ಯೆಗಳಿಗೆ ಹೇಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಸರಕಾರವೇ ಆಲೋಚನೆ ಮಾಡಬೇಕು. ಅದು ಬಿಟ್ಟು ಸುಖಾಸುಮ್ಮನೆ ಕೇಂದ್ರದ ಮೇಲೆ ಗೂಬೆ ಕುರಿಸುವುದು ಸರಿ ಅಲ್ಲ ಎಂದು ನೇರ ಮಾತುಗಳಲ್ಲಿ ಹೇಳಿದರು.

ಲೋಪ ಆಗಿರುವ ಕಡೆ ಗಮನ ಹರಿಸಿ ಸರಿ ಮಾಡಿಕೊಳ್ಳಬೇಕು. ದೆಹಲಿಗೆ ಹೋಗಿ ಚರ್ಚೆ ಮಾಡಬೇಕು. ಆದರೆ; ಮುಖ್ಯಮಂತ್ರಿಯೊಬ್ಬರು ಪ್ರಧಾನಮಂತ್ರಿಗಳನ್ನು ಬಹಿರಂಗ ಚರ್ಚೆಗೆ ಕರೆಯುವುದು ಉದ್ಧಟತನದ ಪರಮಾವಧಿ. ಇದು ಸರಿಯಾದ ನಡವಳಿಕೆ ಅಲ್ಲ. ಪ್ರಧಾನಿಗಳನ್ನು ಚರ್ಚೆಗೆ ಕರೆಯುವ ಮುನ್ನ ತಮ್ಮಿಂದ ಆಗಿರುವ ಲೋಪಗಳನ್ನು ಸರಿ ಪಡಿಸಿಕೊಳ್ಳಬೇಕಿದೆ. ಆ ಸೌಜನ್ಯವನ್ನು ಮುಖ್ಯಮಂತ್ರಿಗಳು ತೋರಿಸಬೇಕಿದೆ. ನಲವತ್ತು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್‌ ಸರಕಾರ ರಾಜ್ಯದ ನೀರಾವರಿಗೆ ಏನಾದರೂ ಕೊಡುಗೆ ನೀಡಿದೆಯಾ? ಎಂದು ಸಿಎಂ ಸಿದ್ದರಾಮಯ್ಯ ಅವರ ಹೆಸರು ಹೇಳದೆಯೇ ಟಾಂಗ್‌ ನೀಡಿದರು ಮಾಜಿ ಮುಖ್ಯಮಂತ್ರಿಗಳು.

ಬೀದಿಯಲ್ಲಿ ಚರ್ಚೆ ಮಾಡಬಾರದು:

ಪದೇ ಪದೇ ಕೇಂದ್ರದ ಜತೆ ಸಂಘರ್ಷ ಸರಿ ಅಲ್ಲ. ಇಂತಹ ಸಂಘರ್ಷದಿಂದ ಉಪಯೋಗವೂ ಇಲ್ಲ. ಕೇಂದ್ರದ ನೆರವು ಕಡಿತ ಬಗ್ಗೆ ಬೀದಿಯಲ್ಲಿ ಚರ್ಚೆ ಮಾಡಬಾರದು. ದೋಷಾರೋಪದಿಂದ ಏನಾದರೂ ಲಾಭ ಸಿಗುತ್ತದೆಯೇ? ಸಿಗುವುದಿಲ್ಲ. ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಬೇಡ ಎಂದು ಅವರು ಸಿದ್ದರಾಮಯ್ಯ (Siddaramiah) ಅವರಿಗೆ ಕುಮಾರಸ್ವಾಮಿ (Kumaraswamy) ಅವರು ಸಲಹೆ ಮಾಡಿದರು.

ಕೆಲ ರಾಜ್ಯಗಳಿಂದ ಇವರು ಪಾಠ ಕಲಿಯಬೇಕಿದೆ. ಒಡಿಶಾ ರಾಜ್ಯದಲ್ಲಿ ನವೀನ್‌ ಪಟ್ನಾಯಕ್‌ ಅವರು ಐದು ಅವಧಿಗಳಿಂದ ಸರಕಾರ ನಡೆಸುತ್ತಿದ್ದಾರೆ. ಆ ರಾಜ್ಯದಲ್ಲಿ ನಮ್ಮ ರಾಜ್ಯಕ್ಕಿಂತ ಹೆಚ್ಚು ಬಡತನ ಇದೆ. ಕೇಂದರದಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿ ಇರಲಿ ಅಥವಾ ಬಿಜೆಪಿ ಇರಲಿ.. ಅವರೆಂದೂ ಕೇಂದ್ರದ ಜತೆ ಸಂಘರ್ಷಕ್ಕೆ ಇಳಿದಿಲ್ಲ. ಸೌಹಾರ್ದತೆಯಿಂದ ಕೇಂದ್ರದಿಂದ ಸವಲತ್ತುಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಇವರು ಕೇವಲ ರಾಜಕೀಯಕ್ಕಾಗಿ ಇದನ್ನೆಲ್ಲಾ ಮಾಡುತ್ತಿದ್ದಾರೆ ಎಂದು ಎಂದು ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು.

ನಾನೂ ಎರಡು ಬಾರಿ ಕರ್ನಾಟಕದ ಮುಖ್ಯಮಂತ್ರಿ ಆಗಿದ್ದೆ. ಬಿಜೆಪಿ ಜತೆ ಸರಕಾರ ಮಾಡಿದ್ದಾಗ ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿ ಇತ್ತು. ಕಾಂಗ್ರೆಸ್‌ ಜತೆ ಸರಕಾರ ಮಾಡಿದ್ದಾಗ ಬಿಜೆಪಿ ಅಧಿಕಾರದಲ್ಲಿ ಇತ್ತು. ೨೦೧೮ರಲ್ಲಿ ನರೇಂದ್ರ ಮೋದಿ ಅವರೇ ಪ್ರಧಾನಿಗಳಾಗಿದ್ದರು. ಅವರ ಜತೆ ನಾನೆಂದೂ ಸಂಘರ್ಷಕ್ಕೆ ಹೋಗಲಿಲ್ಲ. ರಾಜ್ಯಕ್ಕೆ ಆಗಬೇಕಾದ ಎಲ್ಲಾ ಕೆಲಸಗಳು ಆದವು. ನಾನು ಕೇಳಿದಾಕ್ಷಣ ಪ್ರಧಾನಿಗಳ ಕಚೇರಿಯಿಂದ ಭೇಟಿಗೆ ಅವಕಾಶ ದೊರೆಯುತ್ತಿತ್ತು. ಇಲ್ಲಿ ನಾವು ಹೇಗೆ ನಡೆದುಕೊಳ್ಳುತ್ತೇವೆ ಎನ್ನುವುದು ಬಹಳ ಮುಖ್ಯವಾಗುತ್ತದೆ ಎಂದು ಅವರು ಸಿದ್ದರಾಮಯ್ಯ ಅವರ ವಿರುದ್ಧ ಪ್ರಹಾರ ನಡೆಸಿದರು.

ಲೋಕಸಭೆಗೆ ಸ್ಪರ್ಧೆಗೆ ಒತ್ತಡ ಇದೆ:

ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕು ಎಂದು ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಒತ್ತಡ ಹೇರುತ್ತಿದ್ದಾರೆ. ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಮಂಡ್ಯದಿಂದ ಸ್ಪರ್ಧೆ ಮಾಡುವಂತೆ ಕಾರ್ಯಕರ್ತರ ಒತ್ತಡವಿದೆ. ನನ್ನ ಸ್ಪರ್ಧೆಯ ಬಗ್ಗೆ ಸೂಕ್ತ ನಿರ್ಣಯವನ್ನು ಎರಡು ಪಕ್ಷದ ನಾಯಕರು ಕೂತು ತೀರ್ಮಾನ ಮಾಡುತ್ತಾರೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಅಯೋಧ್ಯೆಗೆ ಹೋಗುತ್ತೇನೆ:

ಶ್ರೀರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ನಾನು ಕುಟುಂಬ ಸಮೇತ ಅಯೋಧ್ಯಗೆ ಹೋಗುತ್ತೇನೆ ಎಂದು ಎಂದು ಹೇಳಿದ ಕುಮಾರಸ್ವಾಮಿ ಅವರು; ಇಡೀ ದೇಶವೇ ಹಬ್ಬದ ಸಂಭ್ರಮದಲ್ಲಿದೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಕಾತುರನಾಗಿದ್ದೇನೆ. ದೇವೇಗೌಡರು ಕೂಡ ಭಾಗಿಯಾಗುತ್ತಾರೆ. ನಮಗೆಲ್ಲರಿಗೂ ಆಹ್ವಾನ ಬಂದಿದೆ ಎಂದರು

ಸೋತ ಮಾತ್ರಕ್ಕೆ ಧೃತಿಗೆಟ್ಟು ಮನೆಯಲ್ಲಿ ಕೂರುವ ಜಾಯಮಾನ ನನ್ನದಲ್ಲ ಎಂದು ರಾಜ್ಯ ಯುವ ಜನತಾದಳದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು. ನವದೆಹಲಿಯಲ್ಲಿ ಇಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ನಿಖಿಲ್ ಅವರು ಮಾಧ್ಯಮಗೋಷ್ಠಿಯನ್ನು ಉದ್ದೇಶಿ ಮಾತನಾಡಿದರು.

ನಾನು ಪಕ್ಷದ ಕಾರ್ಯಕರ್ತನಾಗಿ ರಾಜಕಾರಣದಿಂದ ಹಿಂದೆ ಸರಿಯುವುದಿಲ್ಲ. ಎರಡು ಬಾರಿ ಚಿಕ್ಕ ವಯಸ್ಸಿನಲ್ಲಿಯೇ ಚುನಾವಣೆಯಲ್ಲಿ ಸೋಲು ಕಂಡಿದ್ದೇನೆ. ಕೆಲ ರಾಜಕೀಯ ಷಡ್ಯಂತ್ರ್ಯಕ್ಕೆ ನಾನು ಬಲಿಯಾದೆ. ನಾನು ಚುನಾವಣೆಗೆ ಸ್ಪರ್ಧೆ ಮಾಡುವ ಪ್ರಶ್ನೆ ಅಪ್ರಸ್ತುತ. ಸೋತ ಮಾತ್ರಕ್ಕೆ ಮನೆಯಲ್ಲಿ ಕೂರುವುದಿಲ್ಲ, ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.

ಮಾಧ್ಯಮಗೋಷ್ಠಿಯಲ್ಲಿ ರಾಜ್ಯ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ, ಮಾಜಿ ಸಂಸದ ಕುಪೇಂದ್ರ ರೆಡ್ಡಿ ಇತರರು ಹಾಜರಿದ್ದರು.

Previous Post

ಕೇಂದ್ರ ಮಂತ್ರಿಯಾಗುವ ಆಸಕ್ತಿ ನನಗಿಲ್ಲ ಲೋಕಸಭೆಯಲ್ಲಿ 28ಸ್ಥಾನ ಗೆಲ್ಲುವುದೇ ಮೈತ್ರಿ ಗುರಿ : ಹೆಚ್.ಡಿ ಕುಮಾರಸ್ವಾಮಿ

Next Post

ಮಠ ಹಾಗೂ ಧಾರ್ಮಿಕ ಕೇಂದ್ರಗಳಿಗೆ ಸಮಾಜ ತಿದ್ದುವ ಶಕ್ತಿಯಿದೆ : ವಿಧಾನಸಭೆ ಸಭಾಪತಿ ಯು.ಟಿ ಖಾದರ್

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post
ಉಡುಪಿಯ ಸಾಂಸ್ಕೃತಿಕ ಶ್ರೀಮಂತಿಕೆ ವಿಶ್ವಕ್ಕೇ ಮಾದರಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮಠ ಹಾಗೂ ಧಾರ್ಮಿಕ ಕೇಂದ್ರಗಳಿಗೆ ಸಮಾಜ ತಿದ್ದುವ ಶಕ್ತಿಯಿದೆ : ವಿಧಾನಸಭೆ ಸಭಾಪತಿ ಯು.ಟಿ ಖಾದರ್

Please login to join discussion

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada