• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸುಮಲತಾ ಅವರು ನನಗೂ ಅಂಬರೀಶ್‌ ಅವರ ಜತೆ ಊಟ ಬಡಿಸಿದ್ದಾರೆ, ಹೆಚ್.ಡಿ.ಕುಮಾರಸ್ವಾಮಿ..

ಪ್ರತಿಧ್ವನಿ by ಪ್ರತಿಧ್ವನಿ
March 27, 2024
in ಕರ್ನಾಟಕ, ದೇಶ, ರಾಜಕೀಯ
0
ಸುಮಲತಾ ಅವರು ನನಗೂ ಅಂಬರೀಶ್‌ ಅವರ ಜತೆ ಊಟ ಬಡಿಸಿದ್ದಾರೆ,  ಹೆಚ್.ಡಿ.ಕುಮಾರಸ್ವಾಮಿ..
Share on WhatsAppShare on FacebookShare on Telegram

ರಾಮಾಂಜನೇಯರ ನಡುವೆಯೇ ಯುದ್ಧವಾಗಿದೆ; ಹುಲು ಮಾನಾವರು, ನಾವೆಷ್ಟು?

ADVERTISEMENT

||ಸುಮಲತಾ ಅವರು ನನಗೂ ಅಂಬರೀಶ್‌ ಅವರ ಜತೆ ಊಟ ಬಡಿಸಿದ್ದಾರೆ, ಅವರ ಮೇಲೆ ನನಗೆ ಶತ್ರುತ್ವ ಇಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ||ಬೆಂಗಳೂರು: ರಾಜಕಾರಣದಲ್ಲಿ ಶತ್ರುತ್ವ ಎನ್ನುವುದು ಶಾಶ್ವತವಲ್ಲ ಎಂದು ಹೇಳಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಸುಮಲತಾ ಅವರು ನನಗೆ ಶತ್ರುವಲ್ಲ.

ಅವರನ್ನು ಭೇಟಿಯಾಗುವುದಕ್ಕೆ ಯಾವುದೇ ಹಿಂಜರಿಕೆ ಇಲ್ಲ ಎಂದಿದ್ದಾರೆ.ಮೈಸೂರಿಗೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮಗಳು; ʼಸುಮಲತಾ ಅವರ ಜೊತೆ ಯಾವಾಗ ಮಾತನಾಡುತ್ತೀರಿ?ʼ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಖಂಡಿತವಾಗಿಯೂ ಅವರು ನನಗೆ ಶತ್ರು ಅಲ್ಲ.

ಅಂಬರೀಶ್ ಬದುಕಿದ್ದಾಗ ಜೊತೆಯಲ್ಲಿ ಅವರ ಮನೆಯಲ್ಲಿ ಊಟ ಮಾಡಿದ್ದೇವೆ. ಆಗ ಸುಮಲತಾ ಅವರೇ ನಮಗೆ ಊಟ ಬಡಿಸಿದ್ದಾರೆ. ಹೀಗಿರುವಾಗ ಆಗಿ ಹೋಗಿದ್ದನ್ನೇ ಸಾಧಿಸಿಕೊಂಡು ಹೋಗುವ ಅವಶ್ಯಕತೆ ಇಲ್ಲ ಎಂದರು.ರಾಜಕೀಯ ಸನ್ನಿವೇಶ, ಆಯಾ ಸಂದರ್ಭದಲ್ಲಿ ಸಂಘರ್ಷ ಆಗಿದೆ. ಆ ರಾಮಾಂಜನೇಯರ ನಡುವೆಯೇ ಯುದ್ಧ ಆಗಿದೆಯಲ್ಲವೇ? ಅವರ ಮುಂದೆ ನಾವೆಷ್ಟು? ನಾವು ಹುಲು ಮಾನವರು. ಸಮಯ ಬಂದಾಗ ನಾನು ಸುಮಲತಾ ಅವರ ಜೊತೆ ಮಾತನಾಡುತ್ತೇನೆ ಎಂದರು ಕುಮಾರಸ್ವಾಮಿ ಅವರು.

||ಚಲುವರಾಯಸ್ವಾಮಿಗೆ ತಿರುಗೇಟು||

ಪುಟ್ಟರಾಜ ಅವರಿಗೆ ಇನ್ನೂ ಚೆನ್ನಾಗಿರುವ ವಧುವನ್ನೇ ‌ನೋಡೋಣ. ಅವರ ಬಗ್ಗೆ ಬೇರೆಯವರಿಗೆ ಚಿಂತೆ ಬೇಕಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ಅವರಿಗೆ ತಿರುಗೇಟು ಕೊಟ್ಟರು ಮಾಜಿ ಮುಖ್ಯಮಂತ್ರಿಗಳು.ಮಂಡ್ಯದ ಮೇಲೆ ಕೆಟ್ಟ ದೃಷ್ಟಿ ಬೀಳಬಾರದು ಅಂತ ಅವರು ಹೇಳಿದ್ದಾರೆ. ನನ್ನ ದೃಷ್ಟಿ ಕೆಟ್ಟದ್ದಲ್ಲ. ಅಷ್ಟು ಸಣ್ಣತನದಲ್ಲಿ ಮಾತನಾಡುವುದು ಬೇಡ ಎಂದು ಅವರಿಗೆ ಹೇಳಲು ಬಯಸುತ್ತೇನೆ ಎಂದು ಅವರು ಎಚ್ಚರಿಕೆ ನೀಡಿದರು.

||ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಬರಲಿ||

ಕೋಲಾರದಲ್ಲಿ ಕಾಂಗ್ರೆಸ್ ಟಿಕೆಟ್ ಬಗ್ಗೆ ನಡೆದಿರುವ ಹೈಡ್ರಾಮಾವನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಅಲ್ಲಿನ ರಾಜಕೀಯವನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ಹಲವಾರು ರೀತಿಯ ಬೆಳವಣಿಗೆಗಳು ಆಗಿವೆ. ಆದ್ದರಿಂದ ನಾವು ಇನ್ನು ಅಧಿಕೃತ ಘೋಷಣೆ ಮುಂದೂಡಿದ್ದೇವೆ ಅಷ್ಟೇ. ತಾವು ಯಾರನ್ನೂ ತೆಗೆದುಕೊಳ್ಳೋಕೆ ಪ್ರಯತ್ನ ಮಾಡುತ್ತಿಲ್ಲ. ನಮ್ಮಲ್ಲಿ ಇಬ್ಬರು ಅಭ್ಯರ್ಥಿಗಳಿದ್ದಾರೆ. ಪಕ್ಷದಲ್ಲಿ ಶಿಸ್ತಿನಿಂದ ಇರುವವರ ಹೆಸರನ್ನು ಘೋಷಣೆ ಮಾಡುತ್ತೇವೆ. ಯಾವುದೇ ಗೊಂದಲವಿಲ್ಲ.

ಆ ಜಿಲ್ಲೆಯ ಬೆಳವಣಿಗೆಗಳ ಬಗ್ಗೆ ಗಮನ ಇಟ್ಟಿದ್ದೇವೆ ಅಷ್ಟೇ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.ಕಾಂಗ್ರೆಸ್ ನಾಯಕರ ಒಳಜಗಳದಿಂದ ಎನ್‌ ಡಿಎ ಮೈತ್ರಿಕೂಟಕ್ಕೆ ಲಾಭವಾಗುತ್ತದೆ. ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆಯಿಂದ ನಮಗೆ ಗೆಲುವು ನಿಶ್ಚಿತ. ಅಭ್ಯರ್ಥಿಗಳ ಪಟ್ಟಿ ಸಿದ್ಧವಿದೆ ಎಂದರು ಅವರು.

Tags: 2024 electionsBJPCongress PartycontreversykumaraswamyLoksabha elections 2024Sumalata Ambarishಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ನಯಾಪೈಸೆ ಕೊಟ್ಟಿಲ್ಲ.. ಸುಳ್ಳೇ ಬಿಜೆಪಿ ಮನೆದೇವ್ರು : ಸಿಎಂ ಸಿದ್ದರಾಮಯ್ಯ

Next Post

ಕೊನೆಗೂ ಚಿತ್ರದುರ್ಗ ಟಿಕೆಟ್ ಫೈನಲ್ ಮಾಡಿದ ಬಿಜೆಪಿ ! ಗೋವಿಂದ ಕಾರಜೋಳ ಹೆಸರು ಅಂತಿಮ !

Related Posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ
ಕರ್ನಾಟಕ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

by ಪ್ರತಿಧ್ವನಿ
April 9, 2026
0

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಬಾರಿ ರಾಜ್ಯವು...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಕೊನೆಗೂ ಚಿತ್ರದುರ್ಗ ಟಿಕೆಟ್ ಫೈನಲ್ ಮಾಡಿದ ಬಿಜೆಪಿ ! ಗೋವಿಂದ ಕಾರಜೋಳ ಹೆಸರು ಅಂತಿಮ !

ಕೊನೆಗೂ ಚಿತ್ರದುರ್ಗ ಟಿಕೆಟ್ ಫೈನಲ್ ಮಾಡಿದ ಬಿಜೆಪಿ ! ಗೋವಿಂದ ಕಾರಜೋಳ ಹೆಸರು ಅಂತಿಮ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada