• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರೈತರ ವಿದ್ಯುತ್ ಸಮಸ್ಯೆಗೆ ಕುಸುಮ್ ಯೋಜನೆ ಪರಿಹಾರ: ಇಂಧನ ಸಚಿವ ಕೆ.ಜೆ.ಜಾರ್ಜ್

ಪ್ರತಿಧ್ವನಿ by ಪ್ರತಿಧ್ವನಿ
August 31, 2024
in Top Story, ಇದೀಗ, ರಾಜಕೀಯ
0
ರೈತರ ವಿದ್ಯುತ್ ಸಮಸ್ಯೆಗೆ ಕುಸುಮ್ ಯೋಜನೆ ಪರಿಹಾರ: ಇಂಧನ ಸಚಿವ ಕೆ.ಜೆ.ಜಾರ್ಜ್
Share on WhatsAppShare on FacebookShare on Telegram

ADVERTISEMENT
  • ಕುಸುಮ್ ಬಿ ಯೋಜನೆಯಡಿ ಸೌರ ಪಂಪ್ ಸೆಟ್ ಅಳವಡಿಸಿಕೊಳ್ಳುವಂತೆ ಕೋಲಾರದ ರೈತರಿಗೆ ಕರೆ
  • ಬೇಡಿಕೆಗಿಂತ ಹೆಚ್ಚು ವಿದ್ಯುತ್ ಲಭ್ಯವಿದೆ: ಸಮರ್ಪಕ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ

ಕೋಲಾರ, ವಿದ್ಯುತ್ ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ರಾಜ್ಯದಲ್ಲಿ ಕುಸುಮ್ ಬಿ ಮತ್ತು ಕುಸುಮ್ ಸಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಕೋಲಾರದಂತಹ ಜಿಲ್ಲೆಗಳಿಗೆ ಇದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಕೋಲಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಹಾಗೂ ಬೆಸ್ಕಾಂ ಮತ್ತು ಕೆಪಿಟಿಸಿಎಲ್ ಅಧಿಕಾರಿಗಳ ಜತೆ ಸಭೆ ನಡೆಸಿದ ಸಚಿವರು, “ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್ ಗಳನ್ನು ಅಳವಡಿಸಲಾಗುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರದಿಂದ ಶೇ. 30 ಮತ್ತು ರಾಜ್ಯ ಸರ್ಕಾರದಿಂದ ಶೇ. 50ರಷ್ಟು ಸಬ್ಸಿಡಿ ನೀಡಲಾಗುತ್ತಿದೆ. ಒಟ್ಟು ವೆಚ್ಚದ ಶೇ. 20ನ್ನು ಫಲಾನುಭವಿಗಳು ಭರಿಸಿದರೆ ರೈತರಿಗೆ ಸರ್ಕಾರದಿಂದಲೇ ಪಂಪ್ ಸೆಟ್ ಗಳನ್ನು ಅಳವಡಿಸಿಕೊಡಲಾಗುವುದು. ರಾಜ್ಯ ಸರ್ಕಾರ ಸಬ್ಸಿಡಿ ಹೆಚ್ಚಿಸಿರುವುದರಿಂದಲೇ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ರೈತರು ಯೋಜನೆಗೆ ನೋಂದಾಯಿಸಿದ್ದಾರೆ,” ಎಂದರು.

“ಅದೇ ರೀತಿ ಕುಸುಮ್ ಸಿ ಫೀಡರ್ ಸೋಲಾರೈಸೇಶನ್ ಯೋಜನೆಯಡಿ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಿ ಸಮೀಪದ ಸಬ್ ಸ್ಟೇಷನ್ ಗೆ ವಿದ್ಯುತ್ ಒದಗಿಸಲಾಗುತ್ತದೆ. ಆಯಾ ಸಬ್ ಸ್ಟೇಷನ್ ವ್ಯಾಪ್ತಿಯಲ್ಲೇ ಆ ವಿದ್ಯುತ್ ಪೂರೈಕೆಯಾಗುವುದರಿಂದ ಗ್ರಾಹಕರಿಗೆ ವಿದ್ಯುತ್ ಸಮಸ್ಯೆ ಇಲ್ಲದಂತಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಸೋಲಾರ್ ಘಟಕಗಳನ್ನು ಸ್ಥಾಪಿಸಲಾಗುವುದು. ಒಂದು ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಗೆ 4 ಎಕರೆ ಜಮೀನು ಬೇಕಿದ್ದು, ಖಾಸಗಿ ಭೂಮಿಗೆ ಪ್ರತಿ ಎಕರೆಗೆ ವಾರ್ಷಿಕ 25 ಸಾವಿರ ರೂ. ನೀಡಲಾಗುತ್ತದೆ. ಸರ್ಕಾರಿ ಭೂಮಿಯಾದರೆ ಇಂಧನ ಇಲಾಖೆಯಿಂದ ಜಿಲ್ಲಾಧಿಕಾರಿಗಳ ಬಳಿ ಪ್ರತಿ ಎಕರೆಗೆ 25 ಸಾವಿರ ರು. ಠೇವಣಿ ಇಟ್ಟು ಆ ಮೊತ್ತವನ್ನು ಆ ಭಾಗದ ಅಂಗನವಾಡಿ, ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಲು ವೆಚ್ಚ ಮಾಡಲಾಗುವುದು,” ಎಂದು ತಿಳಿಸಿದರು.

“ರಾಜ್ಯದಲ್ಲಿ ಪ್ರಸ್ತುತ ಬೇಡಿಕೆಗಿಂತ ಹೆಚ್ಚು ವಿದ್ಯುತ್ ಲಭ್ಯವಿದೆ. ಅದರ ಸಮರ್ಪಕ ಪೂರೈಕೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೆಚ್ಚುವರಿ ಸಬ್ ಸ್ಟೇಷನ್ ಗಳ ನಿರ್ಮಾಣ, ಟ್ರಾನ್ಸ್ ಫಾರಂಗಳ ಉನ್ನತೀಕರಣ ಮುಂತಾದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೆಚ್ಚುವರಿ ವಿದ್ಯುತ್ ಅಗತ್ಯವಿದ್ದರೆ ವಿದ್ಯುತ್ ಖರೀದಿ ಬದಲು ಇತರೆ ರಾಜ್ಯಗಳೊಂದಿಗೆ ವಿದ್ಯುತ್ ವಿನಿಮಯ ಮಾಡಿಕೊಂಡು ಇಲಾಖೆಗೆ ಹೊರೆಯಾದಗದಂತೆ ನೋಡಿಕೊಳ್ಳಲಾಗುತ್ತಿದೆ,” ಎಂದು ಹೇಳಿದರು.

ಗ್ರಾಮಗಳಿಗೆ ಪರ್ಯಾಯ ಇಂಧನ ವ್ಯವಸ್ಥೆ

“ಜಿಲ್ಲೆಯ ಅಂಚಿನಲ್ಲಿ ಇರುವ ಕೆಲವು ಗ್ರಾಮಗಳಲ್ಲಿ ಅವಿರತ ವಿದ್ಯುತ್ ಸಂಪರ್ಕ ಒದಗಿಸಲು ಸಾಧ್ಯವಾಗದಿದ್ದಲ್ಲಿ ಪರ್ಯಾಯ ಇಂಧನ ವ್ಯವಸ್ಥೆಗಳಾದ ಪವನ ವಿದ್ಯುತ್ ಅಥವಾ ಸೌರ ವಿದ್ಯುತ್ ವ್ಯವಸ್ಥೆ ಮಾಡಿಕೊಡಲಾಗುವುದು. ಇದಕ್ಕಾಗಿ ಕೇಂದ್ರ ಸರ್ಕಾರದ ಯೋಜನೆಯನ್ನು ಬಳಸಿಕೊಳ್ಳಲಾಗುವುದು,” ಎಂದು ಸಚಿವರು ತಿಳಿಸಿದರು.

“ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆ ಜಾರಿಯಲ್ಲಿರುವುದರಿಂದ ಕೇಂದ್ರ ಸರ್ಕಾರದ ಸೂರ್ಯ ಘರ್ ಯೋಜನೆಗೆ ಅಷ್ಟೊಂದು ಬೇಡಿಕೆ ಇಲ್ಲ. ಇದರ ಹೊರತಾಗಿಯೂ ಸೂರ್ಯ ಘರ್ ಯೋಜನೆ ಕುರಿತಂತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜನ ಜಾಗೃತಿ ಮೂಡಿಸಲಾಗುವುದು,” ಎಂದು ಸಚಿವರು ಮಾಹಿತಿ ನೀಡಿದರು.

ಅಧಿಕಾರಿಗಳು ಜನಪ್ರತಿನಿಧಿಗಳೊಂದಿಗೆ ಸಂರ್ಕದಲ್ಲಿರಬೇಕು
ಸಭೆಯಲ್ಲಿ ಜಿಲ್ಲೆಯ ಶಾಸಕರು ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೆಲವು ಸಮಸ್ಯೆಗಳನ್ನು ಹೇಳಿಕೊಂಡಾಗ ಪ್ರತಿಕ್ರಿಯಿಸಿದ ಸಚಿವರು, “ಜನತೆ ತಮ್ಮ ಸಮಸ್ಯೆಗಳನ್ನು ನೇರವಾಗಿ ಶಾಸಕರೊಂದಿಗೆ ಹೇಳಿಕೊಳ್ಳುತ್ತಾರೆ. ಹೀಗಾಗಿ ಅವರಿಗೆ ಸಮಸ್ಯೆಯ ಬಗ್ಗೆ ಅರಿವಿರುತ್ತದೆ. ಆದ್ದರಿಂದ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಬೆಸ್ಕಾಂ ಎಂಜಿನಿಯರ್ ಗಳು ತಮ್ಮ ವ್ಯಾಪ್ತಿಯ ಶಾಸಕರ ಜತೆ ಸಂಪರ್ಕದಲ್ಲಿದ್ದು, ಅವರ ಸಲಹೆಗಳನ್ನು ಪಡೆದು ಕೆಲಸ ನಿರ್ವಹಿಸಬೇಕು,” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಸಂಸದ ಮಲ್ಲೇಶ್ ಬಾಬು, ವಿಧಾನ ಪರಿಷತ್ ಸದಸ್ಯರೂ ಆಗಿರುವ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕೋಲಾರ ಶಾಸಕ ಕೊತ್ತೂರು ಜಿ. ಮಂಜುನಾಥ್, ಮಾಲೂರು ಶಾಸಕ ಕೆ.ವೈ.ನಂಜೇಗೌಡ, ಶ್ರೀನಿವಾಸಪುರ ಶಾಸಕ ಜಿ.ಕೆ.ವೆಂಕಟಾಶಿವಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ, ಜಿಲ್ಲಾಧಿಕಾರಿ ಅಕ್ರಂ ಪಾಷ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಸೇರಿದಂತೆ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಬಾಕ್ಸ್-

ಗೃಹಜ್ಯೋತಿ: ಕೋಲಾರ ಜಿಲ್ಲೆಗೆ 152 ಕೋಟಿ ರು. ಬಿಡುಗಡೆ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಯೋಜನೆಯಡಿ ಕೋಲಾರ ಜಿಲ್ಲೆಗೆ ಕಳೆದ ಒಂದು ವರ್ಷದಲ್ಲಿ 152 ಕೋಟಿ ರು. ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕೋಲಾರ ಜಿಲ್ಲೆಯಲ್ಲಿ 4,12,732 ಗೃಹ ಬಳಕೆದಾರರಿದ್ದು, ಈ ಪೈಕಿ 3,92,965 ಮಂದಿ ಇದಕ್ಕೆ ಅರ್ಹರಾಗಿದ್ದಾರೆ. ಅವರಲ್ಲಿ 3,66,157 ಮಂದಿ ಯೋಜನೆಯ ಫಲಾನುಭವಿಗಳಾಗಿದ್ದು, ಶೇ. 93ರಷ್ಟು ಪ್ರಗತಿ ಸಾಧಿಸಲಾಗಿದೆ. ಇವರು ಬಳಸಿದ ವಿದ್ಯುತ್ತಿನ ಮೊತ್ತ 152 ಕೋಟಿ ರು.ಅನ್ನು ಸರ್ಕಾರದಿಂದ ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.

ಬಾಕ್ಸ್-

ವಿದ್ಯುತ್ ಸಮಸ್ಯೆಯಲ್ಲ, ಜನರೇಟರ್ ಸಮಸ್ಯೆ
ಇಂಧನ ಇಲಾಖೆಗೆ ಸಂಬಂದಿಸಿದಂತೆ ತಮ್ಮ ನೇತೃತ್ವದಲ್ಲಿ ಸಭೆ ನಡೆಯುತ್ತಿರುವ ವೇಳೆ ಎರಡು ಬಾರಿ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದ್ದ ಬಗ್ಗೆ ಪ್ರತಿಕ್ರಿಯಿಸಿದ ಇಂಧನ ಸಚಿವ ಕೆ.ಜೆ.ಜಾರ್ಜ್, “ಇದು ಬೆಸ್ಕಾಂನಿಂದ ಆಗಿರುವ ಸಮಸ್ಯೆ ಅಲ್ಲ. ಜಿಲ್ಲಾ ಪಂಚಾಯ್ತಿಯಲ್ಲಿರುವ ಜನರೇಟರ್ ಕೈಕೊಟ್ಟಿದ್ದರಿಂದ ವಿದ್ಯುತ್ ಸ್ಥಗಿತಗೊಂಡಿದೆ,” ಎಂದು ಸ್ಪಷ್ಟಪಡಿಸಿದರು.

“ಸಭೆ ನಡೆಯುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜನರೇಟರ್ ಮೂಲಕ ವಿದ್ಯುತ್ ಪೂರೈಕೆ ಮಾಡಲಾಗುತ್ತಿತ್ತು. ಆದರೆ, ಜನರೇಟರ್ ಮೇಲೆ ಒತ್ತಡ ಹೆಚ್ಚಾಗಿದ್ದರಿಂದ ಅದು ಟ್ರಿಪ್ ಆಗಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿತ್ತು. ಇದರಲ್ಲಿ ಬೆಸ್ಕಾಂ ಪಾತ್ರ ಏನೂ ಇಲ್ಲ. ರಾಜ್ಯದಲ್ಲಿ ಬೇಡಿಕೆಗಿಂತ ಹೆಚ್ಚು ವಿದ್ಯುತ್ ಲಭ್ಯವಿದ್ದು, ಪೂರೈಕೆಯಲ್ಲೂ ಯಾವುದೇ ಕೊರತೆ ಇಲ್ಲ. ಹೀಗಾಗಿ ಇಂಧನ ಸಚಿವರ ಸಭೆ ವೇಳೆ ವಿದ್ಯುತ್ ಕೈಕೊಟ್ಟಿದೆ ಎಂಬುದು ಸರಿಯಲ್ಲ. ಜನರೇಟರ್ ಸಮಸ್ಯೆಗೆ ಬೆಸ್ಕಾಂ ಜವಾಬ್ದಾರಿಯಾಗುವುದಿಲ್ಲ,” ಎಂದರು

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿರೈತರ ವಿದ್ಯುತ್ ಸಮಸ್ಯೆಗೆ ಕುಸುಮ್ ಯೋಜನೆ ಪರಿಹಾರ: ಇಂಧನ ಸಚಿವ ಕೆ.ಜೆ.ಜಾರ್ಜ್
Previous Post

ಪ್ರಾಸಿಕ್ಯೂಷನ್ ಟೆನ್ಷನ್: ಹೈಕೋರ್ಟ್ ನಲ್ಲಿ ಇಂದು ಸಿದ್ದರಾಮಯ್ಯ ಭವಿಷ್ಯ!?

Next Post

CM’ ವಿರುದ್ಧದ ಪ್ರಾಸಿಕ್ಯೂಷನ್ ಪ್ರಕರಣದಲ್ಲಿ `ರಾಷ್ಟ್ರಪತಿ ದ್ರೌಪದಿ ಮುರ್ಮು’ ಎಂಟ್ರಿ : ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ!

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
Next Post

CM' ವಿರುದ್ಧದ ಪ್ರಾಸಿಕ್ಯೂಷನ್ ಪ್ರಕರಣದಲ್ಲಿ `ರಾಷ್ಟ್ರಪತಿ ದ್ರೌಪದಿ ಮುರ್ಮು' ಎಂಟ್ರಿ : ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada